ರಾಜ್ಯದಲ್ಲಿ ಕಳೆದೊಂದು ವಾರದಿಂದ ಬಿಟ್ಟುಬಿಡದೆ ಮಳೆಯಾಗುತ್ತಿದೆ. ನೈಋತ್ಯ ಮಾನ್ಸೂನ್ ಹಿಂದೆ ಸರಿಯುತ್ತಿರುವ ಹಿನ್ನೆಲೆ ಹವಾಮಾನ ಇಲಾಖೆ, ಕರ್ನಾಟಕದಲ್ಲಿ ಮಳೆ ಅಲರ್ಟ್ (Rain Alert) ಘೋಷಣೆ ಮಾಡಿತ್ತು. ಅಲ್ಲದೇ ಈಗಾಗಲೇ ರಾಜ್ಯದ ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್, ಯೆಲ್ಲೋ ಅಲರ್ಟ್, ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಭಾರತೀಯ ಹವಾಮಾನ ಇಲಾಖೆ (IMD) ಇಂದು (ಅ.21) ಕೂಡಾ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ತೀವ್ರ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕರ್ನಾಟಕದ 4 ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಅಲರ್ಟ್ ಮುಂದಿನ 24 ಗಂಟೆಗಳಲ್ಲಿ ಮಧ್ಯಮದಿಂದ ಭಾರೀ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ರಾಜ್ಯದಲ್ಲಿ ನೈಋತ್ಯ ಮುಂಗಾರು ಹಿನ್ನೆಲೆಯಲ್ಲಿ ಮಳೆ ನಿರಂತರವಾಗಿ ಸುರಿಯುವ ಸೂಚನೆಯಿದ್ದು, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 21 ಮತ್ತು 22ರಂದು ಭಾರೀ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ. ಕರಾವಳಿ ಕರ್ನಾಟಕದಲ್ಲಿ ಇಂದು ಭಾರೀ ಮಳೆ, ಗುಡುಗು ಮತ್ತು ಬಿರುಗಾಳಿ ಬೀಸಲಿದ್ದು, ದಕ್ಷಿಣ ಒಳನಾಡು ಭಾಗದಲ್ಲೂ ಅದೇ ರೀತಿಯ ಹವಾಮಾನ ಮುಂದುವರೆಯಲಿದೆ ಎನ್ನಲಾಗಿದೆ. IMD ಪ್ರಕಾರ, ಕರ್ನಾಟಕದ ಕರಾವಳಿ ಮತ್ತು ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 25ರವರೆಗೆ ಮಳೆ ಅಲರ್ಟ್ ನೀಡಲಾಗಿದೆ.
ಯಾವ ಜಿಲ್ಲೆಗಳಲ್ಲಿ ಮಳೆ ಅಲರ್ಟ್?
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ (ಕರಾವಳಿ ಜಿಲ್ಲೆಗಳು): ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಜಾರಿಯಲ್ಲಿದೆ. 7-11 ಸೆಂ.ಮೀ.ಗಿಂತ ಹೆಚ್ಚು ಮಳೆಯಾಗಲಿದೆ ಎನ್ನಲಾಗಿದೆ. ಇನ್ನು ಈ ಜಿಲ್ಲೆಗಳಲ್ಲಿ ಗಾಳಿಯ ವೇಗ ಪ್ರತಿ ಗಂಟೆಗೆ 40-50 ಕಿ.ಮೀ. ಬೀಸಲಿದೆ ಎನ್ನಲಾಗಿದೆ. ಕಡಲತೀರದಲ್ಲಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಕೊಡಗು: ಈ ಜಿಲ್ಲೆಯಲ್ಲೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಭೂಕುಸಿತದ ಅಪಾಯ ಹೆಚ್ಚಿದ್ದು, ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಬಹುದು ಎಂದು ಸೂಚನೆ ನೀಡಲಾಗಿದೆ.
ಬೆಂಗಳೂರು ಸೇರಿ ಮೈಸೂರು, ಹಾಸನ, ಚಿಕ್ಕಮಗಳೂರು ಮುಂತಾದ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇದ್ದು, ಮಧ್ಯಮ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ.
ಭಾರೀ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ನಿಲ್ಲುವುದು, ಟ್ರಾಫಿಕ್ ಜಾಮ್, ವಿದ್ಯುತ್ ಸಮಸ್ಯೆ ಮತ್ತು ಕಡಲತೀರದಲ್ಲಿ ಅಲೆಗಳ ಏರಿಕೆ ಹೆಚ್ಚಾಗಬಹುದು. ಬೆಂಗಳೂರಿನಲ್ಲಿ ಈಗಾಗಲೇ ಮಳೆಯಿಂದಾಗಿ ಕೆಲವು ಭಾಗಗಳಲ್ಲಿ ನೀರು ನಿಂತಿದ್ದು, ಮುಂದಿನ ದಿನಗಳಲ್ಲಿ ಈ ನೀರು ಮತ್ತಷ್ಟು ಹೆಚ್ಚಾಗಬಹುದು ಎನ್ನಲಾಗಿದೆ. ಅದಕ್ಕಾಗಿ ಸರ್ಕಾರ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುತ್ತದೆ. ಅಲ್ಲದೆ, ಆರೋಗ್ಯ ಇಲಾಖೆ ಮಳೆ ಸಂಬಂಧಿತ ರೋಗಗಳ ಬಗ್ಗೆ ಜಾಗೃತಿ ವಹಿಸುವಂತೆ ಸೂಚನೆ ನೀಡಲಾಗಿದೆ.
ಸಾರ್ವಜನಿಕರು ರಸ್ತೆಯಲ್ಲಿ ಸಂಚರಿಸುವಾಗ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಅಲ್ಲದೇ ಯಾವುದೇ ಪ್ಲಾನ್ ಮಾಡುವ ಮುನ್ನ ಹವಾಮಾನ ವರದಿಯನ್ನು ತಿಳಿದುಕೊಂಡು ಹೋದರೆ ಉತ್ತಮ.
More From GoodReturns

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications