ಭಾರತದಲ್ಲಿ ಆಗಸ್ಟ್ 31 ರವರೆಗೆ ಅಂತಾರಾಷ್ಟ್ರೀಯ ವಿಮಾನಯಾನ ಸ್ಥಗಿತ

ನವದೆಹಲಿ: ಕೊರೊನಾವೈರಸ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಆಗಸ್ಟ್ 31 ರವರೆಗೆ ಅಂತಾರಾಷ್ಟ್ರೀಯ ವಾಣಿಜ್ಯ ಹಾಗೂ ಪ್ರಯಾಣಿಕರ ವಿಮಾನಯಾನವನ್ನು ಭಾರತದಲ್ಲಿ ಸ್ಥಗಿತಗೊಳಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ (ಡಿಜಿಸಿಎ) ತಿಳಿಸಿದೆ.

ಆದಾಗ್ಯೂ, ಈ ನಿರ್ಬಂಧವು ಅಂತಾರಾಷ್ಟ್ರೀಯ ಆಲ್-ಕಾರ್ಗೋ ಕಾರ್ಯಾಚರಣೆಗಳು ಮತ್ತು ಡಿಜಿಸಿಎ ನಿರ್ದಿಷ್ಟವಾಗಿ ಅನುಮೋದಿಸಿದ ವಿಮಾನಗಳಿಗೆ ಅನ್ವಯಿಸುವುದಿಲ್ಲ ಎಂದು ಅಧಿಕೃತ ಹೇಳಿಕೆಯಲ್ಲಿ ಸೇರಿಸಲಾಗಿದೆ.

ಕೋವಿಡ್ -19 ರ ಕಾರಣದಿಂದಾಗಿ ಲಾಕ್‌ಡೌನ್ ಅವಧಿಯಲ್ಲಿ, ಭಾರತಕ್ಕೆ ಮತ್ತು ಹೊರ ದೇಶಗಳಲ್ಲಿ ಸಿಕ್ಕಿಬಿದ್ದ ಪ್ರಯಾಣಿಕರನ್ನು ವಾಪಸ್ ಕರೆ ತರಲು ವಿದೇಶಿ ವಿಮಾನಯಾನ ಸಂಸ್ಥೆಗಳಿಂದ 2,500 ಕ್ಕೂ ಹೆಚ್ಚು ವಾಪಸಾತಿ ವಿಮಾನಗಳನ್ನು ಅನುಮೋದಿಸಲಾಗಿದೆ ಎಂದು ವಿಮಾನಯಾನ ಸಚಿವಾಲಯ ತಿಳಿಸಿದೆ.

ಭಾರತದಲ್ಲಿ ಆಗಸ್ಟ್ 31 ರವರೆಗೆ ಅಂತಾರಾಷ್ಟ್ರೀಯ ವಿಮಾನಯಾನ ಸ್ಥಗಿತ

ವಂದೇ ಭಾರತ್ ಮಿಷನ್ ಅಡಿಯಲ್ಲಿ, ಒಟ್ಟಾರೆಯಾಗಿ, ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸಪ್ರೆಸ್ 2,67,436 ಸಿಕ್ಕಿಬಿದ್ದ ಪ್ರಯಾಣಿಕರನ್ನು ಕರೆ ತಂದಿದೆ ಮತ್ತು ಇತರ ಚಾರ್ಟರ್ಗಳು 4,86,811 ಸಿಕ್ಕಿಬಿದ್ದ ಪ್ರಯಾಣಿಕರನ್ನು ಮೇ 6 ರಿಂದ 2020 ರ ಜುಲೈ 30 ರವರೆಗೆ ಕರೆ ತಂದಿವೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+