ಮೊಂಥಾ ಚಂಡಮಾರುತದ (Cyclone Montha) ಪ್ರಭಾವದಿಂದಾಗಿ ರಾಜ್ಯದಲ್ಲಿ ಕಳೆದೊಂದು ವಾರದಿಂದ ಭಾರೀ ಮಳೆಯಾಗುತ್ತಿದೆ. ಅಲ್ಲದೇ ಭಾರತೀಯ ಹವಾಮಾನ ಇಲಾಖೆ ರಾಜ್ಯದಲ್ಲಿ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ. ನಿನ್ನೆ (ಅ.30) ಒಂದು ದಿನ ಕೆಲ ಜಿಲ್ಲೆಗಳಲ್ಲಿ ಬಿಡುವುಕೊಟ್ಟಿತ್ತು. ಆದ್ರೆ ಇಂದಿನಿಂದ ಮತ್ತೆ ಮಳೆಯಾಗಲಿದೆ ಎಂದು ಐಎಂಡಿ ಎಚ್ಚರಿಕೆ (IMD Alert) ನೀಡಿದೆ. ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಗುಡುಗು ಸಹಿತ ಭಾರೀ ಮಳೆ!
ರಾಜ್ಯದಲ್ಲಿ ಇನ್ನೂ 4 ದಿನ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಆದ್ದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸಲಹೆ ನೀಡಲಾಗಿದೆ.
ಕರಾವಳಿ ಜಿಲ್ಲೆಗಳಿಗೆ ಹೈಅಲರ್ಟ್
ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಐಎಂಡಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ನವೆಂಬರ್ 2 ರವರೆಗೆ ಮಳೆ ಮುಂದುವರೆಯಲಿದೆ ಎಂದು ಸೂಚನೆ ನೀಡಲಾಗಿದೆ.
ಈ ಜಿಲ್ಲೆಗಳಿಗೂ ಮಳೆ ಎಚ್ಚರಿಕೆ
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಮೈಸೂರು, ಶಿವಮೊಗ್ಗ, ವಿಜಯನಗರ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ಇನ್ನು ಬೆಂಗಳೂರಿನ ಹವಾಮಾನ ಇಲಾಖೆ ಸೂಚನೆಯಂತೆ, ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಈ ವಾರದ ಅಂತ್ಯದವರೆಗೂ ಭಾರತದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮೊಂಥಾ ಚಂಡಮಾರುತ ಮತ್ತು ಪೂರ್ವ-ಮಧ್ಯ ಅರಬ್ಬೀ ಸಮುದ್ರದಲ್ಲಾದ ವಾಯುಭಾರ ಕುಸಿತದ ಪರಿಣಾಮ ದೇಶದ ಹಲವು ಪ್ರದೇಶಗಳಿಗೆ ತಟ್ಟಲಿದ್ದು, ಈ ಹಿನ್ನೆಲೆ ಅಕ್ಟೋಬರ್ 30 ರಿಂದ ನವೆಂಬರ್ 2 ರವರೆಗೂ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವರದಿ ಪ್ರಕಾರ, ಪಶ್ಚಿಮ ಬಂಗಾಳ, ಅಂಡಮಾನ್ & ನಿಕೋಬಾರ್ ದ್ವೀಪಗಳು, ಬಿಹಾರ, ಜಾರ್ಖಾಂಡ್‌ಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ.
ಅಲ್ಲದೇ ಮುಂದಿನ ಎರಡು ದಿನ ಅಂದರೆ ಅಕ್ಟೋಬರ್ 30 ಮತ್ತು ನವೆಂಬರ್ 1 ರ ನಡುವೆ ಗುಜರಾತ್, ಸೌರಾಷ್ಟ್ರ ಪ್ರದೇಶ ಮತ್ತು ಕಚ್ ಪ್ರದೇಶಗಳಲ್ಲಿ ಚಂಡಮಾರುತದ ಪರಿಣಾಮದಿಂದಾಗಿ ಹಗುರದಿಂದ ಮಧ್ಯಮ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯೆತ ಇದೆ. ಅಲ್ಲದೇ ಗುಜರಾತ್‌ನಲ್ಲಿ ಮುಂದಿನ ಕೆಲವು ದಿನಗಳವರೆಗೆ ಭಾರೀ ಮಳೆಯಾಗಲಿದ್ದು, ಗಾಳಿಯ ವೇಗವು ಗಂಟೆಗೆ 65 ಕಿಮೀ ತಲುಪಲಿದೆ. ಅಷ್ಟೇ ಅಲ್ಲದೇ ಮಹಾರಾಷ್ಟ್ರದಲ್ಲೂ ಮುಂದಿನ ಎರಡು ದಿನ ಇದೇ ರೀತಿಯ ಹವಾಮಾನ ಇರಲಿದೆ.
ಆದ್ದರಿಂದ ಎಲ್ಲಾದರೂ ಹೋಗುವ ಪ್ಲಾನ್ ಮಾಡಿದ್ದರೆ ಸಾರ್ವಜನಿಕರು ಹವಾಮಾನ ಪರಿಸ್ಥಿತಿ ನೋಡಿಕೊಂಡು ಪ್ಲಾನ್ ಮಾಡಿದರೆ ಉತ್ತಮ. ವಾಹನ ಚಾಲನೆ ಮಾಡುವವರು ಮಳೆ ಸಂದರ್ಭದಲ್ಲಿ ಎಚ್ಚರಿಕೆಯಿಂದ ಇರಿ. ಅಗತ್ಯವಿದ್ದರೆ ಮಾತ್ರ ಹೊರಗೆ ಹೋಗಿ ಎಂದು ಸಲಹೆ ನೀಡಲಾಗಿದೆ.
More From GoodReturns

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಓಂ ಪವರ್ ಟ್ರಾನ್ಸ್ಮಿಷನ್ ಐಪಿಒ: ಹೂಡಿಕೆದಾರರ ಪಾಲಿಗೆ ಲಾಭದಾಯಕವೇ?

ಚಿನ್ನದ ಬೆಲೆ ಇಂದು ಏರಿಕೆ? ಖರೀದಿಸುವ ಮುನ್ನ ಇದನ್ನು ನೋಡಿ



Click it and Unblock the Notifications