ಅದಾನಿ ಗ್ರೂಪ್ ಸ್ಟಾಕ್ ಮಾರುಕಟ್ಟೆಯಲ್ಲಿ ಹಲವಾರು ವಂಚಣೆಗಳನ್ನು ಮಾಡಿದೆ ಎಂದು ಹಿಂಡನ್‌ಬರ್ಗ್ ಜನವರಿ ತಿಂಗಳಲ್ಲಿ ವರದಿ ಮಾಡಿದೆ. ಇದು ಭಾರತ ಮಾತ್ರವಲ್ಲದೇ ಜಾಗತಿಕ ಮಟ್ಟದಲ್ಲಿ ಭಾರೀ ಸಂಚಲವನ್ನು ಮೂಡಿಸಿದೆ. ಅದಾನಿ ಗ್ರೂಪ್ ವಿರುದ್ಧದ ತನಿಖೆಗೆ ವಿರೋಧ ಪಕ್ಷಗಳು ಸದನದಲ್ಲಿ ಆಗ್ರಹಿಸಿದೆ. ಇದಾದ ಬೆನ್ನಲ್ಲೇ ಈಗ ಸುಪ್ರೀಂ ಕೋರ್ಟ್ ಅದಾನಿ ಗ್ರೂಪ್ ವಿರುದ್ಧದ ಮಾರುಕಟ್ಟೆ ನಿಯಂತ್ರಕ ಸಂಸ್ಥೆ ಸೆಬಿ ತನಿಖಗೆ ಆದೇಶ ನೀಡಿದೆ.
ಸೆಬಿ ನಿಯಮದ ಸೆಕ್ಷನ್ 19 ಅನ್ನು ಅದಾನಿ ಗ್ರೂಪ್ ಉಲ್ಲಂಘನೆ ಮಾಡಿದೆಯೇ?, ಸ್ಟಾಕ್ ಮಾರುಕಟ್ಟೆಯಲ್ಲಿ ಯಾವುದೇ ಮ್ಯಾನಿಪುಲೇಷನ್‌ನಲ್ಲಿ ಅದಾನಿ ಗ್ರೂಪ್ ತೊಡಗಿದೆಯೇ ಎಂಬ ಬಗ್ಗೆ ತನಿಖೆಗೆ ದೇಶದ ಉನ್ನತ ನ್ಯಾಯಾಲಯವು ಆದೇಶಿಸಿದೆ. ಹಿಂಡನ್‌ಬರ್ಗ್ ವರದಿಯ ಬಳಿಕ ನಿವೃತ್ತ ನ್ಯಾಯಮೂರ್ತಿ ಎ ಎಂ ಸಾಪ್ರೆ ನೇತೃತ್ವದ ತಜ್ಞರ ಸಮಿತಿಯನ್ನು ಸುಪ್ರೀಂ ಕೋರ್ಟ್ ರಚನೆ ಮಾಡಿದೆ. ಹಾಗೆಯೇ ಅದಾನಿ ಗ್ರೂಪ್ ವಿರುದ್ಧ ಸೆಬಿ ತನಿಖೆಗೆ ಆದೇಶಿಸಿದೆ.

ಹೂಡಿಕೆದಾರರ ಸುರಕ್ಷತೆ, ಇತರೆ ವಿಚಾರಗಳ ಬಗ್ಗೆ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ ಎಂದು ವರದಿ ಉಲ್ಲೇಖಿಸಿದೆ. ಇನ್ನು ಈಗಾಗಲೇ ವಿರೋಧ ಪಕ್ಷಗಳು ಅದಾನಿ ಗ್ರೂಪ್ ವಿರುದ್ಧದ ತನಿಖೆಗೆ ಭಾರೀ ಆಗ್ರಹ ಮಾಡಿದೆ. ಹಾಗೆಯೇ ಹಿಂಡನ್‌ಬರ್ಗ್ ವರದಿ ಬಳಿಕ ಅದಾನಿ ಗ್ರೂಪ್ ಸ್ಟಾಕ್ ಮಾರುಕಟ್ಟೆಯಲ್ಲಿ ಭಾರೀ ನಷ್ಟ ಕಂಡಿದೆ. ಆದರೆ ಕಳೆದ ಒಂದು ದಿನದಲ್ಲಿ ಅದಾನಿ ಗ್ರೂಪ್ ಸ್ಟಾಕ್‌ಗಳು ಕೊಂಚ ಚೇತರಿಕೆ ಕಾಣುತ್ತಿದೆ. ಗೌತಮ್ ಅದಾನಿ ನಿವ್ವಳ ಆದಾಯದಲ್ಲೂ ಏರಿಕೆ ಕಂಡಿದೆ.
