ದೇಶದ ಎರಡನೇ ಅತಿ ದೊಡ್ಡ ಖಾಸಗಿ ಬ್ಯಾಂಕ್ ಆದ ಐಸಿಐಸಿಐ ಬ್ಯಾಂಕ್ ಮುಂಚೂಣಿಯಲ್ಲಿ ಕೆಲಸ ಮಾಡುವ 80 ಸಾವಿರ ಸಿಬ್ಬಂದಿಗೆ 8 ಪರ್ಸೆಂಟ್ ತನಕ ವೇತನ ಹೆಚ್ಚಳ ಮಾಡುವುದಕ್ಕೆ ನಿರ್ಧಾರ ಮಾಡಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ. ಬ್ಯಾಂಕ್ ನಲ್ಲಿ ಕೆಲಸ ಮಾಡುವ ಒಟ್ಟು ಸಿಬ್ಬಂದಿ ಸಂಖ್ಯೆಯ ಪೈಕಿ ಮುಂಚೂಣಿಯಲ್ಲಿ ಕೆಲಸ ಮಾಡುವವರ ಪ್ರಮಾಣ ಶೇಕಡಾ 80ರಷ್ಟಿದೆ.
ಕೊರೊನಾ ಅವಧಿಯಲ್ಲಿ ಸಿಬ್ಬಂದಿ ಸಲ್ಲಿಸಿದ ಸೇವೆಯನ್ನು ಗುರುತಿಸಿ, ಈ ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿವೆ. 2020- 21ನೇ ಸಾಲಿಗೆ 8 ಪರ್ಸೆಂಟ್ ತನಕ ವೇತನ ಹೆಚ್ಚಳವು ಜುಲೈನಿಂದ ಅನ್ವಯ ಆಗಲಿದೆ. ಈ ಬಗ್ಗೆ ಪ್ರತಿಕ್ರಿಯೆ ಕೋರಿ ಕಳಿಸಿದ್ದ ಮೇಲ್ ಗೆ ಬ್ಯಾಂಕ್ ನಿಂದ ಸ್ಪಷ್ಟತೆ ಸಿಕ್ಕಿಲ್ಲ.
M1 ಮತ್ತು ಅದಕ್ಕಿಂತ ಕೆಳಗಿನ ಗ್ರೇಡ್ ಸಿಬ್ಬಂದಿ ಇವರು ಎಂದು ಮೂಲಗಳು ತಿಳಿಸಿವೆ. ಇವರ ಜವಾಬ್ದಾರಿ ಮುಂಚೂಣಿಯಲ್ಲಿ ಇದ್ದು, ಗ್ರಾಹಕರ ಜತೆಗೆ ವ್ಯವಹಾರ ನಡೆಸುವುದಾಗಿರುತ್ತದೆ. ಶಾಖೆಗಳು ಹಾಗೂ ಇತರ ಕಾರ್ಯ ನಿರ್ವಹಣೆಯ ಪ್ರಮುಖ ಜವಾಬ್ದಾರಿ ಇವರದೇ ಆಗಿರುತ್ತದೆ.

ವೆಚ್ಚ ಕಡಿತ ಮಾಡುವ ಸಲುವಾಗಿ ಉದ್ಯೋಗ ಕಡಿತ, ವೇತನ ಹೆಚ್ಚಳಕ್ಕೆ ತಡೆ, ಬಡ್ತಿಗೆ ತಡೆ ಎಂದು ನಾನಾ ಸಂಸ್ಥೆಗಳು ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿರುವ ಕಾಲಘಟ್ಟದಲ್ಲಿ ಈ ಸುದ್ದಿ ಹೊರಬಿದ್ದಿದೆ. ಮಾರ್ಚ್ ಗೆ ಕೊನೆಗೊಂಡ ತ್ರೈ ಮಾಸಿಕದಲ್ಲಿ ಐಸಿಐಸಿಐ ಬ್ಯಾಂಕ್ 26 ಪರ್ಸೆಂಟ್ ಹೆಚ್ಚಲ ತೋರಿಸಿ, 1,221 ಕೋಟಿ ನಿವ್ವಳ ಲಾಭ ದಾಖಲಿಸಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications