ಕರ್ನಾಟಕ ಸರ್ಕಾರ ಈಗಾಗಲೇ ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ ಒಂದನ್ನು ನೀಡಿತ್ತು. ಅದೇನೆಂದರೆ ಸರ್ಕಾರಿ ಅಥವಾ ಖಾಸಗಿ ಕಂಪನಿಗಳಲ್ಲಿ ಉದ್ಯೋಗದಲ್ಲಿರುವ ಮಹಿಳೆಯರು ಪ್ರತಿ ವರ್ಷ 12 ಋತುಚಕ್ರ ರಜೆಗಳನ್ನು (Menstrual Leave) ಪಡೆಯಬಹುದು. ಅಕ್ಟೋಬರ್ 9 ರಂದು ಕರ್ನಾಟಕ ಸರ್ಕಾರವು ಮಹಿಳೆಯರ ಆರೋಗ್ಯಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಮುಟ್ಟಿನ ರಜೆ ನೀತಿಯನ್ನು ಅನುಮೋದಿಸಿದೆ. ಈ ಮೂಲಕ ಇನ್ಮೇಲೆ ಕರ್ನಾಟಕದಲ್ಲಿ ಮಹಿಳಾ ಉದ್ಯೋಗಿಗಳು ವರ್ಷಕ್ಕೆ 12 ರಂತೆ ಋತುಚಕ್ರದ ರಜೆಯನ್ನು ಪಡೆಯಬಹುದು.

