ಸಾಲಗಳ ಇಎಂಐ ವಿನಾಯಿತಿ ಮೇಲಿನ ಬಡ್ಡಿ ಮನ್ನಾ ಮಾಡಲು ಸಾಧ್ಯವಿಲ್ಲ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. ಹೀಗೆ ಮಾಡಿದರೆ ಬ್ಯಾಂಕಿಂಗ್ ವಲಯದ ಆರ್ಥಿಕ ಸ್ಥಿರತೆಗೆ ಹೊಡೆತ ಬೀಳುತ್ತದೆ ಎಂದು ಅಫಿಡವಿಟ್ ನಲ್ಲಿ ತಿಳಿಸಲಾಗಿದೆ. ಅಂದ ಹಾಗೆ ಈ ಸಾಲಗಳ ಮೇಲಿನ ಬಡ್ಡಿ ಮೊತ್ತವು ಅಂದಾಜು 2.01 ಲಕ್ಷ ಕೋಟಿ ಅಥವಾ ಜಿಡಿಪಿಯ 1 ಪರ್ಸೆಂಟ್ ಆಗುತ್ತದೆ ಎಂಬ ಮಾಹಿತಿಯನ್ನೂ ನೀಡಲಾಗಿದೆ.
ಮಾರ್ಚ್ ನಿಂದ ಆರು ತಿಂಗಳ ಕಾಲ ಸಾಲ ಮರುಪಾವತಿಯಿಂದ ವಿನಾಯಿತಿ ಘೋಷಿಸಿದೆ ಆರ್ ಬಿಐ. ಸಾಲ ಪಡೆದವರು ಇಎಂಐ ಮರುಪಾವತಿಯನ್ನು ಆಗಸ್ಟ್ ತನಕ ಮುಂದೂಡಬಹುದು. ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಆರ್ಥಿಕ ಒತ್ತಡ ಕಡಿಮೆ ಆಗುತ್ತದೆ ಎಂದು ಈ ವಿನಾಯಿತಿ ನೀಡಲಾಗಿದೆ.
ಮಾರ್ಚ್ 31, 2021ರ ತನಕ ಮಾತ್ರ ಇಎಂಐ ಮುಂದೂಡಿಕೆ
ಸಾಲ ಮರುಪಾವತಿಯನ್ನು ಮುಂದೂಡಬಹುದೇ ಹೊರತು ಮನ್ನಾ ಸಾಧ್ಯವಿಲ್ಲ. ಸಾಲ ಮತ್ತು ಬಡ್ಡಿಯನ್ನು ಪಾವತಿಸಲು ಇನ್ನಷ್ಟು ಸಮಯ ನೀಡಬಹುದು. ಅದು ಕೂಡ ಮಾರ್ಚ್ 31, 2021ರ ತನಕ ಮಾತ್ರ ಎಂದು ಸುಪ್ರೀಂ ಕೋರ್ಟ್ ಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ತಿಳಿಸಿದೆ.
ಹಣಕಾಸು ಸಂಸ್ಥೆಗಳ ವಿವೇಚನೆಗೆ ಬಿಟ್ಟ ವಿಚಾರ
ಸಾಲ ಮರುಪಾವತಿ ವಿನಾಯಿತಿ ಅವಧಿಯ ಬಡ್ಡಿಯನ್ನು ಮನ್ನಾ ಮಾಡುವಂತೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಹಾಕಿಕೊಳ್ಳಲಾಗಿತ್ತು. ಗ್ರಾಹಕರ ಹಿನ್ನೆಲೆಯು ಬೇರೆ ರೀತಿಯಲ್ಲಿ ಇರುತ್ತದೆ. ಆದ್ದರಿಂದ ಬಡ್ಡಿ ವಸೂಲಿ ಮಾಡುವುದು ಸಾಲ ನೀಡಿದ ಸಂಸ್ಥೆಯ ವಿವೇಚನೆಗೆ ಬಿಟ್ಟ ವಿಚಾರ ಎಂದು ಆರ್ ಬಿಐ ಅಫಿಡವಿಟ್ ನಲ್ಲಿ ಹೇಳಲಾಗಿದೆ.
ಹಣಕಾಸು ಒತ್ತಡ ಆಗದಿರಲಿ ಎಂಬ ಉದ್ದೇಶ
ಇಎಂಐ ಪಾವತಿಯನ್ನು ಮುಂದೂಡಿರುವುದು ಹಣಕಾಸಿನ ಒತ್ತಡ ಆಗಬಾರದು ಎಂಬ ಕಾರಣಕ್ಕೆ ಮಾತ್ರ. ಹಣ ಪಾವತಿಯ ಮೇಲಿನ ಬಡ್ಡಿಯನ್ನೇ ಮನ್ನಾ ಮಾಡುವ ಉದ್ದೇಶದಿಂದ ಅಲ್ಲ ಎಂದು ಕೂಡ ಆರ್ ಬಿಐ ಹೇಳಿದೆ. ಕೊರೊನಾ ಲಾಕ್ ಡೌನ್ ಅವಧಿಯಲ್ಲಿ ಸಮಸ್ಯೆ ಆಗಬಹುದು ಎಂಬ ಕಾರಣಕ್ಕೆ ಸಾಲದ ಮೇಲೆ ಇಎಂಐ ಪಾವತಿಗೆ ವಿನಾಯಿತಿ ನೀಡಲಾಗಿದೆ. ಆದರೆ ಅದರ ಮೇಲೆ ಬಡ್ಡಿ ಸೇರಿಕೊಳ್ಳುತ್ತದೆ. ಈ ಬಡ್ಡಿಯ ಮೊತ್ತವನ್ನು ಮನ್ನಾ ಮಾಡಿಸಬೇಕು ಎಂದು ಕೋರ್ಟ್ ನಲ್ಲಿ ಮನವಿ ಮಾಡಲಾಗಿದೆ.
More From GoodReturns

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಮಿಂತ್ರಾ ಫ್ಯಾಶನ್ ಕಾರ್ನಿವಲ್: ಇಂದೇ ಕೊನೆಯ ಅವಕಾಶ, ತಪ್ಪಿಸಿಕೊಳ್ಳಬೇಡಿ!

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಚಿನ್ನದ ಬೆಲೆ ಏರಿಕೆ: ಅಕ್ಷಯ ತೃತೀಯಕ್ಕೆ ಹೂಡಿಕೆ ಮಾಡುವುದು ಹೇಗೆ?

ನಿಫ್ಟಿ ಏರಿಕೆ: ಈಗಲೇ ಹೂಡಿಕೆ ಮಾಡಬೇಕಾ ಅಥವಾ ಕಾಯಬೇಕಾ?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಭಾರತೀಯ ಷೇರು ಮಾರುಕಟ್ಟೆ: ಇಂದಿನ ವಹಿವಾಟಿನಲ್ಲಿ ಅಡಗಿದೆ ಅಚ್ಚರಿಯ ತಿರುವು!

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!



Click it and Unblock the Notifications