ರಾಜ್ಯದಲ್ಲಿ ಮಳೆಗಾಲ ಸಂಪೂರ್ಣವಾಗಿ ಮುಗಿದು, ಚಳಿಗಾಲ (Winter) ಇದೀಗ ಶುರುವಾಗಿದೆ. ಅದರೆ ಇನ್ನೂ ಮಳೆ ನಿಲ್ಲುವಂತೆ ಕಾಣುತ್ತಿದೆ. ಇನ್ನು ಕರ್ನಾಟಕ (Karnataka) ಮಾತ್ರವಲ್ಲದೇ, ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ಭಾರೀ ಮಳೆಯಾಗಲಿದೆ (Heavy Rain ಎಂದು ಹವಾಮಾನ ಇಲಾಖೆ ಮುನ್ಸೂಚನೆ (IMD) ನೀಡಿದೆ. ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಹವಾಮಾನ ಪರಿಸ್ಥಿತಿಯಲ್ಲಿ ಬದಲಾವಣೆಯಾಗುತ್ತಿದ್ದು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಕರ್ನಾಟಕ ತಮಿಳುನಾಡು, ಕೇರಳ ಮತ್ತು ಕರಾವಳಿ ಆಂಧ್ರಪ್ರದೇಶದ ಕೆಲವು ಭಾಗಗಳಲ್ಲೂ ಹವಾಮಾನ ಪರಿಸ್ಥಿತಿ ಮೇಳೆ ಪರಿಣಾಮ ಬೀರಲಿದೆ.

ಭಾರತೀಯ ಹವಾಮಾನ ಇಲಾಖೆ (IMD) ಹೊರಡಿಸಿದ ತನ್ನ ವರದಿಯಲ್ಲಿ ನವೆಂಬರ್ 22 ರಿಂದ 25 ರವರೆಗೆ ಭಾರೀ ಮಳೆ, ಗುಡುಗು ಸಹಿತ ಬಿರುಗಾಳಿ ಬೀಡಸುವ ಎಚ್ಚರಿಕೆ ನೀಡಿದೆ..
IMD ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಕಡಿಮೆ ಒತ್ತಡದ ಪ್ರದೇಶ ರೂಪುಗೊಳ್ಳುವ ಸಾಧ್ಯತೆಯಿದೆ. ಈ ವ್ಯವಸ್ಥೆಯು ನವೆಂಬರ್ 24 ರೊಳಗೆ ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿ ಪರಿಣಮಿಸಬಹುದು. ಈ ಪರಿಣಾಮ ಇತರ ರಾಜ್ಯಗಳಲ್ಲಿ ಮಳೆಯಾಗಲಿದೆ.
ಗುಡುಗು ಸಹಿತ ಭಾರೀ ಮಳೆ!
ರಾಜ್ಯದಲ್ಲಿ ಭಾರೀ ಮಳೆಯ ಜೊತೆಗೆ, ಗುಡು ಸಹಿತ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಪ್ರಕಾರ, ದಕ್ಷಿಣ ಕನ್ನಡ, ಉಡುಪಿ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.
ಇನ್ನು ರಾಮನಗರ, ಮಂಡ್ಯ, ಮೈಸೂರು, ಹಾಸನ, ಕೊಡಗು, ತುಮಕೂರು, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಧ್ಯಮದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗುವ ಚಂಡಮಾರುತದಿಂದ ಈ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಹೇಗಿರಲಿದೆ ಮಳೆ?
ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಐಎಂಡಿ ಸೂಚನೆ ನೀಡಿದೆ. ಅಲ್ಲದೇ ಚಳಿಯ ವಾತಾವರಣ ಇರಲಿದ್ದು, ಮೋಡ ಕವಿದ ವಾತಾವರಣವೂ ಇರಲಿದೆ ಎನ್ನಲಾಗಿದೆ.
ಈ ಜಿಲ್ಲೆಗಳಲ್ಲಿ ಒಣ ಹವೆ
ರಾಜ್ಯದ ಹಲವೆಡೆ ಮಳೆಯಾದರೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ಬೆಳಗಾವಿ, ವಿಜಯಪುರ, ಹಾವೇರಿ, ಧಾರವಾಡ, ಕೊಪ್ಪಳ, ರಾಯಚೂರು, ವಿಜಯನಗರ, ಬೀದರ್, ಬಾಗಲಕೋಟೆ, ಗದಗ, ಕಲಬುರಗಿ, ಬಳ್ಳಾರಿ, ಯಾದಗಿರಿ ಜಿಲ್ಲೆಗಳಲ್ಲಿ ಸಂಪೂರ್ಣವಾಗಿ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ವರಿ ಮಾಡಿದೆ.
ಭಾರತದ ಅತಿ ಹೆಚ್ಚು ಭೇಟಿ ನೀಡುವ ಪ್ರವಾಸಿ ರಾಜ್ಯಗಳಲ್ಲಿ ಕೇರಳ ಕೂಡಾ ಒಂದು. ಆದರೆ ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಕೇರಳದಲ್ಲಿ ನವೆಂಬರ್ 22 ಮತ್ತು 23 ರಂದು ಭಾರೀ ಮಳೆಯಾಗಬಹುದು. ಇದು ಕೊಚ್ಚಿ, ಕೋವಲಂ, ವರ್ಕಳ, ಆಲೆಪ್ಪಿ ಮತ್ತು ಹಿನ್ನೀರಿನ ಸರ್ಕ್ಯೂಟ್‌ಗೆ ಪ್ರಯಾಣಿಸುವವರ ಮೇಲೆ ಪರಿಣಾಮ ಬೀರಬಹುದು. ಈ ಹಿನ್ನೆಲೆ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚಿಸಿದೆ.


Click it and Unblock the Notifications