ಮೇ 21, ಭಾರತದಲ್ಲಿ ಇಂದಿನ ಚಿನ್ನದ ಬೆಲೆ: ಅಬ್ಬಬ್ಬಾ ಇದೇನು..ಚಿನ್ನದ ಬೆಲೆ ಇಷ್ಟೊಂದು ಏರಿಕೆಯಾಗಿದೆ. ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಹಾವು-ಏಣಿ ಆಟದಂತೆ ಇಳಿಕೆ-ಏರಿಕೆಯಾಗುವುದು ಸಾಮಾನ್ಯ. ಆದರೆ ಮೇ ತಿಂಗಳಿನಲ್ಲಿ ದಾಖಲೆ ಪ್ರಮಾಣದ ಬೆಲೆ ಏರಿಕೆ ಹಾಗೂ ಇಳಿಕೆಯನ್ನು ನೋಡುತ್ತಿದ್ದೇವೆ. ಒಂದು ದಿನ ದಿಢೀರ್ ದಾಖಲೆಯಷ್ಟು ಏರಿಕೆಯಾದರೆ, ಮತ್ತೊಂದು ದಿನ ದಿಢೀರ್ ದಾಖಲೆಯಷ್ಟು ಇಳಿಕೆ. ಚಿನ್ನದ ಬೆಲೆಯ ಈ ಏರಿಳಿತಗಳ ಮಧ್ಯೆ ಚಿನ್ನವನ್ನು ಕೊಳ್ಳುವುದೋ ಬೇಡವೋ ಎಂಬಂತೆ ಭಾಸವಾಗುತ್ತಿದೆ ಜನರಿಗೆ. ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಭಾರಿ ಗೊಂದಲ ಎದುರಾಗುತ್ತಿದೆ. ಇನ್ನು ಇದು ಮದುವೆ-ಸಮಾರಂಭಗಳ ಸೀಸನ್ ಆಗಿರುವುದರಿಂದ, ಜನರಿಗೆ ಬರೆ ಎಳೆದಂತಾಗಿದೆ.

ಭಾರತ-ಪಾಕಿಸ್ತಾನ ನಡುವಿನ ಸಂಘರ್ಷ ಕೊಂಚ ತಣ್ಣಗಾದ ಬೆನ್ನಲ್ಲೇ ಚಿನ್ನದ ಬೆಲೆಯು ಭಾರಿ ಪ್ರಮಾಣದಲ್ಲಿ ಏರಿಳಿತ ನೋಡುತ್ತಿದೆ. ಈ ಕುಸಿತವು ಮುಖ್ಯವಾಗಿ ಭಾರತ-ಪಾಕಿಸ್ತಾನ ಉದ್ವಿಗ್ನತೆ ಮತ್ತು ದುರ್ಬಲ ಜಾಗತಿಕ ಬೇಡಿಕೆಯಿಂದಾಗಿ ಸಂಭವಿಸಿದೆ. ಚಿನ್ನದ ಬೆಲೆಯು ಮತ್ತೆ ಹತ್ತು ಲಕ್ಷ ಸಮೀಪಕ್ಕೆ ಬಂದುಬಿಟ್ಟಿದೆ. ಹೂಡಿಕೆಗೆ ಆಸಕ್ತರಾಗಿರುವವರಿಗೆ ಈ ಪರಿಸ್ಥಿತಿ ಎರಡು ಬಗೆಯ ಪ್ರಭಾವ ಬೀರಬಹುದು.ಹೀಗಾಗಿ ಒಂದೆಡೆ ಬೆಲೆ ಇನ್ನಷ್ಟು ಏರಬಹುದು ಎಂಬ ನಿರೀಕ್ಷೆಯಿಂದ ಈಗಲೇ ಹೂಡಿಕೆ ಮಾಡೋದು ಸೂಕ್ತವೆಂಬ ಯೋಚನೆ,ಮತ್ತೊಂದೆಡೆ ಈಗ ತಕ್ಷಣ ಹೂಡಿಕೆಗೆ ಮುನ್ನುಡಿಯಿಟ್ಟರೆ ನಷ್ಟವೋ ಎಂಬ ಆತಂಕ.ಅಂತಾರಾಷ್ಟ್ರೀಯ ಮಾರುಕಟ್ಟೆಯ ಒತ್ತಡ,ಜಿಯೋಪಾಲಿಟಿಕಲ್ ಅನಿಶ್ಚಿತತೆಗಳು ಹಾಗೂ ರೂಪಾಯಿಯ ಮೌಲ್ಯ ಕುಸಿತ ಈ ಬೆಲೆ ಏರಿಕೆಗೆ ಪ್ರಮುಖ ಕಾರಣಗಳಾಗಿ ಗುರುತಿಸಲಾಗಿದೆ. ಹಾಗಾದರೆ ಇಂದು ಯಾವ್ಯಾವ ಕ್ಯಾರಟ್ ಚಿನ್ನದ ಬೆಲೆ ಎಷ್ಟು ಏರಿಕೆಯಾಗಿದೆ ಎಂದು ತಿಳಿಯುವುದಾದರೆ.
