ಡಿಜಿಟಲ್ ಪಾವತಿಯನ್ನು ಅಳವಡಿಸಿಕೊಳ್ಳುತ್ತಿರುವವರ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ಜಿಡಿಪಿ ಮೌಲ್ಯಮಾಪನವನ್ನು ಸುಧಾರಿಸಲು ಇದರಿಂದ ಸಹಾಯ ಆಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಅವರು ಶುಕ್ರವಾರ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
"ನಾವು ಡಿಜಿಟಲ್ ವ್ಯವಹಾರದ ಕಡೆಗೆ ಸಾಗುತ್ತಿರುವುದರಿಂದ ನಗದಿನ ಮೂಲಕವೇ ವ್ಯವಹಾರ ಮಾಡಬೇಕು ಎಂಬ ಉತ್ಕಟತೆ ಕಡಿಮೆ ಆಗುತ್ತದೆ ಎಂಬುದನ್ನು ನಿರೀಕ್ಷಿಸಬಹುದು. ಮತ್ತು ಈ ಎಲ್ಲ ವ್ಯವಹಾರವೂ ಹಣಕಾಸಿನ ನಿಗಾ ಜಾಲದೊಳಗೆ ಬಂದರೆ ಜಿಡಿಪಿ ಲೆಕ್ಕಾಚಾರವು ಭಾರತದ ವಾಸ್ತವ ಆರ್ಥಿಕತೆಯ ಬಲದ ಸಮೀಪ ಬರುತ್ತದೆ," ಎಂದು ತಿಳಿಸಿದ್ದಾರೆ.

ಹೆಚ್ಚು ವ್ಯವಹಾರಗಳನ್ನು ಆರ್ಥಿಕವಾಗಿ ಗಮನಕ್ಕೆ ಬರುವಂತೆ ಮಾಡಿದಷ್ಟೂ ಒಂದು ದೇಶವಾಗಿ ಉತ್ತಮಗೊಳ್ಳುತ್ತೇವೆ. ಅದರಲ್ಲಿ ತೆರಿಗೆ ಪ್ರಾಕ್ಟೀಷನರ್ ಗಳು ತುಂಬ ಮುಖ್ಯ ಪಾತ್ರ ವಹಿಸಲಿ ಎಂದು ನಿರೀಕ್ಷೆ ಮಾಡುತ್ತೇನೆ ಎಂದಿದ್ದಾರೆ. "ನಿಮ್ಮ ಕ್ಲೈಂಟ್ ಗಳ ಜತೆಗೆ ಮಾತನಾಡಿ. ಸರ್ಕಾರದಿಂದ ಡಿಜಿಟಲ್ ಪಾವತಿಯನ್ನು, ಸರಳ ತೆರಿಗೆ ಪದ್ಧತಿಯನ್ನು ಉತ್ತೇಜಿಸುವಾಗ ಆಗುವ ವಿವಿಧ ಅನುಕೂಲಗಳನ್ನು ತಿಳಿಸಿಕೊಡಿ," ಎಂದು ಮನವಿ ಮಾಡಿದ್ದಾರೆ ನಿರ್ಮಲಾ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications