ಮೇ 16, ಭಾರತದಲ್ಲಿ ಇಂದಿನ ಚಿನ್ನದ ಬೆಲೆ: ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನಪ್ರಿಯರಿಗೆ ನಿನ್ನೆ ಖುಷಿ ನೀಡಿದ್ದ ಚಿನ್ನದ ಬೆಲೆ, ಇಂದು ಭಾರಿ ನಿರಾಸೆಗೆ ಎಡೆಮಾಡಿಕೊಟ್ಟಿದೆ. ಏಕೆಂದರೆ ನಿನ್ನೆ 24 ಕ್ಯಾರಟ್‌ನ 100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ ₹21,300 ಇಳಿಕೆಯಾಗಿದ್ದು. ಭಾರಿ ಬೆಲೆಯಲ್ಲಿ ಇಳಿಕೆಯಾಗಿದ್ದನ್ನು ಕಂಡ ಚಿನ್ನಪ್ರಿಯರು ನಿರಾಳವಾಗಿದ್ದರು. ಆದರೆ ಇಂದು ಅವರ ನಿರಾಳೆತೆಗೆ ನೀರೆರಚಿ ಎಬ್ಬಿಸಿದಂತಾಗಿದೆ. ಏಕೆಂದರೆ ನಿನ್ನೆ ದಾಖಲೆಯಷ್ಟು ಕುಸಿದಿದ್ದ ಚಿನ್ನದ ಬೆಲೆ, ಇಂದು ದಾಖಲೆಯಷ್ಟೇ ಏರಿಕೆಯಾಗಿದೆ.

ಭಾರತ-ಪಾಕಿಸ್ತಾನ ನಡುವಿನ ಸಂಘರ್ಷ ಕೊಂಚ ತಣ್ಣಗಾದ ಬೆನ್ನಲ್ಲೇ ಚಿನ್ನದ ಬೆಲೆಯು ಭಾರಿ ಪ್ರಮಾಣದಲ್ಲಿ ಏರಿಳಿತ ನೋಡುತ್ತಿದೆ. ಈ ಕುಸಿತವು ಮುಖ್ಯವಾಗಿ ಭಾರತ-ಪಾಕಿಸ್ತಾನ ಉದ್ವಿಗ್ನತೆ ಮತ್ತು ದುರ್ಬಲ ಜಾಗತಿಕ ಬೇಡಿಕೆಯಿಂದಾಗಿ ಸಂಭವಿಸಿದೆ. ಹೆಚ್ಚುವರಿಯಾಗಿ, ಯುಎಸ್ ಮತ್ತು ಚೀನಾ ಎರಡೂ ಸುಂಕ ಹೆಚ್ಚಳವನ್ನು 90 ದಿನಗಳವರೆಗೆ ವಿರಾಮಗೊಳಿಸಲು ಒಪ್ಪಿಕೊಂಡ ನಂತರ ಅಂತರರಾಷ್ಟ್ರೀಯ ಭಾವನೆ ಬದಲಾಯಿತು, ಇದು ಸುರಕ್ಷಿತ ಸ್ವತ್ತುಗಳ ತಕ್ಷಣದ ಆಕರ್ಷಣೆಯನ್ನು ಕಡಿಮೆ ಮಾಡಿತು.
ಹೂಡಿಕೆಗೆ ಆಸಕ್ತರಾಗಿರುವವರಿಗೆ ಈ ಪರಿಸ್ಥಿತಿ ಎರಡು ಬಗೆಯ ಪ್ರಭಾವ ಬೀರಬಹುದು.ಹೀಗಾಗಿ ಒಂದೆಡೆ ಬೆಲೆ ಇನ್ನಷ್ಟು ಏರಬಹುದು ಎಂಬ ನಿರೀಕ್ಷೆಯಿಂದ ಈಗಲೇ ಹೂಡಿಕೆ ಮಾಡೋದು ಸೂಕ್ತವೆಂಬ ಯೋಚನೆ,ಮತ್ತೊಂದೆಡೆ ಈಗ ತಕ್ಷಣ ಹೂಡಿಕೆಗೆ ಮುನ್ನುಡಿಯಿಟ್ಟರೆ ನಷ್ಟವೋ ಎಂಬ ಆತಂಕ.ಅಂತಾರಾಷ್ಟ್ರೀಯ ಮಾರುಕಟ್ಟೆಯ ಒತ್ತಡ,ಜಿಯೋಪಾಲಿಟಿಕಲ್ ಅನಿಶ್ಚಿತತೆಗಳು ಹಾಗೂ ರೂಪಾಯಿಯ ಮೌಲ್ಯ ಕುಸಿತ ಈ ಬೆಲೆ ಏರಿಕೆಗೆ ಪ್ರಮುಖ ಕಾರಣಗಳಾಗಿ ಗುರುತಿಸಲಾಗಿದೆ. ಹಾಗಾದರೆ ಇಂದು ಯಾವ್ಯಾವ ಕ್ಯಾರಟ್ ಚಿನ್ನದ ಬೆಲೆ ಎಷ್ಟು ಏರಿಕೆಯಾಗಿದೆ ಎಂದು ತಿಳಿಯುವುದಾದರೆ.
