ಆಸ್ತಿ ತೆರಿಗೆದಾರರಿಗೆ ಸಿಹಿ ಸುದ್ದಿ.. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದ (ಇದುವರೆಗೆ ಖಾತೆ ಮಾಡಿಸಿಕೊಳ್ಳದಿರುಮವವರು) ಆಸ್ತಿಗಳನ್ನು ಹೊಸದಾಗಿ .ಸೇರ್ಪಡೆ ಮಾಡಿಕೊಳ್ಳಲಾಗುತ್ತಿದೆ.
ಹೌದು, ಹೊಸ ಖಾತಾ ಪಡೆಯುವ ಸಲುವಾಗಿ ವೆಬ್ ಸೈಟ್ (https://BBMP.karnataka.gov.in/NewKhata) ಕೂಡಾ ಬಿಡುಗಡೆಗೊಳಿಸಲಾಗಿದೆ. ಇದರ ಮೂಲಕ ಹೊಸದಾಗಿ ಖಾತಾ ಪಡೆದುಕೊಳ್ಳಬಹುದಾಗಿದೆ. ಈಗಾಗಲೇ ಸದರಿ ವೆಬ್ ಸೈಟ್ ಮೂಲಕ ಹೊಸದಾಗಿ 10 ಸಾವಿರ ಆಸ್ತಿ ಮಾಲೀಕರು ಖಾತಾ ಪಡೆದಿದ್ದಾರೆ.

80 ಸಾವಿರ ಆಸ್ತಿ ಮಾಲೀಕರು ಖಾತೆ ಸೇರ್ಪಡೆ
ಒಂದು ಪರಿಹಾರ ಯೋಜನೆ(OTS) ಜಾರಿಯಿದ್ದ ವೇಳೆಯೂ ಖಾತೆ ಮಾಡಿಕೊಳ್ಳಲು ಅವಕಾಶ ನೀಡಿದ್ದ ವೇಳೆ ಸುಮಾರು 80 ಸಾವಿರ ಆಸ್ತಿ ಮಾಲೀಕರು ಖಾತೆ ಮಾಡಿಸಿಕೊಂಡಿದ್ದಾರೆ.
1ಲಕ್ಷ ಆಸ್ತಿಗಳನ್ನು ಸೇರ್ಪಡೆ
ನಗರದಲ್ಲಿ ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತರಲು ಆಯಾ ವಲಯಗಳಲ್ಲಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ಪೈಕಿ 1ಲಕ್ಷ ಆಸ್ತಿಗಳನ್ನು ಸೇರ್ಪಡೆ ಮಾಡಿದಲ್ಲಿ ಸುಮಾರು 100 ಕೋಟಿ ರೂ. ಆಸ್ತಿ ತೆರಿಗೆ ಪಾಲಿಗೆಗೆ ಬರಲಿದೆ ಎಂದು ಮಾಹಿತಿಯನ್ನು ಅವರು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಡಾ. ಕೆ. ಹರೀಶ್ ಕುಮಾರ್,ಸುರಳ್ಕರ್ ವಿಕಾಸ್ ಕಿಶೋರ್, ಅವಿನಾಶ್ ಮೆನನ್ ರಾಜೇಂದ್ರನ್, ವಲಯ ಆಯುಕ್ತರಾದ ಸತೀಶ್, ಸ್ನೇಹಲ್, ರಮ್ಯಾ, ಕರೀ,,ಗೌಡ, ದಿಗ್ವಿಜಯ್ ಬೋಡ್ಕೆ, ಎಲ್ಲಾ ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಇದ್ದರು.
ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕ ಸಮೀಕ್ಷೆ
ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸಮೀಕ್ಷೆ ನಡೆಸಿ ವರದಿ ನೀಡಲು ಸೂಚನೆ ನೀಡಲಾಗಿದೆ ಎಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಮಾಹಿತಿಯನ್ನು ತಿಳಿಸಿದ್ಧಾರೆ.
