Rain Alert: ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನ ಭಾರೀ ಮಳೆ! ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ದೇಶದೆಲ್ಲೆಡೆ ಚಳಿಯ ವಾತಾವರಣ (Winter Season) ಶುರುವಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ಚಳಿ ನಿರೀಕ್ಷೆಗೂ ಮೀರಿದೆ. ಆದ್ರೆ ಇದೀಗ ಚಳಿಗಾಲ ಆರಂಭವಾದರೂ ಮಳೆರಾಯನ ಆಗಮನದ ಸುದ್ದಿ ಹವಾಮಾನ ಇಲಾಖೆ ನೀಡಿದೆ. ಅಂದರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನ ಭಾರೀ ಮಳೆ!

ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ. ಇನ್ನು ಈ ಹವಾಮಾನ ಬದಲಾವಣೆಯಿಂದ ಕೆಲವು ನಗರಗಳಲ್ಲಿ ತಾಪಮಾನ ಎರಡರಿಂದ ಮೂರು ಡಿಗ್ರಿ ಸೆಲ್ಸಿಯಸ್‌ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಈ ಭಾಗದಲ್ಲಿ ಮಳೆ ಅಲರ್ಟ್‌!
ಉಡುಪಿ, ಕೊಡಗು, ಚಾಮರಾಜನಗರ, ದಕ್ಷಿಣ ಕನ್ನಡ, ಮಂಡ್ಯ, ಮೈಸೂರು ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಮುಂದಿನ ಎರಡರಿಂದ ಮೂರು ದಿನಗಳವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಆದ್ದರಿಂದ ಜಿಲ್ಲಾಡಳಿತಗಳು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದೆ. ಅಲ್ಲದೇ ಸಮಸ್ಯೆಗಳನ್ನು ತಪ್ಪಿಸಲು ಹವಾಮಾನ ಇಲಾಖೆಯ ಮುನ್ಸೂಚನೆಯನ್ನು ಪಾಲಿಸುವಂತೆ ಸೂಚನೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ?
ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಮುಂದಿನ ಕೆಲವು ದಿನಗಳವರೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ. ಆದ್ದರಿಂದ ಬೆಂಗಳೂರಿನಲ್ಲಿ ಮುಂದಿನ ಕೆಲವು ದಿನಗಳವರೆಗೆ ಮೋಡ ಕವಿದ ವಾತಾವರಣ ಮತ್ತು ತಂಪಾದ ಗಾಳಿ ಬೀಸುವ ನಿರೀಕ್ಷೆಯಿದೆ.

ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ರಾಮನಗರ, ತುಮಕೂರು, ವಿಜಯನಗರ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹೇಳಲಾಗಿದೆ. ಅಲ್ಲದೇ ಕಲಬುರಗಿ, ಬೀದರ್‌, ವಿಜಯಪುರ, ಬೆಳಗಾವಿಯಲ್ಲಿ ಒಣಹವೆ ಇರಲಿದೆ.ತಮಿಳುನಾಡಿನಲ್ಲೂ ಭಾರೀ ಮಳೆ!
ತಮಿಳುನಾಡಿನಲ್ಲೂ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಇದೀಗ ಇಂದೂ ಕೂಡಾ ತಮಿಳುನಾಡಿನ 10 ಜಿಲ್ಲೆಗಳಲ್ಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಚೆನ್ನೈ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಆಗ್ನೇಯ ಅರಬ್ಬೀ ಸಮುದ್ರದಲ್ಲಾಗುವ ಒತ್ತಡದಿಂದ, ವಾಯುಭಾರ ಕುಸಿತವಾಗುವ ನಿರೀಕ್ಷೆಯಿದೆ. ಈ ಪರಿಣಾಮ ತೆಂಕಸಿ, ವಿರುಧುನಗರ, ತಿರುನಲ್ವೇಲಿ, ಕನ್ಯಾಕುಮಾರಿ ಮತ್ತು ತೂತುಕುಡಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಅಲ್ಲದೇ ರಾಮನಾಥಪುರಂ, ಕಡಲೂರು, ಮೈಲಾಡುತುರೈ, ನಾಗಪಟ್ಟಣಂ, ತಿರುವರೂರು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೇರಳದಲ್ಲೂ ಭಾರೀ ಮಳೆ!
ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಸೂಚನೆ ಹೊರಡಿಸಿದೆ. ಹವಾಮಾನ ಇಲಾಖೆಯ ಎಚ್ಚರಿಕೆ ಪ್ರಕಾರ, ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+