ಆತನ ಹೆಸರು ಎರಿಕ್ ಯುವಾನ್. ಜೂಮ್ ವಿಡಿಯೋ ಕಮ್ಯೂನಿಕೇಷನ್ ಸಿಇಒ. ಕೆಲವೇ ಗಂಟೆಗಳಲ್ಲಿ ಆತನ ಆಸ್ತಿ 420 ಕೋಟಿ ಅಮೆರಿಕನ್ ಡಾಲರ್ ಹೆಚ್ಚಾಗಿದೆ. ಈ ಕಂಪೆನಿಯ ತ್ರೈಮಾಸಿಕ ಫಲಿತಾಂಶ ಆಹಾ ಓಹೋ ಎಂಬಷ್ಟು ಚೆನ್ನಾಗಿ ಬಂದಿದ್ದರಿಂದ ಅಮೆರಿಕ ಷೇರು ಮಾರ್ಕೆಟ್ ನಲ್ಲಿ ಕಂಪೆನಿ ಷೇರಿನ ಬೆಲೆ 26% ಏರಿಕೆಯಾಗಿ, ಒಂದು ಷೇರಿಗೆ $ 410ಕ್ಕೆ ತಲುಪಿತು.
ಮಂಗಳವಾರ ಕೂಡ ಇಂಥದ್ದೇ ಏರಿಕೆ ಕಂಡಲ್ಲಿ ಆತನ ಆಸ್ತಿ ಮೌಲ್ಯ 2000 ಕೋಟಿ ಅಮೆರಿಕನ್ ಡಾಲರ್ ದಾಟುತ್ತದೆ. ಟೆಕ್ನಾಲಜಿ ಕಂಪೆನಿಗಳ ಷೇರು ಮೌಲ್ಯದಲ್ಲಿ ಭರ್ಜರಿ ಏರಿಕೆಯಾಗಿ, ಬಹಳ ಮಂದಿಯ ಸಂಪತ್ತು ಭರ್ಜರಿ ಏರಿಕೆ ಕಂಡಿತು. ಅಮೆಜಾನ್ ಕಂಪೆನಿಯ ಸ್ಥಾಪಕ ಜೆಫ್ ಬೆಜೋಸ್ ಜುಲೈನಲ್ಲಿ ಒಂದೇ ದಿನ 1300 ಕೋಟಿ ಅಮೆರಿಕನ್ ಡಾಲರ್ ಹೆಚ್ಚಾಗಿತ್ತು. ಕಳೆದ ತಿಂಗಳು ಕೇವಲ ಇಪ್ಪತ್ನಾಲ್ಕು ಗಂಟೆಯಲ್ಲಿ ಮಸ್ಕ್ ಆಸ್ತಿ 800 ಕೋಟಿ ಅಮೆರಿಕನ್ ಡಾಲರ್ ಹೆಚ್ಚಾಗಿತ್ತು.

ಇದರಿಂದಾಗಿ ಜೆಫ್ ಬೆಜೋಸ್ ಆಸ್ತಿ 200 ಬಿಲಿಯನ್ ಅಮೆರಿಕನ್ ಡಾಲರ್ ಹಾಗೂ ಎಲಾನ್ ಮಸ್ಕ್ ಆಸ್ತಿ 100 ಬಿಲಿಯನ್ ಡಾಲರ್ ದಾಟಿತು. ಅಂದ ಹಾಗೆ ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಬಹಳ ದೊಡ್ಡ ಮಟ್ಟದಲ್ಲಿ ಲಾಭ ಪಡೆದಿದ್ದು ಜೂಮ್ ಕಂಪೆನಿ. ದೂರದಿಂದ ಶಿಕ್ಷಣ, ಉದ್ಯೋಗ ಮತ್ತಿತರ ಉದ್ದೇಶಗಳಿಗೆ ಜೂಮ್ ಬಳಕೆ ಸಿಕ್ಕಾಪಟ್ಟೆ ಹೆಚ್ಚಾಯಿತು.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications