Heavy Rain: ಇನ್ನೂ 4 ದಿನ ಈ ಜಿಲ್ಲೆಗಳಲ್ಲಿ ವರುಣಾರ್ಭಟ ಫಿಕ್ಸ್!‌ ಜನರೇ ಎಚ್ಚರ..

ಕರ್ನಾಟಕ (Karnataka) ಮಾತ್ರವಲ್ಲದೇ ದೇಶದ ಹಲವು ರಾಜ್ಯಗಳಲ್ಲ ಕಳೆದೊಂದು ವಾರದಿಂದ ಭಾರೀ ಮಳೆಯಾಗುತ್ತಿದೆ. ಆರಂಭದಲ್ಲಿ ನೈಋತ್ಯ ಮಾನ್ಸೂನ್‌ (Monsoon) ಹಿಂದೆ ಸರಿಯುತ್ತಿರುವ ಹಿನ್ನೆಲೆ ಮಳೆ ಎಚ್ಚರಿಕೆ ನೀಡಲಾಗಿತ್ತು. ಆದ್ರೆ ಇದೀಗ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಧ್ಯಮದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಇನ್ನೂ 4 ದಿನ ಈ ಜಿಲ್ಲೆಗಳಲ್ಲಿ ವರುಣಾರ್ಭಟ ಫಿಕ್ಸ್!‌ ಜನರೇ ಎಚ್ಚರ..

ಹವಾಮಾನ ಇಲಾಖೆಯಿಂದ ಎಚ್ಚರಿಕೆ!
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಪ್ರಕಾರ, ಇತ್ತೀಚಿಗೆ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಹವಾಮಾನದಲ್ಲಿ ಭಾರೀ ಪರಿಣಾಮ ಬೀಳಲಿದೆ. ಆದ್ದರಿಂದ ಬೆಂಗಳೂರಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಇನ್ನು ಹವಾಮಾನ ಮುನ್ಸೂಚನೆ ಪ್ರಕಾರ, ಅಕ್ಟೋಬರ್ 27 ರವರೆಗೆ ರಾಜ್ಯದಲ್ಲಿ ವರುಣಾರ್ಭಟ ಇರಲಿದೆ. ಕರಾವಳಿ ಕರ್ನಾಟಕ, ಉತ್ತರ ಒಳನಾಡಿನ ಪ್ರದೇಶಗಳು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಜೋರಾಗಿಯೇ ಸುರಿಯಲಿದೆ ಎಂದು ವರದಿಯಾಗಿದೆ.

ಬಂಗಾಳ ಕೊಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಾದ ವಾಯುಭಾರ ಕುಸಿತವು ಈ ಮಳೆಗೆ ಕಾರಣವಾಗಿದ್ದು, ಮುಂದಿನ ಕೆಲವು ದಿನಗಳವರೆಗೆ ಈ ಮಳೆ ಮುಂದುವರೆಯಲಿದೆ ಎಂದು ವರದಿಯಾಗಿದೆ.

ಮಳೆಯಾರ್ಭಟ ಇನ್ನು ಶುರು:
ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್‌ 30ರವರೆಗೂ ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಅದೇ ರೀತಿ ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಬಾಗಲಕೋಟೆ, ಗದಗ, ಹಾವೇರಿ, ವಿಜಯಪುರ, ಯಾದಗಿರಿ, ಕಲಬುರಗಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಅಕ್ಟೋಬರ್ 30ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನಲ್ಲೂ ಮಳೆ:
ಕರಾವಳಿ ಮಾತ್ರವಲ್ಲದೇ, ದಕ್ಷಿಣ ಒಳನಾಡಿಲ್ಲೂ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಬೆಂಗಳೂರು, ಚಾಮರಾಜನಗರ, ಬಳ್ಳಾರಿ, ಚಿಕ್ಕಬಳ್ಳಾಪುರ, ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ತುಮಕೂರು, ವಿಜಯನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಇನ್ನಬು ಈಗಾಗಲೇ ಮಳೆಯಾರ್ಭಟದಿಂದಾಗಿ ಹಲವು ಕಡೆ ಬೆಳೆ ಹಾನಿ, ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದೆ. ಆದ್ದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಾರ್ವಜನಿಕರಿಗೆ ಸಲಹೆ:

ಇತ್ತೀಚೆಗೆ ರಾಜ್ಯದಲ್ಲಿ ಮಳೆ ಹೆಚ್ಚಾಗಿರುವುದರಿಂದ ಅಲ್ಲಲ್ಲಿ ನೀರು ನಿಲ್ಲುವುದು, ಸಂಚಾರ ದಟ್ಟಣೆ ಹೀಗೆ ಅನೇಕ ಸಮಸ್ಯೆಗಳು ತಲೆದೋರುತ್ತವೆ. ಆದ್ದರಿಂದ ಎಲ್ಲಾದರೂ ಹೋಗುವ ಮುನ್ನ, ಮಳೆ ಮುನ್ಸೂಚನೆ, ಟ್ರಾಫಿಕ್‌ ಸಮಸ್ಯೆಗಳ ಬಗ್ಗೆ ಮೊದಲೇ ತಿಳಿದುಕೊಳ್ಳಿ. ಬೆಂಗಳೂರಿನಲ್ಲಿ ಮಳೆ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಪರಿಣಾಮ ರಸ್ತೆಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಹೆಚ್ಚಿದೆ. ಅದರಲ್ಲೂ ರಸ್ತೆಗುಂಡಿಗಳು ದೊಡ್ಡದಾಗಿದ್ದು, ಚಾಲಕರು ಎಚ್ಚರಿಕೆಯಿಂದ ವಾಹನ ಚಲಾಯಿಸಿ ಎಂದು ಸಲಹೆ ನೀಡಲಾಗಿದೆ. ಈ ಮೂಲಕ ಮಳೆಯಿಂದಾಗು ಅವಾಂತರಗಳನ್ನು ತಪ್ಪಿಸಬಹುದು. ಹೆಚ್ಚು ಮಳೆ ಬೀಳುವ ಸಂದರ್ಭದಲ್ಲಿ ಮನೆಯಿಂದ ಹೊರಹೋಗುವುದನ್ನು ಆದಷ್ಟು ತಪ್ಪಿಸಿ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+