ಭಾರತದಲ್ಲಿ ಇಂದಿನ ಚಿನ್ನದ ಬೆಲೆ:
22 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿಇಂದಿನ ಚಿನ್ನದ ಬೆಲೆ ಏರಿಕೆಯಾಗಿದೆ. 22 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8,720 ಇದೆ.ಅಂದರೆ ನಿನ್ನೆ ₹8,610 ಆಗಿದ್ದು ಇಂದು ₹110 ಹೆಚ್ಚಳವಾಗಿದೆ. 22 ಕ್ಯಾರಟ್‌ನ ಚಿನ್ನದಬೆಲೆ 10 ಗ್ರಾಂಗೆ ₹87 ಸಾವಿರದ 200 ರೂ. ಇದೆ. ಅಂದರೆ ನಿನ್ನೆ 86 ಸಾವಿರದ 100 ರೂ. ಆಗಿದ್ದು ಇಂದು ₹1,100 ಹೆಚ್ಚಳವಾಗಿದೆ. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 8 ಲಕ್ಷದ 72 ಸಾವಿರ ರೂ. ಆಗಿದೆ. ಅಂದರೆ ನಿನ್ನೆ 8 ಲಕ್ಷ 61 ಸಾವಿರ ರೂ. ಆಗಿದ್ದು ಇಂದು ₹11,000 ಹೆಚ್ಚಳವಾಗಿದೆ.
24 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿಇಂದಿನ ಚಿನ್ನದ ಬೆಲೆ ಏರಿಕೆಯಾಗಿದೆ. 24 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹9,513 ಇದೆ. ಅಂದರೆ ನಿನ್ನೆ ₹9,393 ಆಗಿದ್ದು ಇಂದು ₹120 ಹೆಚ್ಚಳವಾಗಿದೆ. 24 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 95 ಸಾವಿರದ 130 ರೂ. ಇದೆ. ಅಂದರೆ ನಿನ್ನೆ 93 ಸಾವಿರದ 930 ರೂ. ಆಗಿದ್ದು ಇಂದು ₹1,200 ಹೆಚ್ಚಳವಾಗಿದೆ. ಹಾಗೆಯೇ 24 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 9 ಲಕ್ಷದ 51 ಸಾವಿರದ 300 ರೂ. ಆಗಿದೆ. ಅಂದರೆ ನಿನ್ನೆ 9 ಲಕ್ಷ 39 ಸಾವಿರದ 300 ರೂ. ಆಗಿದ್ದು ಇಂದು ₹12,000 ಹೆಚ್ಚಳವಾಗಿದೆ.
