Today's Gold Rate India: ಚಿನ್ನಪ್ರಿಯರಿಗೆ ಇಂದೂ ಖುಷಿಸುದ್ದಿ..24K ಚಿನ್ನದಲ್ಲಿ ₹1,100 ಇಳಿಕೆ..! 22K,18K ಚಿನ್ನಕ್ಕೆಷ್ಟು?

ಕಳೆದ ಎರಡ್ಮೂರು ದಿನಗಳ ಹಿಂದೆ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ ನೋಡಿದ್ದ ಚಿನ್ನಪ್ರಿಯರಿಗೆ, ಇಂದು ಕೂಡ ಖುಷಿ ಸುದ್ದಿ ಇದೆ. ಅದೇನೆಂದರೆ ಭಾರತೀಯ ಮಾರುಕಟ್ಟೆಯಲ್ಲಿ ಇಂದು ಕೂಡ ಚಿನ್ನದ ಬೆಲೆ ಇಳಿಕೆಯಾಗಿದೆ. ಭಾರಿ ಪ್ರಮಾಣದಲ್ಲಿ ಇಳಿಕೆಯಾಗದಿದ್ದರೂ ಏರಿಕೆಯಾಗಿಲ್ಲ ಎಂಬ ಸಮಾಧಾನವಂತೂ ಪಡಬಹುದು. ಏಕೆಂದರೆ ಚಿನ್ನದ ಬೆಲೆ ಏರಿಕೆಯಾದರೆ ಗಗನ ನೋಡುತ್ತದೆ. ಇಳಿಕೆಯಾದರೆ ಕೊಂಚವೇ ಪ್ರಮಾಣದಲ್ಲಿ ಇಳಿಕೆಯಾಗುತ್ತದೆ. ಆದರೆ ನಿನ್ನೆ ಮಾತ್ರ ದಾಖಲೆಯ ಇಳಿಕೆ ನೋಡಿರುವ ಚಿನ್ನ, ಇಂದು ಕೊಂಚ ಬೆಲೆಯಲ್ಲಿ ಇಳಿಕೆಯಾದರೂ ನಿಭಾಯಿಸಬಹುದಂತಾಗಿದೆ. ಏಕೆಂದರೆ ಭಾರತೀಯರು ಅತಿ ಹೆಚ್ಚು ನಂಬಿಕೆಯಿಂದ ಮಾಡುವ ಹೂಡಿಕೆ ಚಿನ್ನವೇ ಆಗಿರುತ್ತದೆ. ಹೀಗಾಗಿ ಭಾರತದಲ್ಲಿ ಚಿನ್ನಕ್ಕೆ ಹೆಚ್ಚು ಡಿಮ್ಯಾಂಡ್ ಇದೆ.

Today's Gold Rate India: ಚಿನ್ನಪ್ರಿಯರಿಗೆ ಇಂದೂ ಖುಷಿಸುದ್ದಿ..!

ಹೌದು, ಭಾರತದಲ್ಲಿ ಚಿನ್ನಕ್ಕೆ ಒಂದು ಮಹತ್ವವಾದ ಸ್ಥಾನವಿದೆ. ಚಿನ್ನವೆಂದರೆ ಭಾರತೀಯರಿಗೆ ಅಚ್ಚು ಮೆಚ್ಚು. ಒಂದು ಹಂತದಲ್ಲಿ ದೊಡ್ಡ ಮಟ್ಟದ ಸಂಪತ್ತು ಎಂತಲೂ ಹೇಳಬಹುದು. ದೊಡ್ಡ ಮಟ್ಟದ ಹೂಡಿಕೆ ಸಾಧನವಾಗಿರುವ ಚಿನ್ನ, ಭಾರತದಲ್ಲಿ ಪ್ರತಿಷ್ಠೆಯ ಸಂಕೇತವೂ ಹೌದು. ಇನ್ನು ಮಹಿಳೆಯರಿಗಂತೂ ಚಿನ್ನದ ಮೇಲಿರುವ ಪ್ರೀತಿ ಅಷ್ಟಿಷ್ಟಲ್ಲ. ಚಿನ್ನ ಎಂದರೆ ಪ್ರಾಣ ಬಿಡುತ್ತಾರೆ. ಸಭೆ ಸಮಾರಂಭಗಳಲ್ಲಿ ಪ್ರತಿಷ್ಠೆ ತಂದುಕೊಡುವುದೇ ಚಿನ್ನ. ಅತ್ಯಂತ ಆಕರ್ಷಣೀಯವಾಗಿರುವ ಚಿನ್ನಕ್ಕೆ, ಈಗ ಎಲ್ಲಿಲ್ಲದ ಬೇಡಿಕೆ. ಅದರಲ್ಲೂ ಮಹಿಳೆಯರಿಗೆ ಏನೇ ಕೊಟ್ಟರೂ ಚಿನ್ನ ಕೊಟ್ಟಾಗ ಆಗುವ ಖುಷಿ ಮತ್ತೆಲ್ಲೂ ಸಿಗುವುದಿಲ್ಲ. ಆಭರಣದ ರೂಪದಲ್ಲಿ ಮಹಿಳೆಯರಿಗೆ ಆಕರ್ಷಣೆ ನೀಡುವ ಈ ಚಿನ್ನಕ್ಕೆ ಭಾರತದಲ್ಲಿ ದಿನೇ ದಿನೆ ಡಿಮ್ಯಾಂಡ್ ಹೆಚ್ಚುತ್ತಲೇ ಇದೆ..ಹಾಗಾದರೆ ಇಂದು ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆಯಾಗಿದೆ ಎಂದು ತಿಳಿಯಿರಿ. ಮೊದಲು ಚಿನ್ನದ ಬೆಲೆಯಲ್ಲಿನ ಬದಲಾವಣೆ ಬಗ್ಗೆ ತಿಳಿದು, ನಂತರ ಈ ಏರಿಳಿತಗಳಿಗೆ ಕಾರಣ ಏನೆಂದು ಓದಿರಿ.