ಇನ್ನೂ ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಲಿಕೆಯ 8 ವಲಯಗಳಲ್ಲಿ ಎಷ್ಟು ಶುದ್ಧ ಕುಡಿಯುವ ನೀರಿನ ಘಟಕಗಳಿವೆ, ಎಷ್ಟು ಸುಸ್ಥಿತಿಯಲ್ಲಿವೆ, ಎಷ್ಟು ಸ್ಥಗಿತವಾಗಿವೆ ಎಂಬುದರ ಕುರಿತು ಸಮೀಕ್ಷೆ ನಡೆಸಿ ವಾರದೊಳಗಾಗಿ ವರದಿ ನೀಡಲು ಸೂಚಿಸಲಾಗಿದೆ ಎಂದು ಮಾಹಿತಿಯನ್ನು ತಿಳಿಸಿದ್ದಾರೆ.
ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಿತಿ-ಗತಿ ವರದಿ
ನಗರದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಸಂಬಂಧಿಸಿದಂರೆ ಎಲ್ಲಾ ವಲಯಗಳಲ್ಲಿ ಟೆಂಡರ್ ಕರೆದು ಗುತ್ತಿಗೆದಾರರನ್ನು ನಿಯೋಜಿಸಿದ್ದು, ಅವರ ಮೂಲಕ ಘಟಕಗಳನ್ನು ನಿರ್ವಹಣೆ ಮಾಡಲಾಗುತ್ತಿದೆ. ಈ ಸಂಬಂಧ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಿತಿ-ಗತಿಗಳ ಕುರಿತು ವರದಿ ನೀಡಲು ಸೂಚಿಸಲಾಗಿದೆ ಎಂದು ಹೇಳಿದರು.
ಏಪ್ರಿಲ್ 1ರಿಂದ ಕುಡಿಯುವ ನೀರಿನ ಜವಾಬ್ದಾರಿ; ಜಲಮಂಡಳಿ ಇಲಾಖೆ
ನಗರದಲ್ಲಿ ಕಾವೇರಿ 5 ಹಂತವು ಈಗಾಗಲೇ ಚಾಲ್ತಿಯಲ್ಲಿರುವುದರಿಂದ, 1ನೇ ಏಪ್ರಿಲ್ 2025 ರಿಂದ ಕುಡಿಯುವ ನೀರಿನ ಸಂಪೂರ್ಣ ಜವಾಬ್ದಾರಿ ಜಲಮಂಡಳಿ ಇಲಾಖೆಯದ್ದೇ ಆಗಿರುತ್ತದೆ. ಈ ಸಂಬಂಧ ಪಾಲಿಕೆಯ ಒಡೆತನದಲ್ಲಿದ್ದ ಬೋರ್ ವೆಲ್ ಗಳನ್ನು ಹಸ್ತಾಂತರಿಸುವ ಸಂಬಂಧ ಜಲಮಂಡಳಿಗೆ ಈಗಾಗಲೇ ಪತ್ರ ಬರೆಯಲಾಗಿದೆ. ಅದರ ಜೊತೆಗೆ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕೂಡಾ 1ನೇ ಏಪ್ರಿಲ್ 2025 ವೇಳೆಗೆ ಜಲಮಂಡಿಗೆ ಹಸ್ತಾಂತರಿಸಲಾಗುವುದೆಂದು ತಿಳಿಸಿದರು.
ಕುಡಿಯುವ ನೀರಿನ ವಿಚಾರವನ್ನು ಇನ್ನು ಮುಂದೆ ಸಂಪೂರ್ಣವಾಗಿ ಜಲಮಂಡಳಿಯೇ ನಿರ್ವಹಣೆ ಮಾಡಲಿದೆ. ಕುಡಿಯುವ ನೀರಿನ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಹಣಕಾಸು ಆಯೋಗದಿಂದ ಪಾಲಿಕೆಗೆ ಬರುವ ಅನುದಾನವನ್ನು ಜಲಮಂಡಳಿಗೆ ವರ್ಗಾಯಿಸಲಾಗುವುದೆಂದು ಹೇಳಿದರು


Click it and Unblock the Notifications