ಕಳೆದ ವರ್ಷ ಭಾರತ ಮತ್ತು ಕೆನಡಾ (India-Canada) ನಡುವೆ ಹಲವು ಕಾರಣಗಳಿಂದಾಘಿ ರಾಜತಾಂತ್ರಿಕ ಬಿಕ್ಕಟ್ಟು ಎದುರಾಗಿತ್ತು. ಆದ್ರೆ ಇದೀಗ ಮತ್ತೆ ಭಾರತ ಮತ್ತು ಕೆನಡಾ ಭಾನುವಾರ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ಕುರಿತು ಚರ್ಚೆಗಳನ್ನು ಪುನರಾರಂಭಿಸಲು ಒಪ್ಪಿಕೊಂಡಿವೆ. ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ G20 ನಾಯಕರ ಶೃಂಗಸಭೆಯ (G20 Leaders' Summit) ಸಂದರ್ಭದಲ್ಲಿ ಎರಡೂ ದೇಶಗಳ ಪ್ರಧಾನ ಮಂತ್ರಿಗಳು ಪರಸ್ಪರ ಭೇಟಿಯಾಗಿದ್ದು, ಆ ಸಮಯದಲ್ಲಿ ಈ ಬೆಳವಣಿಗೆಗಳು ನಡೆದಿದೆ. ಈ ಮೂಲಕ ಎರಡೂ ದೇಶಗಳ ನಡುವಿನ ಬಾಂಧವ್ಯ ಸುಧಾರಣೆಗೆ ಹೊಸ ನಾಂದಿ ಹಾಡಲಿದೆ.

ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹೇಳಿಕೆಯ ಪ್ರಕಾರ, ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ "ಉನ್ನತ ಮಹತ್ವಾಕಾಂಕ್ಷೆಯ ಸಮಗ್ರ ಆರ್ಥಿಕ ಸಹಭಾಗಿತ್ವ ಒಪ್ಪಂದ (CEPA) ಕುರಿತು ಮಾತುಕತೆಗಳನ್ನು ಪ್ರಾರಂಭಿಸಲು" ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಭಾನುವಾರ X ನಲ್ಲಿನ ಪೋಸ್ಟ್‌ನಲ್ಲಿ ಪ್ರಧಾನ ಮಂತ್ರಿ ಕಚೇರಿ, "ಪ್ರಧಾನಿ ನರೇಂದ್ರಮೋದಿ ಕೆನಡಾದ ಪ್ರಧಾನಮಂತ್ರಿ ಮಾರ್ಕ್‌ಕಾರ್ನಿ ಅವರೊಂದಿಗೆ ದ್ವಿಪಕ್ಷೀಯ ಆರ್ಥಿಕ ಬೆಳವಣಿಗೆ ಬಗ್ಗೆ ಸಭೆ ನಡೆಸಲಾಯಿತು. ದ್ವಿಪಕ್ಷೀಯ ಸಂಬಂಧಗಳಲ್ಲಿನ ಬಲವಾದ ವೇಗವನ್ನು ಇಬ್ಬರೂ ನಾಯಕರು ಸ್ವಾಗತಿಸಿದರು ಮತ್ತು ವ್ಯಾಪಾರ, ಹೂಡಿಕೆ, ತಂತ್ರಜ್ಞಾನ, ನಾವೀನ್ಯತೆ, ಇಂಧನ, ಶಿಕ್ಷಣ, ರಕ್ಷಣೆ ಮತ್ತು ಬಾಹ್ಯಾಕಾಶದ ಅಭಿವೃದ್ಧಿಯಲ್ಲಿ ಸಹಕಾರ ನೀಡುವುದಾಗಿ ಒಪ್ಪಿಕೊಂಡರು" ಎಂದು ಪೋಸ್ಟ್ ಮಾಡಿದೆ.
CEPA ಒಪ್ಪಂದದ ವಿವರಗಳ ಕುರಿತು, ಸದ್ಯ ಸಭೆಯಲ್ಲಿ ಮಾತನಾಡಿದ ಒಪ್ಪಂದವು 2030 ರ ವೇಳೆಗೆ ದ್ವಿಪಕ್ಷೀಯ ವ್ಯಾಪಾರವನ್ನು $50 ಶತಕೋಟಿಗೆ ದ್ವಿಗುಣಗೊಳಿಸುವ ಗುರಿಯನ್ನು ಹೊಂದಿದೆ. ಅಲ್ಲದೇ ಭಾರತ ಮತ್ತು ಕೆನಡಾ ನಾಗರಿಕ ಪರಮಾಣು ಶಕ್ತಿಯಲ್ಲಿ ತಮ್ಮ ದೀರ್ಘಕಾಲದ ಸಹಕಾರವನ್ನು ಕೂಡಾ ಮತ್ತೆ ಮಾತಾಡಿತು ಮತ್ತು ದೀರ್ಘಾವಧಿಯ ಯುರೇನಿಯಂ ಪೂರೈಕೆ ವ್ಯವಸ್ಥೆಗಳು ಸೇರಿದಂತೆ, ಅದಕ್ಕಾಗಿ ಸಹಯೋಗವನ್ನು ವಿಸ್ತರಿಸಲು ನಡೆಯುತ್ತಿರುವ ಮಾತುಕತೆಗಳ ಬಗ್ಗೆಯೂ ಅಂಗೀಕರಿಸಲಾಯಿತು ಎಂದು ಹೇಳಲಾಗಿದೆ.
CEPA ಜೊತೆಗೆ, ನಾಯಕರು ಆಸ್ಟ್ರೇಲಿಯಾ-ಕೆನಡಾ-ಭಾರತ ತಂತ್ರಜ್ಞಾನ ಮತ್ತು ನಾವೀನ್ಯತೆ (ACITI) ಸಹಭಾಗಿತ್ವಕ್ಕೂ ಆಹ್ವಾನ ನೀಡಿದರು. ಇದು ನಿರ್ಣಾಯಕ ತಂತ್ರಜ್ಞಾನಗಳು, ಪರಮಾಣು ಶಕ್ತಿ ಮತ್ತು AI ನಲ್ಲಿ ತ್ರಿಪಕ್ಷೀಯ ಸಹಕಾರಕ್ಕೆ ಕಾರಣವಾಗಲಿದೆ.
ಇಬ್ಬರೂ ಪ್ರಧಾನಮಂತ್ರಿಗಳು ವ್ಯಾಪಾರ ಮತ್ತು ಹೂಡಿಕೆ, ರಕ್ಷಣೆ, ಶಿಕ್ಷಣ, ಬಾಹ್ಯಾಕಾಶ, ವಿಜ್ಞಾನ ಮತ್ತು ತಂತ್ರಜ್ಞಾನ, ಮತ್ತು ಇಂಧನ ಕ್ಷೇತ್ರಗಳಲ್ಲಿ ಸಹಕರಿಸುವ ಬಗ್ಗೆಯೂ ಚರ್ಚಿಸಿದರು. 2026 ರ ಫೆಬ್ರವರಿಯಲ್ಲಿ ಭಾರತ ಆಯೋಜಿಸಲಿರುವ AI ಶೃಂಗಸಭೆಗೆ ಪ್ರಧಾನಮಂತ್ರಿ ಕಾರ್ನಿ ಬೆಂಬಲ ವ್ಯಕ್ತಪಡಿಸಿದರು.
ಕೆನಡಾ ಮತ್ತು ಭಾರತ ಈ ಹಿಂದೆಯೂ ವ್ಯಾಪಾರ ಒಪ್ಪಂದವನ್ನು ಬಯಸಿದ್ದವು. ಭಾರತ-ಕೆನಡಾ ರಾಜತಾಂತ್ರಿಕ ಬಿಕ್ಕಟ್ಟುಗಳ ಹಿನ್ನೆಲೆಯಲ್ಲಿ, ಅಂದರೆ ಖಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಂತರ 2023 ರಲ್ಲಿ ರಾಜತಾಂತ್ರಿಕ ಬಿಕ್ಕಟ್ಟುಗಳು ಉದ್ಭವಿಸಿದವು.
ಆದರೆ ಮಾರ್ಚ್‌ನಲ್ಲಿ ಜಸ್ಟಿನ್ ಟ್ರುಡೊ ಬದಲಿಗೆ ಮಾರ್ಕ್ ಕಾರ್ನಿ ಅಧಿಕಾರ ವಹಿಸಿಕೊಂಡ ನಂತರ, ಮತ್ತೆ ಭಾರತ ಕೆನಡಾ ನಡುವೆ ಉತ್ತಮ ಸಂಬಂಧ ನಿರ್ಮಿಸುವ ಗುರಿ ಹೊಂದಿದ್ದಾರೆ.
More From GoodReturns

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಓಂ ಪವರ್ ಟ್ರಾನ್ಸ್ಮಿಷನ್ ಐಪಿಒ: ಹೂಡಿಕೆದಾರರ ಪಾಲಿಗೆ ಲಾಭದಾಯಕವೇ?

ಆರ್ಬಿಐ ನಿರ್ಧಾರದ ನಂತರ ನಿಮ್ಮ ಹಣಕ್ಕೆ ಯಾವುದು ಬೆಸ್ಟ್?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ



Click it and Unblock the Notifications