ಹಿಂಡನ್‌ಬರ್ಗ್ ವರದಿ ಏನು ಹೇಳಿದೆ?
ಹಿಂಡನ್‌ಬರ್ಗ್ ತನಿಖಾ ವರದಿಯು ಅದಾನಿ ಗ್ರೂಪ್ ವಂಚನೆಯನ್ನು ಭಾಗಿಯಾಗಿದೆ. ದಶಕಗಳಿಂದ ವಂಚನೆ ನಡೆಸುತ್ತಿದೆ. ಅದಾನಿ ಗ್ರೂಪ್ ಬಗ್ಗೆ ಸುಮಾರು ಎರಡು ವರ್ಷಗಳ ಕಾಲ ತನಿಖೆಯನ್ನು ನಡೆಸಿ ವರದಿ ನೀಡಲಾಗಿದೆ. ಅದಾನಿ ಗ್ರೂಪ್‌ನ ಹಲವಾರು ವ್ಯಕ್ತಿಗಳ ಸಂದರ್ಶನ ಮಾಡಲಾಗಿದೆ. ಮಾಜಿ ಹಿರಿಯ ಅಧಿಕಾರಿಗಳ ಸಂದರ್ಶನವನ್ನು ಕೂಡಾ ಮಾಡಲಾಗಿದೆ. ದಾಖಲೆಗಳು ನಮ್ಮಲ್ಲಿದೆ ಎಂದು ಹಿಂಡನ್‌ಬರ್ಗ್ ಮಾಹಿತಿ ನೀಡಿದೆ.
ಜನವರಿ 24ರಂದು ವರದಿ ಬಿಡುಗಡೆ ಮಾಡಿರುವ ಹಿಂಡನ್‌ಬರ್ಗ್, ಅದಾನಿ ಗ್ರೂಪ್ ಸ್ಟಾಕ್ ಮಾರುಕಟ್ಟೆಯಲ್ಲಿ ವಂಚನೆ ಮಾಡಿರುವ ಬಗ್ಗೆ ನಾವು ಹಲವಾರು ದಾಖಲೆಗಳನ್ನು ಪರಿಶೀಲನೆ ಮಾಡಿದ್ದೇವೆ. 12ರಷ್ಟು ದೇಶಗಳಿಗೆ ಭೇಟಿ ನೀಡಿ ಸ್ವತಃ ಸ್ಥಳ ಪರಿಶೀಲನೆ ಮಾಡಿದ್ದೇವೆ. ಇದರಿಂದಾಗಿ ಅದಾನಿ ಗ್ರೂಪ್‌ಯು ವಂಚನೆಯನ್ನು ನಡೆಸುತ್ತಿದೆ ಎಂದು ತಿಳಿದುಬಂದಿದೆ ಎಂದು ವರದಿ ಹೇಳಿದೆ.
ಅದಾನಿ ಕುಟುಂಬದ ಸದಸ್ಯರು ಹಾಗೂ ಕಂಪನಿಗೆ ಸಂಬಂಧಿಸಿದ ಅಧಿಕಾರಿಗಳು ಮಾರಿಷಸ್, ಯುಎಇ ಮತ್ತು ಕೆರಿಬಿಯನ್ ದ್ವೀಪಗಳಲ್ಲಿ ಕಡಲಾಚೆಯ ಶೆಲ್ ಘಟಕಗಳನ್ನು ರಚಿಸಲು ಸಹಕರಿಸಿದ್ದಾರೆ. ನಕಲಿ ಅಥವಾ ಕಾನೂನುಬಾಹಿರ ವಹಿವಾಟು ಮತ್ತು ಲಿಸ್ಟೆಡ್ ಕಂಪನಿಗಳಿಂದ ಹಣವನ್ನು ಪಡೆಯುವ ಪ್ರಯತ್ನ ಮಾಡಿದ್ದಾರೆ. ನಕಲಿ ಆಮದು/ರಫ್ತು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಹಿಂಡೆನ್‌ಬರ್ಗ್ ತನ್ನ ತನಿಖಾ ವರದಿಯಲ್ಲಿ ತಿಳಿಸಿದೆ.


Click it and Unblock the Notifications