ರಾಜ್ಯ ಸರ್ಕಾರ ತಂದಿರುವ ಈ ನೀತಿಯ ಪ್ರಕಾರ, ಸರ್ಕಾರಿ ಮತ್ತು ಖಾಸಗಿ ವಲಯಗಳಲ್ಲಿನ ಮಹಿಳೆಯರು ತಿಂಗಳಿಗೆ ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ಪಡೆಯಬಹುದು ಎನ್ನಲಾಗಿದೆ. ತಿಂಗಳಿಗೆ ಒಂದರಂತೆ ವರ್ಷಕ್ಕೆ ಒಟ್ಟು 12 ದಿನಗಳವರೆಗೆ ರಜೆ ಪಡೆಯಬಹುದು ಎಂದು ವರದಿಯಾಗಿದೆ. ಇನ್ನು ಸರ್ಕಾರ ಮಹಿಳೆಯರ ಆರೋಗ್ಯದ ದೃಷ್ಟಿಯಿಂದ ಈ ಕ್ರಮ ಕೈಗೊಂಡಿದೆ ಎನ್ನಲಾಗಿದೆ.
ಸರ್ಕಾರಿ ಮತ್ತು ಖಾಸಗಿ ವಲಯದಲ್ಲೂ ವಿಸ್ತರಣೆ
ಬಿಹಾರ ಮತ್ತು ಕೇರಳ ರಾಜ್ಯಗಳಲ್ಲಿ ಈಗಾಗಲೇ ಮುಟ್ಟಿನ ರಜೆಯನ್ನು ಘೋಷಿಸಲಾಗಿದೆ. ಆದರೆ ಅಲ್ಲಿ ಕೇವಲ ಸರ್ಕಾರಿ ನೌಕರರು ಅಥವಾ ವಿದ್ಯಾರ್ಥಿಗಳು ಮಾತ್ರ ರಜೆ ಪಡೆಯಬಹುದಾಗಿದೆ. ಆದರೆ, ಕರ್ನಾಟಕ ಸರ್ಕಾರ ತಂದಿರುವ ಈ ಹೊಸ ನೀತಿಯಿಂದಾಗಿ ರಾಜ್ಯದ ಮಹಿಳೆಯರು ಸರ್ಕಾರಿ ವಲಯ ಮಾತ್ರವಲ್ಲದೇ, ಖಾಸಗಿ ವಲಯದಲ್ಲೂ ಈ ಮುಟ್ಟಿನ ರಜಾ ನೀತಿಯನ್ನು ವಿಸ್ತರಿಸಲಾಗಿದೆ. ಸದ್ಯ ಕರ್ನಾಟಕದ ಈ ನೀತಿ ರಾಷ್ಟ್ರೀಯ ಮಟ್ಟದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಹಲವು ರಾಜ್ಯಗಳಿಗೆ ಮಾದರಿಯಾಗಿದೆ.
ರಾಜ್ಯ ಸಚಿವ ಸಂಪುಟದಲ್ಲೂ ಈ ನೀತಿಗೆ ಹಸಿರು ನಿಶಾನೆ ತೋರಿಸಲಾಗಿದೆ. ಇನ್ಮೇಲೆ ಈ ನೀತಿ ಪ್ರಕಾರ, ರಾಜ್ಯದ ಎಲ್ಲಾ ವಲಯಗಳಲ್ಲೂ ದುಡಿಯುವ ಮಹಿಳೆಯರು ಋತುಚಕ್ರದ ಸಮಯದಲ್ಲಿ ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆ ಪಡೆಯಬಹುದು ಎಂದು ಹೇಳಲಾಗಿದೆ.
ಕರ್ನಾಟಕದ ಈ ಮುಟ್ಟಿನ ರಜೆ ನೀತಿ ಏಕೆ ಮಹತ್ವ ಪಡೆದಿದೆ?
ಇನ್ನು ಈ ಮುಟ್ಟಿನ ರಜೆ ನೀತಿ ಈ ಮೊದಲೇ ಒಡಿಶಾದಲ್ಲಿ ಜಾರಿಗೆ ತರಲಾಗಿದೆ. ಆದ್ರೆ ಈ ನೀತಿ ಸರ್ಕಾರಿ ವಲಯಕ್ಕೆ ಮಾತ್ರ ಸೀಮಿತವಾಗಿದೆ. ಅದೇ ರೀತಿ ಕೇರಳ ಸರ್ಕಾರ ಕೂಡಾ ಕೆಲವು ರಾಜ್ಯ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಸಂಸ್ಥೆಗಳಲ್ಲಿ ವಿದ್ಯಾರ್ಥಿನಿಯರು ಮತ್ತು ಸಿಬ್ಬಂದಿಗೆ ಮುಟ್ಟಿನ ರಜೆ ನೀಡುತ್ತಿದೆ. ಆದರೆ ಕರ್ನಾಟಕದಲ್ಲಿ ಸರ್ಕಾರಿ ಮತ್ತು ಖಾಸಗಿ ವಲಯದಲ್ಲಿ ಕೆಲಸ ಮಾಡುವ ಮಹಿಳಾ ಉದ್ಯೋಗಿಗಳು ಈ ನೀತಿಗೆ ಅರ್ಹರಾಗಿರುತ್ತಾರೆ. ಆದ್ದರಿಂದ ಸರ್ಕಾರಿ ಮತ್ತು ಖಾಸಗಿ ವಲಯಕ್ಕೆ ಋತುಚಕ್ರದ ರಜಾ ನೀತಿಯನ್ನು ಜಾರಿಗೆ ತಂದ ದೇಶದ ಮೊದಲ ರಾಜ್ಯವೆಂದು ಕರ್ನಾಟಕ ಗುರುತಿಸಿಕೊಂಡಿದೆ.
ಭಾರತ ಬಿಟ್ಟು ಬೇರೆ ಎಲ್ಲೆಲ್ಲಾ ಈ ನೀತಿ ಜಾರಿಯಲ್ಲಿದೆ?
ಜಾಗತಿಕವಾಗಿ, ಮುಟ್ಟಿನ ರಜೆ ನೀತಿಯು ಎಲ್ಲಾ ದೇಶಗಲ್ಲೂ ಜಾರಿಯಲ್ಲಿಲ್ಲ. ಆದ್ರೆ ಕೆಲವೇ ಕೆಲವು ದೇಶಗಳಲ್ಲಿ ಮುಟ್ಟಿ ರಜಾ ನೀತಿಯನ್ನು ಜಾರಿಗೆ ತರಲಾಗಿದೆ. ಜಪಾನ್ 1947 ರಿಂದ ಮುಟ್ಟಿನ ರಜಾ ನೀತಿಯನ್ನು ಜಾರಿಗೆ ತಂದಿದೆ. ಆದರೆ ಇದು ಹೆಚ್ಚಾಗಿ ವೇತನರಹಿತವಾಗಿದೆ ಎನ್ನಲಾಗಿದೆ.
ದಕ್ಷಿಣ ಕೊರಿಯಾದಲ್ಲೂ ಮಾಸಿಕವಾಗಿ ಒಂದು ದಿನ ವೇತನರಹಿತ ರಜೆ ನೀಡುತ್ತದೆ ಎಂದು ವರದಿಯಾಗಿದೆ. ಇದರ ಜೊತೆಗೆ ಇಂಡೋನೇಷ್ಯಾ ಎರಡು ದಿನಗಳ ವೇತನ ಸಹಿತ ರಜೆ ನೀಡುತ್ತದೆ. ಜಾಂಬಿಯಾದಲ್ಲೂ ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆ ನೀಡುತ್ತದೆ. ಯುರೋಪ್‌ನಲ್ಲಿ, 2023 ರಲ್ಲಿ ಸ್ಪೇನ್ ವೇತನ ಸಹಿತ ಮುಟ್ಟಿನ ರಜೆಯನ್ನು ಕಾನೂನುಬದ್ಧಗೊಳಿಸಿದ ಮೊದಲ ದೇಶವೆಂದು ಪರಿಗಣಿಸಲ್ಪಟ್ಟಿದೆ.
More From GoodReturns

