ಜಾಗತಿಕವಾಗಿ ಕಂಗೆಡುವಂತೆ ಮಾಡಿದ್ದ ಕೊರೋನಾ ಸಾಂಕ್ರಮಿಕದ ಕರಾಳ ಪರಿಣಾಮಗಳು ಇನ್ನೂ ಮಾಸದೇ ಇರುವಾಗಲೇ, ಚೀನಾದಲ್ಲಿ ಎಚ್‌ಎಂಪಿವಿ (Human metapneumovirus and respiratory syncytial virus) ವೈರಸ್ ವ್ಯಾಪಕವಾಗಿ ಹಬ್ಬಿರುವುದು ಅನುಮಾನಕ್ಕೆ ಕಾರಣವಾಗಿದೆ. ಈ ಹಿಂದೆ ಕೋವಿಡ್ ವಿಷಯದಲ್ಲಿ ರಹಸ್ಯವಾಗಿ ನಡೆದುಕೊಂಡಂತೆ ಈಗಲೂ ಚೀನಾ ಮುಗುಮ್ಮಾಗಿರುವುದು ವಿಶ್ವದಾದ್ಯಂತ ಆತಂಕಕ್ಕೆ ಕಾರಣವಾಗಿತ್ತು. ಆದರೆ ಇದಕ್ಕಿಂತಲೂ ಆತಂಕಕಾರಿ ವಿಚಾರವೆಂದರೆ ಎಚ್ಎಂಪಿವಿ (HMPV) ವೈರಸ್ ಬೆಂಗಳೂರಿನಲ್ಲಿ ಕಾಣಿಸಿಕೊಂಡಿದೆ.
ಹೌದು ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಎಚ್ಎಂಪಿವಿ (HMPV) ವೈರಸ್ ದೃಢಪಟ್ಟಿದ್ದು , ಈ ಮಗುವಿಗೆ ಜ್ವರದಿಂದ ಬಳಲುತ್ತಿದ್ದ ಕಾರಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ರಕ್ತ ಪರೀಕ್ಷೆ ಮಾಡಿಸಿದಾಗ ಎಚ್‌ಎಂಪಿವಿ ವೈರಸ್ ಮಗುವಿನಲ್ಲಿ ಇರುವುದು ಪತ್ತೆಯಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಪ್ರತಿಕ್ರಿಯಿಸಿದ್ದು , ಜನರು ಈ ಬಗ್ಗೆ ಯಾವುದೇ ಆತಂಕ ಅಥವಾ ಗಾಬರಿಯಾಗುವ ಅಗತ್ಯ ಇಲ್ಲ ಎಂದು ತಿಳಿಸಿದೆ.

ನ್ಯೂಸ್ 18ರ ವರದಿಯ ಪ್ರಕಾರ, ಈ ಮಗುವಿಗೆ ಮತ್ತು ಮಗುವಿನ ಪೋಷಕರಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ. ಕರ್ನಾಟಕ ಆರೋಗ್ಯ ಇಲಾಖೆ ಈ ಸುದ್ದಿಯನ್ನು ದೃಢಪಡಿಸಿದ್ದು, ಈ ಮಾಹಿತಿಯನ್ನು ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆಗೆ ತಿಳಿಸಲಾಗಿದೆ ಎಂದು ಹೇಳಿದೆ .
ಚೀನಾದಲ್ಲಿ ಉಸಿರಾಟದ ಕಾಯಿಲೆಗಳ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಭಾರತ ಸರ್ಕಾರ ಈ ರೀತಿಯ ಸಂದರ್ಭಗಳನ್ನು ನಿಭಾಯಿಸಲು ಸಂಪೂರ್ಣವಾಗಿ ಸಿದ್ಧವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಈ ಹಿಂದೆ ತಿಳಿಸಿತ್ತು. ಉಸಿರಾಟದ ಕಾಯಿಲೆಗಳನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರವು ನಿರಂತರವಾಗಿ ಕಣ್ಗಾವಲು ವಹಿಸುತ್ತಿದೆ ಎಂದು ಹೇಳಲಾಗಿತ್ತು.
" ಹ್ಯೂಮನ್ ಮೆಟಾಪ್ನ್ಯೂಮೋವೈರಸ್ ( ಎಚ್‌ಎಂಪಿವಿ ಒಂದು ವೈರಸ್ ಆಗಿದ್ದು ಅದು ಸಾಮಾನ್ಯವಾಗಿ ಶೀತದಂತೆಯೇ ರೋಗಲಕ್ಷಣಗಳನ್ನು ಉಂಟುಮಾಡುತ್ತದೆ. ಈ ವೈರಸ್ ಭಾರತದಲ್ಲೂ ಇದೆ. ಆದರೆ, ಅದು ಮ್ಯೂಟೆಷನ್ ಆಗಿದೆಯಾ ಎಂಬ ಬಗ್ಗೆ ಇನ್ನೂ ಸ್ಪಷ್ಟತೆ ನಮಗಿಲ್ಲ. ನಮಗೆ ಚೀನಾದಲ್ಲಿ ಮ್ಯುಟೇಟ್ ಆಗಿರುವ ವೈರಸ್ ಯಾಅ ರೀತಿಯ ಗುಣಲಕ್ಷಣಗಳನ್ನು ಹೊಂದಿದೆ ಎಂಬುವುದು ಗೊತ್ತಿಲ್ಲ. ಹೀಗಾಗಿ ಸದ್ಯ ಬೆಂಗಳೂರಿನಲ್ಲಿ ಪತ್ತೆಯಾಗಿರುವುದು ಸಾಮಾನ್ಯ HMPV ವೈರಸ್ ಅಥವಾ ಚೀನಾದಲ್ಲಿ ಆತಂಕಕ್ಕೆ ಕಾರಣವಾಗಿರುವ ತಳಿಯೇ ಎಂಬ ಬಗ್ಗೆ ಗೊಂದಲ ಇದೆ. ಭಾರತದಲ್ಲೂ ಸಾಮಾನ್ಯ HMPV ವೈರಸ್ ಶೇ 0.78 ರಷ್ಟು ಕಾಣಿಸುತ್ತದೆ "ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇನ್ನು ಚೀನಾದಲ್ಲಿ ಹೆಚ್ಚುತ್ತಿರುವ ಉಸಿರಾಟದ ಸಮಸ್ಯೆಗಳ ಕುರಿತು ಭಾರತ ಸರ್ಕಾರ ಎಚ್ಚರಿಕೆ ವಹಿಸಿದ್ದು,ಕೇಂದ್ರ ಆರೋಗ್ಯ ಸಚಿವಾಲಯವು ಚೀನಾದಲ್ಲಿ ಹೆಚ್ಚುತ್ತಿರುವ ಉಸಿರಾಟದ ಕಾಯಿಲೆಗಳ ಬಗ್ಗೆ ಕಣ್ಣಿಟ್ಟಿದ್ದು, ಈ ಬಗ್ಗೆ ಚರ್ಚಿಸಲು ಸಚಿವಾಲಯವು ಶನಿವಾರ ವಿಶೇಷ ಸಭೆಯನ್ನು ನಡೆಸಿತ್ತು. ಅಲ್ಲದೇ ಅಂತಾರಾಷ್ಟ್ರೀಯ ಎಜೆನ್ಸಿ, ಚೀನಾ ಆರೋಗ್ಯ ಸಚಿವಾಲಯ, ವಿಶ್ವ ಆರೋಗ್ಯ ಸಂಸ್ಥೆ ಜೊತೆ ನಿರಂತರ ಸಂಪರ್ಕದಲ್ಲಿದ್ದು ವೈರಸ್ ಕುರಿತ ಮಾಹಿತಿಯನ್ನು ಕಲೆ ಹಾಕಲು ಆರಂಭಿಸಿತ್ತು. ಅಲ್ಲದೇ ಈ ಬಗ್ಗೆ ಮಾತನಾಡಿದ್ದ ಆರೋಗ್ಯ ಸೇವೆಗಳ ಮಹಾ ನಿರ್ದೇಶಕ ಡಾ. ಅತುಲ್ ಗೋಯಲ್" ಈ ವೈರಸ್ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಎಲ್ಲಾ ಉಸಿರಾಟದ ಸೋಂಕುಗಳ ಬಗ್ಗೆ ಸಾಮಾನ್ಯ ಮುನ್ನೆಚ್ಚರಿಕೆಯಂತೆಯೇ ಇದಕ್ಕೂ ತೆಗೆದುಕೊಂಡರೆ ಸಾಕು. ನಮ್ಮ ಡೇಟಾ ವಿಶ್ಲೇಷಣೆ ಪ್ರಕಾರ ಉಸಿರಾಟಕ್ಕೆ ಸಂಬಂಧಿಸಿದ ಕೇಸ್ ನಲ್ಲಿ ಗಣನೀಯ ರೀತಿಯಲ್ಲಿ ಹೆಚ್ಚಳ ಕಂಡುಬಂದಿಲ್ಲ ಎಂದು ಹೇಳಿದ್ದರು.
