ಕೊರೊನಾವೈರಸ್ ಸೋಂಕು ತಡೆಗೆ ಭಾರತವು ತೆಗೆದುಕೊಂಡಿರುವ ಲಾಕ್‌ಡೌನ್ ನಿರ್ಧಾರವನ್ನು ಅಂತರರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ಬೆಂಬಲಿಸಿದೆ.
'ಆರ್ಥಿಕತೆ ಮಂದಗತಿಯಲ್ಲಿ ಸಾಗುತ್ತಿದ್ದಾಗಲೇ ಭಾರತಕ್ಕೆ ಜಾಗತಿಕ ಪಿಡುಗಿನ ಸಂಕಷ್ಟ ಎದುರಾಯಿತು. ಆರ್ಥಿಕ ಚೇತರಿಕೆಯ ನಿರೀಕ್ಷೆಯು ಅನಿಶ್ಚಿತವಾಗಿದೆ' ಎಂದು ಐಎಂಎಫ್‌ನ ಏಷ್ಯಾ ಮತ್ತು ಫೆಸಿಫಿಕ್ ವಿಭಾಗದ ನಿದೇರ್ಶಕ ಚಾಂಗ್ ಯೋಗ್ ರೀ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

'ಆರ್ಥಿಕ ಕುಸಿತದ ಹೊರತಾಗಿಯೂ, ಭಾರತ ಸರ್ಕಾರವು ರಾಷ್ಟ್ರವ್ಯಾಪಿ ಲಾಕ್‌ಡೌನ್ ಜಾರಿಗೆ ತಂದಿದೆ. ಭಾರತದ ಪೂರ್ವಭಾವಿ ನಿರ್ಧಾರವನ್ನು ನಾವು ಬೆಂಬಲಿಸುತ್ತೇವೆ. ಏಷ್ಯಾ-ಫೆಸಿಫಿಕ್ ಪ್ರದೇಶದಲ್ಲಿ ಕೊರೊನಾವೈರಸ್‌ನ ಪರಿಣಾಮವು ತೀವ್ರವಾಗಿರಲಿದೆ. 2020ರಲ್ಲಿ ಏಷ್ಯಾದ ಅಭಿವೃದ್ಧಿ ಸ್ಥಗಿತಗೊಳ್ಳಲಿದೆ' ಎಂದು ತಿಳಿಸಿದ್ದಾರೆ.
ಜಾಗತಿಕ ಹಣಕಾಸು ಬಿಕ್ಕಟ್ಟು (4.7 ಪರ್ಸೆಂಟ್) ಅಥವಾ ಏಷ್ಯನ್ ಹಣಕಾಸು ಬಿಕ್ಕಟ್ಟು (1.3 ಪರ್ಸೆಂಟ್) ಉದ್ದಕ್ಕೂ ವಾರ್ಷಿಕ ಸರಾಸರಿ ಬೆಳವಣಿಗೆಯ ದರಗಳಿಗಿಂತ ಇದು ಕೆಟ್ಟದಾಗಿದೆ. ವಾಸ್ತವವಾಗಿ, ಕಳೆದ 60 ವರ್ಷಗಳಲ್ಲಿ ಏಷ್ಯಾ ಶೂನ್ಯ ಬೆಳವಣಿಗೆಯನ್ನು ಅನುಭವಿಸಿಲ್ಲ ಎಂದು ಅವರು ಹೇಳಿದರು. ಜೊತೆಗೆ ಏಷ್ಯಾದ ಬೆಳವಣಿಗೆಯು ಯುರೂಪಿಯನ್ ದೇಶಗಳಿಗಿಂತ ಉತ್ತಮವಾಗಿದೆ ಎಂದಿದ್ದಾರೆ.
ಲಾಕ್‌ಡೌನ್ ಘೋಷಣೆಯ ಪರಿಣಾಮ ಭಾರತದ ಆರ್ಥಿಕ ಅಭಿವೃದ್ಧಿ ದರವು 2020ರಲ್ಲಿ 1.9 ಪರ್ಸೆಂಟ್ ಇರಲಿದೆ ಎಂದು ಹೇಳಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

iPhone EMI: ಐಫೋನ್ EMIನಲ್ಲಿ ತಗೊಳೋದು ಎಷ್ಟು ಸೇಫ್? ಮಾಸಿಕ ಪಾವತಿ ಸುಲಭ, ಆದರೆ ನಿಮ್ಮ ಹಣಕಾಸು ಸುರಕ್ಷಿತವೇ?



Click it and Unblock the Notifications