18 ಕ್ಯಾರಟ್ ಚಿನ್ನದ ಬೆಲೆ:
18 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹7,135 ಇದೆ. ಅಂದರೆ ನಿನ್ನೆಯ ಬೆಲೆ ₹7,045 ಆಗಿದ್ದು ಇಂದು ಪ್ರತಿ ಗ್ರಾಂಗೆ ₹90 ಏರಿಕೆಯಾಗಿದೆ. 18 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 71 ಸಾವಿರದ 350 ರೂ. ಇದೆ. ಅಂದರೆ ನಿನ್ನೆಯ ಬೆಲೆ 70 ಸಾವಿರದ 450 ರೂ. ಆಗಿದ್ದು ಇಂದು ಪ್ರತಿ ಗ್ರಾಂಗೆ ₹900 ಏರಿಕೆಯಾಗಿದೆ. ಹಾಗೆಯೇ ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 7 ಲಕ್ಷ 13 ಸಾವಿರದ 500 ರೂ. ಆಗಿದೆ. ಅಂದರೆ ನಿನ್ನೆಯ ಬೆಲೆ 7 ಲಕ್ಷದ 4 ಸಾವಿರದ 500 ರೂ. ಆಗಿದ್ದು ಇಂದು ₹9,000 ಏರಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,720 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,513 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,185 ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,720 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,513 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,135 ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,735 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,528 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,147 ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,720 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,513 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,135 ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,720 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,513 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,135 ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,720 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,513 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,135 ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,720 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,513 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,135 ಆಗಿದೆ.
ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,720 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,513 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,135 ಆಗಿದೆ.
ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,030 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,851 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,389 ಆಗಿದೆ.
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,725 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,518 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,139 ಆಗಿದೆ.
ಭಾರತದಲ್ಲಿ ಇಂದು ಬೆಳ್ಳಿ ಬೆಲೆ:
ಇನ್ನು ಭಾರತದಲ್ಲಿ ಬೆಳ್ಳಿ ಬೆಲೆಯಲ್ಲೂ ಯಾವುದೇ ಇಳಿಕೆಯಾಗಲಿ, ಏರಿಕೆಯಾಗಲೀ ಆಗಿಲ್ಲ. ಅಂದರೆ ಪ್ರತಿ ಗ್ರಾಂ ಬೆಳ್ಳಿಗೆ ₹97 ಇದೆ. ಪ್ರತಿ ಹತ್ತು ಗ್ರಾಂ ಬೆಳ್ಳಿ ಬೆಲೆಗೆ ₹970 ಆಗಿದೆ. ಹಾಗೆಯೇ ಪ್ರತಿ 100 ಗ್ರಾಂ ಬೆಳ್ಳಿಗೆ ₹9,700 ಆಗಿದ್ದು, ಒಂದು ಕೆ.ಜಿ ಬೆಳ್ಳಿಗೆ ₹97,000 ಆಗಿದೆ. ಬೆಳ್ಳಿ ಬೆಲೆಯಲ್ಲೂ ಯಾವುದೇ ಬದಲಾವಣೆಯಾಗಿಲ್ಲ.
ಸ್ಪಾಟ್ ಗೋಲ್ಡ್ ವಿವರ:
ರಾಯಿಟರ್ಸ್ ನೀಡಿರುವ ವರದಿ ಪ್ರಕಾರ ಮೇ 16ರಂದು, 4:29 GMT ವೇಳೆಗೆ ಸ್ಪಾಟ್ ಚಿನ್ನದ ಬೆಲೆ 0.8% ರಷ್ಟು ಇಳಿಕೆ ನೋಡಿದೆ. ಅಲ್ಲದೇ ಸ್ಪಾಟ್ ಚಿನ್ನದ ದರವು ಪ್ರತಿ ಔನ್ಸ್‌ಗೆ $3,213.56ರಷ್ಟು ವಹಿವಾಟು ನಡೆಸಿದೆ. 2025ರ ಮೇ ತಿಂಗಳಲ್ಲಿ ಬಂಗಾರದ ಮೌಲ್ಯ ತೀವ್ರ ಕುಸಿತಕ್ಕೊಳಗಾಗಿದ್ದು, ಡಾಲರ್ ಬಲ, ವ್ಯಾಪಾರ ಚಟುವಟಿಕೆಗಳು ಸ್ಥಿರವಾಗಿರುವುದು ಮತ್ತು ಗರಿಷ್ಠ ಬಡ್ಡಿದರ ನಿರೀಕ್ಷೆಗಳೇ ಇದರ ಹಿಂದೆ ಪ್ರಮುಖ ಕಾರಣಗಳಾಗಿವೆ.
ಚಿನ್ನದ ಬೆಲೆ ಏರಿಕೆ-ಇಳಿಕೆಗೆ ಕಾರಣವೇನು?
ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಗೆ ನಾನಾ ಕಾರಣಗಳಿರುತ್ತವೆ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ.
ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು.


Click it and Unblock the Notifications