ಮಹತ್ವಾಕಾಂಕ್ಷೆಯ ಸಮಗ್ರ ಆರ್ಥಿಕ ಸಹಕಾರ ಒಪ್ಪಂದದ ಆರಂಭಿಕ ತೀರ್ಮಾನಕ್ಕೆ ತಮ್ಮ ದೇಶ ಮತ್ತು ಭಾರತ ಒಪ್ಪಿಗೆ ನೀಡಿದ್ದು, ಈ ವರ್ಷವೇ ಈ ಒಪ್ಪಂದವು ಅಂತಿಮವಾಗುವ ನಿರೀಕ್ಷೆ ನಮಗಿದೆ ಎಂದು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಶುಕ್ರವಾರ ಹೇಳಿದ್ದಾರೆ. ಉಭಯ ನಾಯಕರ ನಡುವಿನ ದ್ವಿಪಕ್ಷೀಯ ಮಾತುಕತೆಯ ನಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ಉಭಯ ನಾಯಕರುಗಳು ಜಂಟಿ ಪತ್ರಿಕಾಗೋಷ್ಠಿಯ ನಡೆಸಿದ್ದು ಈ ವೇಳೆ ಮಾತನಾಡಿದ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್, "ನಾವು ಈ ವರ್ಷದಲ್ಲೇ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸಮಗ್ರ ಆರ್ಥಿಕ ಸಹಕಾರ ಒಪ್ಪಂದವನ್ನು ಅಂತಿಮಗೊಳಿಸಲಿದ್ದೇವೆ. ಈ ಒಪ್ಪಂದವು ಈ ವರ್ಷದ ಅಂತ್ಯದೊಳಗೆ ಕೊನೆಯಾಗುತ್ತದೆ ಎಂಬ ಭರವಸೆಯನ್ನು ನಾನು ಹೊಂದಿದ್ದೇನೆ," ಎಂದು ತಿಳಿಸಿದ್ದಾರೆ.

ಪ್ರಧಾನಿ ಮೋದಿ ಹೇಳುವುದೇನು?
"ನಮ್ಮ ತಂಡಗಳು ನಮ್ಮ ಭಾರತ ಮತ್ತು ಆಸ್ಟ್ರೇಲಿಯಾ ದೇಶಗಳ ನಡುವೆ ಸಮಗ್ರ ಆರ್ಥಿಕ ಒಪ್ಪಂದದ ವಿಚಾರದಲ್ಲಿ ಕಾರ್ಯನಿರ್ವಹಿಸುತ್ತಿವೆ," ಎಂದು ಜಂಟಿ ಪತ್ರಿಕಾಗೋಷ್ಠಿಯುಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೂಡಾ ತಿಳಿಸಿದ್ದಾರೆ. ಈ ಸಂದರ್ಭದಲ್ಲೇ, ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸಮಗ್ರ ಕಾರ್ಯತಂತ್ರದ ಒಪ್ಪಂದದಲ್ಲಿ ಭದ್ರತಾ ಸಹಕಾರವು ಪ್ರಮುಖ ಆಧಾರಸ್ತಂಭವಾಗಿದೆ ಎಂದು ಹೇಳಿದ್ದಾರೆ.
"ನಾವು ಇಂದು ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಕಡಲ ಭದ್ರತೆಯ ಬಗ್ಗೆ ಚರ್ಚೆ ನಡೆಸಿದ್ದೇವೆ," ಎಂದು ಹೇಳಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮೇ ತಿಂಗಳಲ್ಲಿ ನಡೆಯಲಿರುವ ಕ್ವಾಡ್ ನಾಯಕರ ಶೃಂಗಸಭೆಗೆ ತಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಧನ್ಯವಾದವನ್ನು ಅರ್ಪಿಸಿದರು.
"ಭಾರತ ಮತ್ತು ಆಸ್ಟ್ರೇಲಿಯಾ ಎರಡೂ ಕ್ವಾಡ್‌ನ ಸದಸ್ಯ ದೇಶಗಳು ಆಗಿದೆ. ಮೇ ತಿಂಗಳಲ್ಲಿ ಕ್ವಾಡ್ ಲೀಡರ್ಸ್ ಶೃಂಗಸಭೆಗೆ ನನ್ನನ್ನು ಆಸ್ಟ್ರೇಲಿಯಾಕ್ಕೆ ಆಹ್ವಾನಿಸಿದ್ದಕ್ಕಾಗಿ ನಾನು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ಸೆಪ್ಟೆಂಬರ್‌ನಲ್ಲಿ ಭಾರತದಲ್ಲಿ ಜಿ20 ಶೃಂಗಸಭೆ ನಡೆಯಲಿದೆ. ಈ ಸಭೆಗೆ ನಾವು ಆಸ್ಟ್ರೇಲಿಯಾವನ್ನು ಭಾರತಕ್ಕೆ ಆಹ್ವಾನಿಸಿದ್ದೇನೆ," ಎಂದು ಮಾಹಿತಿ ನೀಡಿದರು.
ಉಭಯ ನಾಯಕರು ತಮ್ಮ ತಮ್ಮ ದೇಶಗಳ ನಡುವೆ ಹಲವಾರು ಒಪ್ಪಂದಗಳಿಗೆ ಸಾಕ್ಷಿಯಾಗಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಸೋಲರ್ ಟಾಸ್ಕ್‌ಫೋರ್ಸ್ ನಿಯಮಗಳನ್ನು ಕ್ರೀಡೆಗಳಲ್ಲಿ ಮತ್ತು ಆಡಿಯೊ-ವಿಶುವಲ್ ಸಹ-ನಿರ್ಮಾಣಕ್ಕಾಗಿ ಅವಳವಡಿಸು ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಆಸ್ಟ್ರೇಲಿಯದ ದೇವಾಲಯಗಳ ಮೇಲಿನ ದಾಳಿಯ ಘಟನೆಗಳ ವಿಷಯವನ್ನು ಕೂಡಾ ಮೋದಿ ಪ್ರಸ್ತಾಪ ಮಾಡಿದ್ದಾರೆ.
"ಆಸ್ಟ್ರೇಲಿಯಾದಲ್ಲಿ ದೇವಾಲಯಗಳ ಮೇಲಿನ ದಾಳಿಯ ವರದಿಗಳನ್ನು ನಾನು ನೋಡಿದ್ದೇನೆ. ನಾನು ಇದನ್ನು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರಲ್ಲಿ ಪ್ರಸ್ತಾಪ ಮಾಡಿದ್ದೇನೆ. ಆಸ್ಟ್ರೇಲಿಯಾದಲ್ಲಿರುವ ಭಾರತೀಯ ಸಮುದಾಯದ ಸುರಕ್ಷತೆ ಮತ್ತು ಯೋಗಕ್ಷೇಮ ಅವರಿಗೆ ಆದ್ಯತೆಯ ವಿಚಾರವಾಗಿದೆ ಎಂದು ಆಸ್ಟ್ರೇಲಿಯಾದ ಪ್ರಧಾನಿ ಭರವಸೆ ನೀಡಿದ್ದಾರೆ," ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.


Click it and Unblock the Notifications