ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) 2022-22ರ ಹಣಕಾಸು ವರ್ಷದ ಭಾರತದ ಆರ್ಥಿಕ ಬೆಳವಣಿಗೆಯ ದರವನ್ನು ಈ ಹಿಂದಿನ ಶೇಕಡಾ 12.5ರಿಂದ ಶೇಕಡಾ 9.5ಕ್ಕೆ ಇಳಿಸಿದೆ.
ದೇಶದ ಜನತೆಗೆ ಲಸಿಕೆಯ ಕೊರತೆ ಮತ್ತು ಕೊರೊನಾವೈರಸ್ ಹೊಸ ಅಲೆಗಳ ಸಾಧ್ಯತೆಯ ಕಾರಣದಿಂದ ಭಾರತದ ಆರ್ಥಿಕ ಬೆಳವಣಿಗೆ ದರ ಮುನ್ಸೂಚನೆಯನ್ನ ಪರಿಷ್ಕರಿಸಿದೆ ಎಂದು ಐಎಂಎಫ್ ಹೇಳಿದೆ.
'' ಮಾರ್ಚ್-ಮೇ ಅವಧಿಯಲ್ಲಿ ತೀವ್ರವಾದ ಎರಡನೇ ಕೋವಿಡ್ ತರಂಗದ ಅಲೆ ನಂತರ ಭಾರತದಲ್ಲಿ ಬೆಳವಣಿಗೆಯ ಭವಿಷ್ಯವನ್ನು ಇಳಿಸಲಾಗಿದೆ ಮತ್ತು ಆ ಹಿನ್ನಡೆಯಿಂದ ಆರ್ಥಿಕತೆ ನಿಧಾನವಾಗಿ ಚೇತರಿಸಿಕೊಳ್ಳಲಿದೆ" ಎಂದು ಐಎಂಎಫ್ ಮಂಗಳವಾರ ಬಿಡುಗಡೆ ಮಾಡಿದ ತನ್ನ ವರ್ಲ್ಡ್ ಎಕನಾಮಿಕ್ ಔಟ್‌ಲುಕ್ (WEO) ಇತ್ತೀಚಿನ ವರದಿಯಲ್ಲಿ ತಿಳಿಸಿದೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ದರದ ಕುರಿತು ಐಎಂಎಫ್ ಮುನ್ಸೂಚನೆ ದರವು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ (ಆರ್‌ಬಿಐ) ಅನ್ನು ಹೋಲುತ್ತವೆ.
ಕೋವಿಡ್-19 ರ ಅಭೂತಪೂರ್ವ ಎರಡನೇ ತರಂಗದಿಂದ ಅದರ ಚೇತರಿಕೆಗೆ ಅಡ್ಡಿಯಾಗುತ್ತಿದ್ದರೂ ಸಹ, ಭಾರತದ ಆರ್ಥಿಕತೆಯು 2021 ರಲ್ಲಿ ಶೇಕಡಾ 8.3 ಮತ್ತು 2022 ರಲ್ಲಿ ಶೇಕಡಾ 7.5 ರಷ್ಟಾಗುತ್ತದೆ ಎಂದು ವಿಶ್ವ ಬ್ಯಾಂಕ್ ಅಂದಾಜಿಸಿದೆ.
ಆದಾಗ್ಯೂ ಐಎಂಎಫ್ ಮುಂದಿನ ಹಣಕಾಸು ವರ್ಷದಲ್ಲಿ (FY 23) ಭಾರತದ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) ಶೇಕಡಾ 8.5 ರಷ್ಟು, ಅದರ ಹಿಂದಿನ ದರಕ್ಕಿಂತ 160 ಬೇಸಿಸ್ ಪಾಯಿಂಟ್‌ಗಳಷ್ಟು ಹೆಚ್ಚಾಗಿದೆ ಎಂದು ಅಂದಾಜಿಸಿದೆ.
More From GoodReturns

ಚಿನ್ನದ ಬೆಲೆ ಏರಿಕೆ: ನಿಮ್ಮ ಹೂಡಿಕೆ ಸುರಕ್ಷಿತವಾಗಿಡಲು ಈ ತಂತ್ರ ಬಳಸಿ

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಮಿಂತ್ರಾ ಫ್ಯಾಶನ್ ಕಾರ್ನಿವಲ್: ಇಂದೇ ಕೊನೆಯ ಅವಕಾಶ, ತಪ್ಪಿಸಿಕೊಳ್ಳಬೇಡಿ!

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್‌ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್‌ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಆರ್‌ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!



Click it and Unblock the Notifications