ಮೇ 18, ಭಾರತದಲ್ಲಿ ಇಂದಿನ ಚಿನ್ನದ ಬೆಲೆ: ಅಬ್ಬಬ್ಬಾ..ಈ ಪರಿಯ ಚಿನ್ನದ ಬೆಲೆ ಏರಿಕೆಯಾದ್ರೆ ಚಿನ್ನ ಕೊಳ್ಳುವುದಕ್ಕಾಗುತ್ತಾ? ಮದುವೆ ಸಮಾರಂಭಗಳ ಸೀಸನ್ ಆದ, ಮೇ ತಿಂಗಳಿನಲ್ಲಿ ಚಿನ್ನದ ಬೆಲೆಯು ಹಾವು ಏಣಿ ಆಟವಾಡುತ್ತಿದೆ. ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಏರಿಕೆಯಾಗಿದೆ. ಕಳೆದ ವಾರದಲ್ಲಿ ಭಾರಿ ಏರಿಕೆ ಹಾಗೂ ಭಾರಿ ಇಳಿಕೆಯನ್ನು ನೋಡಿದ್ದ ಬಂಗಾರ, ಈ ವಾರದ ಆರಂಭದಲ್ಲಿಯೇ ಏರಿಕೆ ನೋಡಿದೆ. ಇದು ಚಿನ್ನ ಖರೀದಿದಾರರ ಕನಸಿಗೆ ನಿರಾಸೆಯುಂಟು ಮಾಡಿದೆ. ಅದರಲ್ಲೂ ಇದು ಮದುವೆ ಸಮಾರಂಭಗಳ ಸೀಸನ್ ಆಗಿರುವುದರಿಂದ ಗ್ರಾಹಕರು ಚಿನ್ನದ ಬೆಲೆ ಇಳಿಕೆಗಾಗಿಯೇ ಕಾಯುತ್ತಿರುತ್ತಾರೆ. ಹೀಗಿರುವಾಗ ಚಿನ್ನದ ಬೆಲೆಯ ಏರಿಕೆಯಾಗುತ್ತಿದ್ದು ಜೇಬು ಖಾಲಿ ಮಾಡುವುದಂತೂ ಖಚಿತ.

ಇನ್ನು ಕೆಲವು ಚಿನ್ನವು ಎಷ್ಟೇ ದುಬಾರಿಯಾದರೂ ಚಿನ್ನದ ಮೇಲೆ ಹೂಡಿಕೆ ಮಾಡಲು ಅಂಜುವುದಿಲ್ಲ. ಏಕೆಂದರೆ ಚಿನ್ನವು ಎಂದೂ ಕರಗದ ಸಂಪತ್ತು. ವೃದ್ಧಿಯಾಗುವ ಆರ್ಥಿಕ ಸಾಧನ. ಹೀಗಾಗಿ ಹೂಡಿಕೆ ಮಾಡ ಬಯಸುವವರು ಮಾಡುತ್ತಲೇ ಇರುತ್ತಾರೆ. ಆದರೂ ಕೆಲವು ಹೂಡಿಕೆದಾರರಿಗೆ ಈ ಪರಿಸ್ಥಿತಿ ಎರಡು ಬಗೆಯ ಪ್ರಭಾವ ಬೀರಬಹುದು.ಹೀಗಾಗಿ ಒಂದೆಡೆ ಬೆಲೆ ಇನ್ನಷ್ಟು ಏರಬಹುದು ಎಂಬ ನಿರೀಕ್ಷೆಯಿಂದ ಈಗಲೇ ಹೂಡಿಕೆ ಮಾಡೋದು ಸೂಕ್ತವೆಂಬ ಯೋಚನೆ,ಮತ್ತೊಂದೆಡೆ ಈಗ ತಕ್ಷಣ ಹೂಡಿಕೆಗೆ ಮುನ್ನುಡಿಯಿಟ್ಟರೆ ನಷ್ಟವೋ ಎಂಬ ಆತಂಕ.ಅಂತಾರಾಷ್ಟ್ರೀಯ ಮಾರುಕಟ್ಟೆಯ ಒತ್ತಡ,ಜಿಯೋಪಾಲಿಟಿಕಲ್ ಅನಿಶ್ಚಿತತೆಗಳು ಹಾಗೂ ರೂಪಾಯಿಯ ಮೌಲ್ಯ ಕುಸಿತ ಈ ಬೆಲೆ ಏರಿಕೆಗೆ ಪ್ರಮುಖ ಕಾರಣಗಳಾಗಿ ಗುರುತಿಸಲಾಗಿದೆ. ಹಾಗಾದರೆ ಇಂದು ಯಾವ್ಯಾವ ಕ್ಯಾರಟ್ ಚಿನ್ನದ ಬೆಲೆ ಎಷ್ಟು ಏರಿಕೆಯಾಗಿದೆ ಎಂದು ತಿಳಿಯುವುದಾದರೆ.
