ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪ್ರಚೋದನಕಾರಿ ಕೋಮು ಸೂಕ್ಷ್ಮ ವಿಷಯಗಳನ್ನು ಪ್ರಸಾರ ಮಾಡುತ್ತಿದ್ದ 16 ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳನ್ನು ಗೃಹ ವ್ಯವಹಾರಗಳ ಸಚಿವಾಲಯದ ಶಿಫಾರಸಿನ ಮೇರೆಗೆ ಭಾರತದಲ್ಲಿ ನಿಷೇಧ ಮಾಡಲಾಗಿದೆ ಎಂದು ಸರ್ಕಾರಿ ಮೂಲಗಳು ಮಾಹಿತಿಯನ್ನು ತಿಳಿಸಿವೆ.
ಸರ್ಕಾರಿ ಮೂಲಗಳ ಪ್ರಕಾರ ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಈ ಚಾನೆಲ್‌ಗಳು ಒಟ್ಟು 63 ಮಿಲಿಯನ್ ಚಂದಾದಾರರನ್ನು ಹೊಂದಿದೆ. ಭಯೋತ್ಪಾದಕ ಘಟನೆಯ ಬಗ್ಗೆ ಪಕ್ಷಪಾತ ವರದಿ ಮಾಡಿದ್ದಕ್ಕಾಗಿ ಸರ್ಕಾರ ಬಿಬಿಸಿಗೆ ಎಚ್ಚರಿಕೆ ನೀಡಿದೆ. ಕೇಂದ್ರ ಗೃಹ ಸಚಿವಾಲಯದ ಶಿಫಾರಸಿನ ಮೇರೆಗೆ ಈ ಖಾತೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿಯನ್ನು ತಿಳಿಸಿದೆ.

ಪಾಕ್‌ನ ಯಾವ ಯೂಟ್ಯೂಬ್ ಚಾನಲ್‌ಗಳು ಬ್ಯಾನ್..?
ಡಾನ್, ಸಮಾ ಟಿವಿ, ಸುದ್ದಿ ಸಂಸ್ಥೆಗಳ ಯೂಟ್ಯೂಬ್ ಚಾನೆಲ್‌ಗಳನ್ನು ಭಾರತದಲ್ಲಿ ಬ್ಯಾನ್ ಮಾಡಲಾಗಿದೆ. ARY ಸುದ್ದಿ, ಬೋಲ್ ನ್ಯೂಸ್, ರಫ್ತಾರ್, ಜಿಯೋ ನ್ಯೂಸ್ ಮತ್ತು ಸುನೋ ನ್ಯೂಸ್ ಗಳು ಬ್ಯಾನ್ ಮಾಡಿದೆ. ಪತ್ರಕರ್ತರಾದ ಇರ್ಷಾದ್ ಭಟ್ಟಿ, ಅಸ್ಮಾ ಶಿರಾಜಿ, ಉಮರ್ ಚೀಮಾ ಮತ್ತು ಮುನೀಬ್ ಫಾರೂಕ್ ಅವರ ಯೂಟ್ಯೂಬ್ ಚಾನೆಲ್‌ಗಳನ್ನು ಸಹ ನಿಷೇಧ ಮಾಡಲಾಗಿದೆ. ನಿಷೇಧಿತ ಇತರ ಖಾತೆಗಳಲ್ಲಿ ದಿ ಪಾಕಿಸ್ತಾನ್ ರೆಫರೆನ್ಸ್, ಸಮಾ ಸ್ಪೋರ್ಟ್ಸ್, ಉಜೈರ್ ಕ್ರಿಕೆಟ್ ಮತ್ತು ರಾಜಿ ನಾಮಾ ಸೇರಿವೆ.
ನಿಷೇಧಿತ ಚಾನೆಲ್‌ಗಳು ಭಾರತ, ಅದರ ಸಶಸ್ತ್ರ ಪಡೆಗಳು ಮತ್ತು ಭದ್ರತಾ ಸಂಸ್ಥೆಗಳನ್ನು ಗುರಿಯಾಗಿಟ್ಟುಕೊಂಡು ಪ್ರಚೋದನಕಾರಿ ಮತ್ತು ಕೋಮುವಾದಿ ವಿಷಯವನ್ನು ಪ್ರಸಾರ ಮಾಡುತ್ತಿದ್ದವು, ಜೊತೆಗೆ ಸುಳ್ಳು ನಿರೂಪಣೆಗಳು ಮತ್ತು ತಪ್ಪು ಮಾಹಿತಿಯನ್ನು ಪ್ರಸಾರ ಮಾಡುತ್ತಿದ್ದವು ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
ಪಹಲ್ಗಾಮ್ ಭಯೋತ್ಪಾದಕ ದಾಳಿ
ಜಮ್ಮು ಮತ್ತು ಕಾಶ್ಮೀರದ ಪ್ರಸಿದ್ಧ ಪ್ರವಾಸಿ ತಾಣ ಪಹಲ್ಗಾಮ್ ಬಳಿಯ ಬೈಸರನ್ ಹುಲ್ಲುಗಾವಲಿನಲ್ಲಿ ಈ ದಾಳಿ ನಡೆದಿದೆ. 2019 ರ ಪುಲ್ವಾಮಾ ದಾಳಿಯ ನಂತರ ಈ ಪ್ರದೇಶದಲ್ಲಿ ನಡೆದ ಅತ್ಯಂತ ಮಾರಕ ದಾಳಿಗಳಲ್ಲಿ ಇದೂ ಒಂದು .ಇದರಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ನ 40 ಸಿಬ್ಬಂದಿ ಸಾವನ್ನಪ್ಪಿದರು. ಏಪ್ರಿಲ್ 23 ರಿಂದ ಪಹಲ್ಗಾಮ್ ದಾಳಿ ಸ್ಥಳದಲ್ಲಿ ಹಾಜರಿರುವ ರಾಷ್ಟ್ರೀಯ ತನಿಖಾ ಸಂಸ್ಥೆಯ (NIA) ತಂಡಗಳು ಸಾಕ್ಷ್ಯಗಳನ್ನು ಸಂಗ್ರಹಿಸುವ ಪ್ರಯತ್ನಗಳನ್ನು ತೀವ್ರಗೊಳಿಸಿದೆ.
ಈ ದಾಳಿಯು ಭಾರತದಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಪಹಲ್ಗಾಮ್ ದುರಂತಕ್ಕೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ.
ಪಾಕಿಸ್ತಾನದ ವೀಸಾ ಸೇವೆ ಸ್ಥಗಿತ
ಜಮ್ಮು ಮತ್ತು ಕಾಶ್ಮೀರದ ಪ್ರವಾಸಿ ಹೋಟ್ಸ್‌ಪಾಟ್ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಸಂಭವಿಸಿದೆ.ಈ ಘಟನೆ ಕೇವಲ ಭಾರತವನ್ನಷ್ಟೇ ಅಲ್ಲ. ವಿಶ್ವ ಮಟ್ಟದಲ್ಲಿ ಸದ್ದು ಮಾಡುತ್ತಿದೆ.26 ಜನರನ್ನು ಉಗ್ರರು ಹತ್ಯೆ ಮಾಡಿದ್ದಾರೆ.ದೇಶದಾದ್ಯಂತ ಉಗ್ರರ ಕೃತ್ಯಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ರಕ್ತಪಾತ ನಡೆಸಿ ಓಡಿ ಹೋಗಿರುವ ಪಾಕಿಸ್ತಾನದ ಉಗ್ರರಿಗೆ ಇದೀಗ ಭಾರಿ ಹುಡುಕಾಟ ಶುರುವಾಗಿದೆ. ಒಂದು ಕಡೆ ಜಾಗತಿಕ ಮಟ್ಟದಲ್ಲೂ ಭಾರತಕ್ಕೆ ದೊಡ್ಡ ಮಟ್ಟದ ಬೆಂಬಲ ಸಿಕ್ಕಿದೆ. ಇದೀಗ ಭಾರತ ಸರ್ಕಾರ ದಾಳಿಗೆ ಪ್ರತ್ಯುತ್ತರವಾಗಿ ಭಾರತವು ಪಾಕಿಸ್ತಾನದ ಪ್ರಜೆಗಳಿಗೆ ನೀಡಿದ ವೀಸಾ ಸೇವೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಿದೆ.
ಭಾರತ ಸರ್ಕಾರವು ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ಸೇವೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲು ನಿರ್ಧರಿಸಿದೆ. ಭಾರತವು ಪಾಕಿಸ್ತಾನಿ ಪ್ರಜೆಗಳಿಗೆ ನೀಡಿರುವ ಎಲ್ಲಾ ಅಸ್ತಿತ್ವದಲ್ಲಿರುವ ಮಾನ್ಯ ವೀಸಾಗಳನ್ನು ಏಪ್ರಿಲ್ 27, 2025 ರಿಂದ ಜಾರಿಗೆ ಬರುವಂತೆ ರದ್ದುಗೊಳಿಸಲಾಗಿದೆ. ಪಾಕಿಸ್ತಾನಿ ಪ್ರಜೆಗಳಿಗೆ ನೀಡಲಾಗುವ ವೈದ್ಯಕೀಯ ವೀಸಾಗಳು ಏಪ್ರಿಲ್ 29, 2025 ರವರೆಗೆ ಮಾತ್ರ ಮಾನ್ಯವಾಗಿರುತ್ತವೆ ಎಂದು ಅದು ಹೇಳಿಕೆಯಲ್ಲಿ ಮಾಹಿತಿಯನ್ನು ತಿಳಿಸಿದೆ.


Click it and Unblock the Notifications