ದೇಶದ ಹವಾಮಾನ ಪರಿಸ್ಥಿತಿ ತೀವ್ರವಾಗಿಬಿಟ್ಟಿದೆ. ನೈಋತ್ಯ ಮಾನ್ಸೂನ್ ಹಿಂದೆ ಸರಿಯುತ್ತಿರುವ ಹಿನ್ನೆಲೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಈ ಪರಿಣಾಮ ಭಾರತೀಯ ಹವಾಮಾನ ಇಲಾಖೆ ಮಳೆ ಎಚ್ಚರಿಕೆಯನ್ನೂ ನೀಡಿದೆ. ಭಾರತೀಯ ಹವಾಮಾನ ಇಲಾಖೆ (IMD) ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಈ ಪರಿಣಾಮ ಕೇರಳದ ಮೂರು ಜಿಲ್ಲೆಗಳಾದ ಇಡುಕ್ಕಿ, ಮಲಪ್ಪುರಂ, ಪಾಲಕ್ಕಾಡ್ ಮತ್ತು ಪತ್ತನಂತಿಟ್ಟ ಜಿಲ್ಲೆಗಳಲ್ಲಿ ಶಾಲೆಗಳಿಗೆ ಬುಧವಾರ (ಅಕ್ಟೋಬರ್ 22, 2025) ರಜೆ ಘೋಷಿಸಲಾಗಿದೆ (School Holiday). ಕೇರಳದ ರಾಜ್ಯ ಸರ್ಕಾರವು (Kerala Govt) ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಂಡಿದೆ.

ಕೇರಳದಲ್ಲಿ ಇಲ್ಲೆಲ್ಲಾ ರಜೆ!
ಕೇಂದ್ರ ಹವಾಮಾನ ಇಲಾಖೆ ಹೊರಡಿಸಿರುವ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ, ಇಡುಕ್ಕಿ ಜಿಲ್ಲೆಯ ವೃತ್ತಿಪರ ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಇಂದು (22-10-2025) ರಜೆ ಘೋಷಣೆ ಮಾಡಲಾಗಿದೆ.
ಇನ್ನು ಕೇರಳದ ಪಾಲಕ್ಕಾಡ್‌ನಲ್ಲಿ ಇಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಈ ಪರಿಣಾಮ ವೃತ್ತಿಪರ ಕಾಲೇಜುಗಳು ಸೇರಿದಂತೆ ಜಿಲ್ಲೆಯ ಶಿಕ್ಷಣ ಸಂಸ್ಥೆಗಳು ಇಂದು (ಅಕ್ಟೋಬರ್ 22) ಮುಚ್ಚಿರುತ್ತದೆ ಎಂದು ಜಿಲ್ಲಾಧಿಕಾರಿ ಘೋಷಿಸಿದ್ದಾರೆ. ಆದರೆ ವಸತಿ ಶಾಲೆಗಳು ಮತ್ತು ನವೋದಯ ವಿದ್ಯಾಲಯಗಳಿಗೆ ರಜೆ ಅನ್ವಯಿಸುವುದಿಲ್ಲ.
ಪತ್ತಣಂತಿಟ್ಟದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ, ಜಿಲ್ಲಾಧಿಕಾರಿಗಳು ಇಂದು ವೃತ್ತಿಪರ ಕಾಲೇಜುಗಳವರೆಗೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಲ್ಲದೇ ಈ ರಜೆ ಬೋಧನಾ ಕೇಂದ್ರಗಳು ಮತ್ತು ಅಂಗನವಾಡಿಗಳಿಗೆ ಅನ್ವಯಿಸುತ್ತದೆ. ಈ ಮಧ್ಯೆ, ಈ ಹಿಂದೆ ನಿಗದಿಪಡಿಸಲಾದ ಸಾರ್ವಜನಿಕ ಪರೀಕ್ಷೆಗಳು ಮತ್ತು ವಿಶ್ವವಿದ್ಯಾಲಯ ಪರೀಕ್ಷೆಗಳಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ ಎಂದು ಸೂಚನೆ ನೀಡಲಾಗಿದೆ.
ಮಲಪ್ಪುರಂ ಜಿಲ್ಲೆಯಲ್ಲೂ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಈ ಹಿನ್ನೆಲೆ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮಲಪ್ಪುರಂ ಜಿಲ್ಲೆಯಲ್ಲಿ ಇಂದು (ಬುಧವಾರ, 22-10-2025) ವೃತ್ತಿಪರ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿದೆ. ಶಾಲೆಗಳ ಜೊತೆಗೆ ಅಂಗನವಾಡಿಗಳು, ಮದರಸಾಗಳು ಮತ್ತು ಬೋಧನಾ ಕೇಂದ್ರಗಳಿಗೂ ರಜೆ ಅನ್ವಯಿಸುತ್ತದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಮುಂದಿನ ದಿನಗಳ ಮುನ್ಸೂಚನೆ
ಐಎಂಡಿ ಪ್ರಕಾರ, ಗುರುವಾರದವರೆಗೂ ಕೇರಳದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯ ಸರ್ಕಾರವು ಈಗಾಗಲೇ ಜಿಲ್ಲಾಡಳಿತಗಳಿಗೆ ಎಚ್ಚರಿಕೆ ನೀಡಿದ್ದು, ಎಚ್ಚರಿಕೆಯನ್ನು ಸೂಚಿಸಿದೆ. ಜನರಿಗೆ ಐಎಂಡಿಯ ಎಚ್ಚರಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಸುರಕ್ಷಿತವಾಗಿರಲು ಕೇರಳ ಸರ್ಕಾರವು ಮನವಿ ಮಾಡಿದೆ. ಇನ್ನು ಭಾರೀ ಮಳೆಯಿಂದಾ ರಾಜ್ಯದ ಮಾರುಕಟ್ಟೆಗಳಲ್ಲೂ ಭಾರೀ ಸಮಸ್ಯೆ ಉಂಟಾಗಲಿದ್ದು, ವ್ಯಾಪಾರಕ್ಕೂ ಮಳೆ ಅಡ್ಡಿಯಾಗಲಿದೆ.
ಮಳೆ ಹಿನ್ನೆಲೆ ಕರ್ನಾಟಕದಲ್ಲೂ ಅಲರ್ಟ್ ಘೋಷಿಸಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಕಳೆದೊಂದು ವಾರದಿಂದ ಕರ್ನಾಟಕದ ಹಲವೆಡೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆ ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.


Click it and Unblock the Notifications