ಭಾರತದಲ್ಲಿ ಇಂದಿನ ಚಿನ್ನದ ಬೆಲೆ:
22 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿಇಂದಿನ ಚಿನ್ನದ ಬೆಲೆ ಏರಿಕೆಯಾಗಿದೆ. 22 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8,755 ಇದೆ.ಅಂದರೆ ನಿನ್ನೆ ₹8,720 ಆಗಿದ್ದು ಇಂದು ₹35 ಹೆಚ್ಚಳವಾಗಿದೆ. 22 ಕ್ಯಾರಟ್‌ನ ಚಿನ್ನದಬೆಲೆ 10 ಗ್ರಾಂಗೆ ₹87 ಸಾವಿರದ 550 ರೂ. ಇದೆ. ಅಂದರೆ ನಿನ್ನೆ 87 ಸಾವಿರದ 200 ರೂ. ಆಗಿದ್ದು ಇಂದು ₹350 ಹೆಚ್ಚಳವಾಗಿದೆ. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 8 ಲಕ್ಷದ 75 ಸಾವಿರದ 500 ರೂ. ಆಗಿದೆ. ಅಂದರೆ ನಿನ್ನೆ 8 ಲಕ್ಷ 72 ಸಾವಿರ ರೂ. ಆಗಿದ್ದು ಇಂದು ₹3,500 ಹೆಚ್ಚಳವಾಗಿದೆ.
24 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿಇಂದಿನ ಚಿನ್ನದ ಬೆಲೆ ಏರಿಕೆಯಾಗಿದೆ. 24 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹9,551 ಇದೆ. ಅಂದರೆ ನಿನ್ನೆ ₹9,513 ಆಗಿದ್ದು ಇಂದು ₹38 ಹೆಚ್ಚಳವಾಗಿದೆ. 24 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 95 ಸಾವಿರದ 510 ರೂ. ಇದೆ. ಅಂದರೆ ನಿನ್ನೆ 95 ಸಾವಿರದ 130 ರೂ. ಆಗಿದ್ದು ಇಂದು ₹380 ಹೆಚ್ಚಳವಾಗಿದೆ. ಹಾಗೆಯೇ 24 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 9 ಲಕ್ಷದ 55 ಸಾವಿರದ 100 ರೂ. ಆಗಿದೆ. ಅಂದರೆ ನಿನ್ನೆ 9 ಲಕ್ಷ 51 ಸಾವಿರದ 300 ರೂ. ಆಗಿದ್ದು ಇಂದು ₹3,800 ಹೆಚ್ಚಳವಾಗಿದೆ.
18 ಕ್ಯಾರಟ್ ಚಿನ್ನದ ಬೆಲೆ:
18 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹7,163 ಇದೆ. ಅಂದರೆ ನಿನ್ನೆಯ ಬೆಲೆ ₹7,135 ಆಗಿದ್ದು ಇಂದು ಪ್ರತಿ ಗ್ರಾಂಗೆ ₹28 ಏರಿಕೆಯಾಗಿದೆ. 18 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 71 ಸಾವಿರದ 630 ರೂ. ಇದೆ. ಅಂದರೆ ನಿನ್ನೆಯ ಬೆಲೆ 71 ಸಾವಿರದ 350 ರೂ. ಆಗಿದ್ದು ಇಂದು ಪ್ರತಿ ಗ್ರಾಂಗೆ ₹280 ಏರಿಕೆಯಾಗಿದೆ. ಹಾಗೆಯೇ ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 7 ಲಕ್ಷ 16 ಸಾವಿರದ 300 ರೂ. ಆಗಿದೆ. ಅಂದರೆ ನಿನ್ನೆಯ ಬೆಲೆ 7 ಲಕ್ಷದ 13 ಸಾವಿರದ 500 ರೂ. ಆಗಿದ್ದು ಇಂದು ₹2,800 ಏರಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,755 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,551 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,210 ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,755 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,551 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,163 ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,770 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,566 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,176 ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,755 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,551 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,163 ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,755 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,551 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,163 ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,755 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,551 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,163 ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,755 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,551 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,163 ಆಗಿದೆ.
ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,755 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,551 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,163 ಆಗಿದೆ.
ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,760 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,556 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,168 ಆಗಿದೆ.
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,760 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,556 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,168 ಆಗಿದೆ.
ಭಾರತದಲ್ಲಿ ಇಂದು ಬೆಳ್ಳಿ ಬೆಲೆ:
ಇನ್ನು ಭಾರತದಲ್ಲಿ ಇಂದು ಬೆಳ್ಳಿ ಬೆಲೆಯಲ್ಲೂ ಏರಿಕೆ ನೋಡಬಹುದು. ಪ್ರತಿ ಗ್ರಾಂ ಬೆಳ್ಳಿ ಬೆಲೆಗೆ ಇಂದು ₹98 ಇದೆ. ನಿನ್ನೆ ಬೆಳ್ಳಿ ಬೆಲೆ ₹97 ಆಗಿದ್ದು ಇಂದು ₹1 ಹೆಚ್ಚಳವಾಗಿದೆ. 10 ಗ್ರಾಂ ಬೆಳ್ಳಿ ಬೆಲೆಗೆ ಇಂದು ₹980 ಇದೆ. ನಿನ್ನೆ ಬೆಳ್ಳಿ ಬೆಲೆ ₹970 ಆಗಿದ್ದು ಇಂದು ₹10 ಹೆಚ್ಚಳವಾಗಿದೆ. 100 ಗ್ರಾಂ ಬೆಳ್ಳಿ ಬೆಲೆಗೆ ಇಂದು ₹9,800 ಇದೆ. ನಿನ್ನೆ ಬೆಳ್ಳಿ ಬೆಲೆ ₹9,700 ಆಗಿದ್ದು ಇಂದು ₹100 ಹೆಚ್ಚಳವಾಗಿದೆ. ಹಾಗೆಯೇ ಇಂದು 100 ಗ್ರಾಂ ಬೆಳ್ಳಿ ಬೆಲೆಗೆ ಇಂದು ₹98,000 ಇದೆ. ನಿನ್ನೆ ಬೆಳ್ಳಿ ಬೆಲೆ ₹97,000 ಆಗಿದ್ದು ಇಂದು ₹1,000 ಹೆಚ್ಚಳವಾಗಿದೆ.
ಸ್ಪಾಟ್ ಚಿನ್ನದ ಬೆಲೆ:
ರಾಯಿಟರ್ಸ್ ನೀಡಿರುವ ವರದಿ ಪ್ರಕಾರ ಮೇ 19ರಂದು ಸ್ಪಾಟ್ ಚಿನ್ನದ ಬೆಲೆಯು 04:45 GMT ವೇಳೆಗೆ, 0.4% ಏರಿಕೆ ನೋಡಿದೆ. ಅಂದರೆ ಇದು ಪ್ರತಿ ಔನ್ಸ್‌ಗೆ $3,216.29 ವಹಿವಾಟು ನಡೆಸಿದೆ. ಹಾಗೆಯೇ ಅಮೆರಿಕದ ಫ್ಯೂಚರ್ ಗೋಲ್ಡ್ ಕೂಡ 1% ಏರಿಕೆ ನೋಡಿದೆ. ಇದು $3,219.20 ವಹಿವಾಟು ನಡೆಸಿದೆ.
ಚಿನ್ನದ ಬೆಲೆ ಏರಿಕೆ-ಇಳಿಕೆಗೆ ಕಾರಣವೇನು?
ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಗೆ ನಾನಾ ಕಾರಣಗಳಿರುತ್ತವೆ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ.
ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು.


Click it and Unblock the Notifications