ಭಾರತದಲ್ಲಿ ಇಂದಿನ ಚಿನ್ನದ ಬೆಲೆ:
22 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿಇಂದಿನ ಚಿನ್ನದ ಬೆಲೆ ಏರಿಕೆಯಾಗಿದೆ. 22 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8,930 ಇದೆ.ಅಂದರೆ ನಿನ್ನೆ ₹8,710 ಆಗಿದ್ದು ಇಂದು ₹220 ಹೆಚ್ಚಳವಾಗಿದೆ. 22 ಕ್ಯಾರಟ್‌ನ ಚಿನ್ನದಬೆಲೆ 10 ಗ್ರಾಂಗೆ ₹89 ಸಾವಿರದ 300 ರೂ. ಇದೆ. ಅಂದರೆ ನಿನ್ನೆ 87 ಸಾವಿರದ 100 ರೂ. ಆಗಿದ್ದು ಇಂದು ₹2,200 ಹೆಚ್ಚಳವಾಗಿದೆ. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 8 ಲಕ್ಷದ 93 ಸಾವಿರ ರೂ. ಆಗಿದೆ. ಅಂದರೆ ನಿನ್ನೆ 8 ಲಕ್ಷ 71 ಸಾವಿರ ರೂ. ಆಗಿದ್ದು ಇಂದು ₹22,000 ಹೆಚ್ಚಳವಾಗಿದೆ.
24 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿಇಂದಿನ ಚಿನ್ನದ ಬೆಲೆ ಏರಿಕೆಯಾಗಿದೆ. 24 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹9,742 ಇದೆ. ಅಂದರೆ ನಿನ್ನೆ ₹9,502 ಆಗಿದ್ದು ಇಂದು ₹240 ಹೆಚ್ಚಳವಾಗಿದೆ. 24 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 97 ಸಾವಿರದ 420 ರೂ. ಇದೆ. ಅಂದರೆ ನಿನ್ನೆ 95 ಸಾವಿರದ 20 ರೂ. ಆಗಿದ್ದು ಇಂದು ₹2,400 ಹೆಚ್ಚಳವಾಗಿದೆ. ಹಾಗೆಯೇ 24 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 9 ಲಕ್ಷದ 74 ಸಾವಿರದ 200 ರೂ. ಆಗಿದೆ. ಅಂದರೆ ನಿನ್ನೆ 9 ಲಕ್ಷ 50 ಸಾವಿರದ 200 ರೂ. ಆಗಿದ್ದು ಇಂದು ₹24,000 ಹೆಚ್ಚಳವಾಗಿದೆ.
18 ಕ್ಯಾರಟ್ ಚಿನ್ನದ ಬೆಲೆ:
18 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹7,307 ಇದೆ. ಅಂದರೆ ನಿನ್ನೆಯ ಬೆಲೆ ₹7,127 ಆಗಿದ್ದು ಇಂದು ಪ್ರತಿ ಗ್ರಾಂಗೆ ₹180 ಏರಿಕೆಯಾಗಿದೆ. 18 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 73 ಸಾವಿರದ 70 ರೂ. ಇದೆ. ಅಂದರೆ ನಿನ್ನೆಯ ಬೆಲೆ 71 ಸಾವಿರದ 270 ರೂ. ಆಗಿದ್ದು ಇಂದು ಪ್ರತಿ ಗ್ರಾಂಗೆ ₹1,800 ಏರಿಕೆಯಾಗಿದೆ. ಹಾಗೆಯೇ ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 7 ಲಕ್ಷ 30 ಸಾವಿರದ 700 ರೂ. ಆಗಿದೆ. ಅಂದರೆ ನಿನ್ನೆಯ ಬೆಲೆ 7 ಲಕ್ಷದ 12 ಸಾವಿರದ 700 ರೂ. ಆಗಿದ್ದು ಇಂದು ₹18,000 ಏರಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,930 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,742 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,360 ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,93 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,742 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,307 ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,945 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,757 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,319 ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,930 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,742 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,307 ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,930 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,742 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,307 ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,930 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,742 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,307 ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,930 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,742 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,307 ಆಗಿದೆ.
ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,930 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,742 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,307 ಆಗಿದೆ.
ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,935 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,747 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,311 ಆಗಿದೆ.
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,935 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,747 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,311 ಆಗಿದೆ.
ಭಾರತದಲ್ಲಿ ಇಂದಿನ ಬೆಳ್ಳಿ ಬೆಲೆ:
ಭಾರತದಲ್ಲಿ ಇಂದು ಬೆಳ್ಳಿ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಇಂದು ಒಂದು ಗ್ರಾಂ ಬೆಳ್ಳಿಗೆ ಇದ್ದು ₹100 ನಿನ್ನೆ ಈ ಬೆಲೆ ₹97 ಆಗಿತ್ತು. ಅಂದರೆ ನಿನ್ನೆಗಿಂತ ಇಂದಿಗೆ ₹3 ರಷ್ಟು ಇಳಿಕೆಯಾಗಿದೆ. 10 ಗ್ರಾಂ ಬೆಳ್ಳಿಗೆ ₹1,000 ಇದ್ದು ನಿನ್ನೆ ಈ ಬೆಲೆ ₹970 ಆಗಿತ್ತು. ಅಂದರೆ ನಿನ್ನೆಗಿಂತ ಇಂದಿಗೆ ₹30 ರಷ್ಟು ಇಳಿಕೆಯಾಗಿದೆ. 100 ಗ್ರಾಂ ಬೆಳ್ಳಿಗೆ ₹10,000 ಇದ್ದು ನಿನ್ನೆ ಈ ಬೆಲೆ ₹9,700 ಆಗಿತ್ತು. ಅಂದರೆ ನಿನ್ನೆಗಿಂತ ಇಂದಿಗೆ ₹300 ರಷ್ಟು ಇಳಿಕೆಯಾಗಿದೆ. ಒಂದು ಕೆ.ಜಿ ಬೆಳ್ಳಿಗೆ ₹1,00,000 ಇದ್ದು ನಿನ್ನೆ ಈ ಬೆಲೆ ₹97,000 ಆಗಿತ್ತು. ಅಂದರೆ ನಿನ್ನೆಗಿಂತ ಇಂದಿಗೆ ₹3,000 ರಷ್ಟು ಇಳಿಕೆಯಾಗಿದೆ.
ಸ್ಪಾಟ್ ಚಿನ್ನದ ವಿವರ:
ರಾಯಿಟರ್ಸ್ ನೀಡಿರುವ ವರದಿ ಪ್ರಕಾರ, ಮೇ 21ರಂದು ಸ್ಪಾಟ್ ಚಿನ್ನದ ಬೆಲೆಯು ಒಂದು ವಾರಕ್ಕೂ ಹೆಚ್ಚು ಕಾಲದ ಗರಿಷ್ಠ ಮಟ್ಟವನ್ನು ತಲುಪಿದೆ ಎಂದು ಹೇಳಲಾಗ್ತಿದೆ. ಇಂದು ಸ್ಪಾಟ್ ಚಿನ್ನದ ದರದಲ್ಲಿ 0.5% ಹೆಚ್ಚಾಗಿದ್ದು, ಪ್ರತಿ ಒನ್ಸ್‌ಗೆ $3,305.39 ರಷ್ಟು ವಹಿವಾಟು ನಡೆಸಿದೆ. ಈ ಬೆಲೆ ಏರಿಕೆಗೆ ಕಾರಣವಾಗಿ ಅಮೆರಿಕದ ಡಾಲರ್ ದುರ್ಬಲವಾಗಿರುವುದು ಮತ್ತು ಅಮೆರಿಕದ ಹಣಕಾಸು ನೀತಿಗಳ ಕುರಿತು ಹೆಚ್ಚುತ್ತಿರುವ ಆತಂಕಗಳನ್ನು ಮಾಡಬಹುದು.
ಚಿನ್ನದ ಬೆಲೆ ಏರಿಕೆ-ಇಳಿಕೆಗೆ ಕಾರಣವೇನು?
ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಗೆ ನಾನಾ ಕಾರಣಗಳಿರುತ್ತವೆ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ.
ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು. ಹೀಗೆ ನಾನಾ ಕಾರಣಗಳಿಂದ ಚಿನ್ನದ ಬೆಲೆ ಏರಿಳಿತ ನೋಡುತ್ತಿವೆ.


Click it and Unblock the Notifications