ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಕರ್ನಾಟಕ ಬಜೆಟ್ 2020ಯಲ್ಲಿ ತಿಳಿಸಲಾಗಿದೆ. ಎಲ್ಲ ರೈತರು ಮತ್ತು ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಒದಗಿಸುತ್ತೇವೆ. ರೈತರನ್ನು ಸಾಲಮುಕ್ತರಾಗಿಸಲು ಪಣ ತೊಟ್ಟಿದ್ದೇವೆ ಎಂದು ಬಜೆಟ್‌ನಲ್ಲಿ ತಿಳಿಸಲಾಗಿದೆ.
ಸಿರಿಧಾನ್ಯಗಳನ್ನು ಬೆಳೆಯಲು ಪ್ರತಿ ಹೆಕ್ಟೇರ್‌ಗೆ 10 ಸಾವಿರದಂತೆ ಪ್ರೋತ್ಸಾಹಧನ ಕೊಡುತ್ತಿದ್ದೇವೆ. ಸಿರಿಧಾನ್ಯಗಳ ಪಟ್ಟಿಗೆ ಇನ್ನಷ್ಟು ಧಾನ್ಯಗಳನ್ನು ಸೇರಿಸುತ್ತೇವೆ. ನೀರಿನಲ್ಲಿ ಕರಗುವ ಗೊಬ್ಬರ, ಸೂಕ್ಷ್ಮ ಪೋಷಕಾಂಶಗಳ ಮಾಹಿತಿ ಮತ್ತು ಸಂಪನ್ಮೂಲಗಳನ್ನು ರೈತರಿಗೆ ಒದಗಿಸುತ್ತೇವೆ. ಸಾವಯವ ಕೃಷಿಗೆ ಪ್ರೋತ್ಸಾಹ ನೀಡಲು 200 ಕೋಟಿ ರೂ ಮೀಸಲಿಟ್ಟಿದ್ದೇವೆ ಎಂದು ಹೇಳಿದರು.

ಆಹಾರ ಸಂಸ್ಕರಣಾ ಘಟಕಗಳಿಗೆ ಅಗತ್ಯ ನೆರವು
ನೀರು ಮತ್ತು ಗೊಬ್ಬರದ ವೈಜ್ಞಾನಿಕ ಬಳಕೆಗೆ ಕ್ರಮ ತೆಗೆದುಕೊಳ್ಳುತ್ತೇವೆ. ಆಹಾರ ಸಂಶೋಧನೆಗಳ ಬಲವರ್ಧನೆ ನಮ್ಮ ಆದ್ಯತೆ. ಆಹಾರ ಸಂಸ್ಕರಣಾ ಘಟಕಗಳು ಮತ್ತು ಉದ್ದಿಮೆಗಳಿಗೆ ತೋಟಗಾರಿಕೆ, ಆಹಾರ ಸಂಸ್ಕರಣಾ ಸಂಸ್ಥೆಗಳ ಸಹಭಾಗಿತ್ವದಲ್ಲಿ ಮೌಲ್ಯವರ್ಧಿತ ಸಂಸ್ಕರಣೆ, ದಾಸ್ತಾನು ಮತ್ತು ಪ್ಯಾಕಿಂಗ್‌ಗೆ ಸಂಬಂಧಿಸಿದ ಅಗತ್ಯ ನೆರವು ಒದಗಿಸಲಾಗುವುದು. ಸುಜಲಾ-3 ಯೋಜನೆ ಮಾದರಿಯಲ್ಲಿಯೇ ವಿಶ್ವಬ್ಯಾಂಕ್ ಸಹಕಾರದಲ್ಲಿ 10 ಲಕ್ಷ ಹೆಕ್ಟೇರ್ ಜಲಾನಯನ ಪ್ರದೇಶದಲ್ಲಿ ಭೂ ಮೌಲ್ಯ ಸಂವರ್ಧನಗೆ ಕ್ರಮ.
ಶಿವಮೊಗ್ಗ, ಉಡುಪಿಯಲ್ಲಿ ಕೃಷಿ ವಿವಿ ಸ್ಥಾಪನೆ
ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳನ್ನು ಗಮನದಲ್ಲಿರಿಸಿಕೊಂಡು ಶಿವಮೊಗ್ಗದಲ್ಲಿ ಕೃಷಿ ವಿವಿ ಸ್ಥಾಪನೆ


Click it and Unblock the Notifications