For Quick Alerts
ALLOW NOTIFICATIONS  
For Daily Alerts

'ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ಮೇಲೆ ಚೀನಾ ಆಮದು ಹೆಚ್ಚಾಗಿದೆ'

|

ನವದೆಹಲಿ, ಜೂನ್ 30: ಕೇಂದ್ರ ಸರ್ಕಾರ ಚೀನಾ ಮೂಲದ ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿಷೇಧ ಮಾಡಿರುವ ಬೆನ್ನಲ್ಲೇ ಕೇಂದ್ರ ಸರ್ಕಾರದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ.

ಚೀನಾದ ಮೊಬೈಲ್ ಅಪ್ಲಿಕೇಶನ್‌ಗಳನ್ನು ಬ್ಯಾನ್ ಮಾಡಿದಾಕ್ಷಣ ಸತ್ಯ ಸುಳ್ಳಾಗುವುದಿಲ್ಲ ಎಂದು ಹೇಳಿ, ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲೇ ಚೀನಾದಿಂದ ಅತಿ ಹೆಚ್ಚು ಆಮದು ಚಟುವಟಿಕೆಗಳು ನಡೆದಿರುವುದು, ಚೀನಾ ಪರ ನಿಲುವು ತಾಳಿದ್ದು ಎಂದು ಆರೋಪಿಸಿದ್ದಾರೆ.

ಉದ್ಯಮಗಳ ತ್ವರಿತ ಸ್ಥಾಪನೆಗೆ ಅನುಕೂಲ ಮಾಡಿ ಕೊಡಲು ಮುಂದಾದ ರಾಜ್ಯ ಸರ್ಕಾರ

2008 ರಿಂದ 2014ವರೆಗೂ ಚೀನಾದಿಂದ ಅಮದು ಪ್ರಮಾಣ ಶೇ.14 ಕ್ಕಿಂತ ಕಡಿಮೆ ಇತ್ತು. ಆದರೆ ನರೇಂದ್ರ ಮೋದಿ ಆಡಳಿತಕ್ಕೆ ಬಂದ ಮೇಲೆ ಆಮದು ಪ್ರಮಾಣ ಶೇ.18 ಹೆಚ್ಚಿದೆ ಎಂದು ರಾಹುಲ್ ಗಾಂಧಿ ಗ್ರಾಫ್ ಒಂದನ್ನು ಟ್ವೀಟ್ ಮಾಡಿ ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ.

'ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ಮೇಲೆ ಚೀನಾ ಆಮದು ಹೆಚ್ಚಾಗಿದೆ'

 

ಅಲ್ಲದೇ ರಾಹುಲ್ ಗಾಂಧಿ ಮೇಕ್ ಇನ್ ಇಂಡಿಯಾ ಯೋಜನೆಯನ್ನು ವ್ಯಂಗ್ಯ ಮಾಡಿದ್ದಾರೆ. ಬಿಜೆಪಿ ಮತ್ತು ಎನ್‍ಡಿಎ ಸರ್ಕಾರ ಮೇಕ್ ಇನ್ ಇಂಡಿಯಾ ಉತ್ತೇಜಿಸುತ್ತೆ ಆದರೆ ಚೀನಾ ವಸ್ತುಗಳನ್ನು ಅತಿ ಹೆಚ್ಚು ಖರೀದಿಸುತ್ತೆ. ಮೊಬೈಲ್ ಅಪ್ಲಿಕೇಶನ್‌ಗಳನ್ನು ಬ್ಯಾನ್ ಮಾಡಿದಾಕ್ಷಣ ಸತ್ಯ ಸುಳ್ಳಾಗುವುದಿಲ್ಲ ಎಂದು ಟೀಕಿಸಿದ್ದಾರೆ.

English summary

Imports Of China Increased Since Narendra Modi Came To Power Says Rahul Gandhi

Imports Of China Increased Since Narendra Modi Came To Power Says Rahul Gandhi
Company Search
COVID-19
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Goodreturns sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Goodreturns website. However, you can change your cookie settings at any time. Learn more