Good Friday 2026: ಈ ವರ್ಷ ಗುಡ್ ಫ್ರೈಡೇ ಯಾವಾಗ? ಈಸ್ಟರ್ ದಿನಾಂಕ ಮತ್ತು ಸಂಪೂರ್ಣ ಮಾಹಿತಿ ತಿಳಿಯಿರಿ

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka Rain: ರಾಜ್ಯದಲ್ಲಿ ಸದ್ಯಕ್ಕೆ ನಿಲ್ಲಲ್ಲ ವರುಣಾರ್ಭಟ; ಎಷ್ಟು ದಿನ ಈ ಮಳೆ ಎಂದು ತಿಳಿಯಿರಿ

Bank Holiday: ನಾಳೆ ಕರ್ನಾಟಕದಲ್ಲಿ ಬ್ಯಾಂಕ್ ತೆರೆದಿರುತ್ತೋ, ಇಲ್ಲವೋ? ಸ್ಪಷ್ಟ ಮಾಹಿತಿ ತಿಳಿಯಿರಿ

Silver Price Today: ಬೆಳ್ಳಿ ದರದಲ್ಲಿ ಇಂದು 5,000 ಕುಸಿತ; ಭಾರತದಲ್ಲಿ ಇಂದಿನ ಬೆಲೆ ತಿಳಿಯಿರಿ

LPG Crisis Bengaluru: ಕೋಳಿ ವ್ಯಾಪಾರಕ್ಕೂ ತಟ್ಟಿದ LPG ಕೊರತೆ ಬಿಸಿ; ಬೆಂಗಳೂರಲ್ಲಿ ಮಾರಾಟ ಭಾರಿ ಕುಸಿತ

Bengaluru: ಬೀದಿ ಬದಿ ವ್ಯಾಪಾರಕ್ಕೆ ಅವಕಾಶವಿಲ್ಲ; ಈ ರಸ್ತೆಯ ವ್ಯಾಪಾರಿಗಳಿಗೆ ದೊಡ್ಡ ಸಂಕಷ್ಟ

Eid-ul-Fitr 2026: ರಂಜಾನ್ ಹಬ್ಬ ಇಂದೋ, ನಾಳೆಯೋ; ಕೇರಳದಲ್ಲಿ ಮಾತ್ರ ಇಂದು ಆಚರಣೆ ಯಾಕೆ?

Oil Price Tension: ಮದ್ಯಪ್ರಾಚ್ಯ ಉದ್ವಿಗ್ನತೆ ನಡುವೆ ತೈಲ ಮಾರುಕಟ್ಟೆ ತಲ್ಲಣ, ಭಾರತಕ್ಕೆ ಸವಾಲು; ಎಚ್ಚರಿಕೆ ಸೂಚನೆ

Petrol Price Hike: ಪ್ರೀಮಿಯಂ ಪೆಟ್ರೋಲ್ ದರ ಏರಿಕೆ-ಲೀಟರ್ಗೆ 2 ಹೆಚ್ಚಳ, ಸಾಮಾನ್ಯ ಇಂಧನ ದರ ಸ್ಥಿರ

Good Friday 2026: ಈ ವರ್ಷ ಗುಡ್ ಫ್ರೈಡೇ ಯಾವಾಗ? ಈಸ್ಟರ್ ದಿನಾಂಕ ಮತ್ತು ಸಂಪೂರ್ಣ ಮಾಹಿತಿ ತಿಳಿಯಿರಿ



Click it and Unblock the Notifications