HMPV ವೈರಸ್ ಎಂದರೇನು?
ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ಎಂಬುದು ಉಸಿರಾಟದ ವ್ಯವಸ್ಥೆಯನ್ನು ಪ್ರಭಾವಿಸುವ ಒಂದು ರೀತಿಯ ವೈರಸ್. ಇದು ವಿಶೇಷವಾಗಿ ಅತಿ ಶಿಶು, ಮಕ್ಕಳು ಹಾಗೂ ವೃದ್ಧರು ಹಾಗೂ ರೋಗನಿರೋಧಕ ಶಕ್ತಿಯ ಕೊರತೆ ಇರುವವರನ್ನು ಬಾಧಿಸುವಂತಹದ್ದಾಗಿದೆ.
HMPV ವೈರಸ್ ಹೇಗೆ ಹರಡುತ್ತದೆ?
ಇತರ ಉಸಿರಾಟದ ವೈರಸ್‌ಗಳಂತೆ, HMPV ವೈರಸ್ ಕೂಡ ಸೋಂಕಿತ ವ್ಯಕ್ತಿಯ ಕೆಮ್ಮು, ಸೀನು ಅಥವಾ ನಾಸಿಕದ ಹನಿಗಳ ಮೂಲಕ ಹರಡುತ್ತದೆ. ಸೋಂಕಿತ ವಸ್ತುಗಳನ್ನು ಸ್ಪರ್ಶಿಸಿದ ನಂತರ ಮುಖವನ್ನು ಸ್ಪರ್ಶಿಸುವುದರಿಂದಲೂ ಈ ವೈರಸ್ ಹರಡುತ್ತದೆ.
HMPV ವೈರಸ್‌ನ ಲಕ್ಷಣಗಳು
HMPV ವೈರಸ್‌ನ ಲಕ್ಷಣಗಳು ಸಾಮಾನ್ಯವಾಗಿ ಸಾಮಾನ್ಯ ಶೀತದ ಲಕ್ಷಣಗಳಿಗೆ ಹೋಲುತ್ತವೆ. ಇವುಗಳಲ್ಲಿ:
ಜ್ವರ
ಕೆಮ್ಮು
ಸೀನು
ಗಂಟಲು ನೋವು
ದೇಹದಲ್ಲಿ ನೋವು
ಉಸಿರಾಟದ ತೊಂದರೆ (ಕೆಲವು ಸಂದರ್ಭಗಳಲ್ಲಿ)
ವಾಕ್ಸಿನ್ ಇದೆಯೇ?
ಸದ್ಯ ಎಚ್ಎಂಪಿವಿ ವೈರಸ್ ಹರಡುವಿಕೆ ತಡೆಗೆ ಯಾವುದೇ ಲಸಿಕೆ ಇಲ್ಲ. ಅಲ್ಲದೇ ಇದಕ್ಕೆ ನಿರ್ದಿಷ್ಟ ಅಂಟಿ ವೈರಲ್ ಚಿಕಿತ್ಸೆ ಇಲ್ಲ. ಅದ್ದರಿಂದ ಕೋವಿಡ್ ರೀತಿ ಹರಡುವಿಕೆ ನಿಯಂತ್ರಿಸುವುದು ಮುಖ್ಯವಾಗಿರುತ್ತದೆ.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?



Click it and Unblock the Notifications