ಭಾರತದಲ್ಲಿ ಇಂದಿನ ಚಿನ್ನದ ಬೆಲೆ:

22 ಕ್ಯಾರಟ್ ಚಿನ್ನದ ಬೆಲೆ:

ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹9,005 ಆಗಿದೆ. ನಿನ್ನೆ ಇದರ ಬೆಲೆ ₹9,015 ಆಗಿದ್ದು ನಿನ್ನೆಗಿಂತ ಇಂದು, ₹10 ಕುಸಿತ ಕಂಡಿದೆ. ಹಾಗೆಯೇ 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹90,050 ಆಗಿದೆ. ನಿನ್ನೆಯ ಬೆಲೆ ₹90,150 ಆಗಿದ್ದು ನಿನ್ನೆಗಿಂತ ಇಂದಿಗೆ ₹100 ಕಡಿಮೆಯಾಗಿದೆ. ಇನ್ನು 22 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು ₹9,00,500 ರೂ. ಆಗಿದೆ. ನಿನ್ನೆಯ ಬೆಲೆ ₹9,01,500 ಆಗಿದ್ದು ನಿನ್ನೆಗಿಂತ ಇಂದು ₹1,000 ಇಳಿಕೆಯಾಗಿದೆ.

24 ಕ್ಯಾರಟ್ ಚಿನ್ನದ ಬೆಲೆ:

ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹9,824 ಆಗಿದೆ. ನಿನ್ನೆ ಇದರ ಬೆಲೆ ₹9,835 ಆಗಿದ್ದು ನಿನ್ನೆಗಿಂತ ಇಂದು, ₹11 ಕುಸಿತ ಕಂಡಿದೆ. ಹಾಗೆಯೇ 24 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹98,240 ಆಗಿದೆ. ನಿನ್ನೆಯ ಬೆಲೆ ₹98,350 ಆಗಿದ್ದು ನಿನ್ನೆಗಿಂತ ಇಂದಿಗೆ ₹110 ಕಡಿಮೆಯಾಗಿದೆ. ಇನ್ನು 24 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು ₹9,82,400 ಆಗಿದೆ. ನಿನ್ನೆಯ ಬೆಲೆ ₹9,83,500 ಆಗಿದ್ದು ನಿನ್ನೆಗಿಂತ ಇಂದು ₹1,100 ಇಳಿಕೆಯಾಗಿದೆ.

18 ಕ್ಯಾರಟ್ ಚಿನ್ನದ ಬೆಲೆ:

ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 18 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹7,368 ಆಗಿದೆ. ನಿನ್ನೆ ಇದರ ಬೆಲೆ ₹7,376 ಆಗಿದ್ದು ನಿನ್ನೆಗಿಂತ ಇಂದು, 8 ರೂ. ಕುಸಿತ ಕಂಡಿದೆ. ಹಾಗೆಯೇ 18 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹73,680 ಆಗಿದೆ. ನಿನ್ನೆಯ ಬೆಲೆ ₹73,760 ಆಗಿದ್ದು ನಿನ್ನೆಗಿಂತ ಇಂದಿಗೆ 80 ರೂ. ಕಡಿಮೆಯಾಗಿದೆ. ಇನ್ನು 18 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು ₹7,36,800 ರೂ. ಆಗಿದೆ. ನಿನ್ನೆಯ ಬೆಲೆ ₹7,37,600 ಆಗಿದ್ದು ನಿನ್ನೆಗಿಂತ ಇಂದು 800 ರೂ. ಇಳಿಕೆಯಾಗಿದೆ.

ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)

ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,005 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,824 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,460 ಆಗಿದೆ.

ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,005 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,824 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,368 ಆಗಿದೆ.

ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,020 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,834 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,380 ಆಗಿದೆ.

ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,005 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,824 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,368 ಆಗಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,005 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,824 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,368 ಆಗಿದೆ.

ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,005 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,824 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,368 ಆಗಿದೆ.

ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,005 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,824 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,368 ಆಗಿದೆ.

ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,005 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,824 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,368 ಆಗಿದೆ.

ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,010 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,829 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,372 ಆಗಿದೆ.

ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,010 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,829 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,372 ಆಗಿದೆ.

ಭಾರತದಲ್ಲಿ ಇಂದು ಬೆಳ್ಳಿ ಬೆಲೆ:

ಬೆಳ್ಳಿ ಬೆಲೆಯಲ್ಲೂ ಇಂದು ಭಾರಿ ಇಳಿಕೆಯನ್ನು ನೋಡಬಹುದಾಗಿದೆ. ಇಂದು ಒಂದು ಗ್ರಾಂ ಬೆಳ್ಳಿ ಬೆಲೆ ₹100.90 ಆಗಿದೆ. ನಿನ್ನೆ ಈ ಬೆಲೆ ₹101 ಆಗಿದ್ದು. ಇಂದು ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ ₹0.10 ರೂ. ಇಳಿಕೆಯಾಗಿದೆ. ಹತ್ತು ಗ್ರಾಂ ಬೆಳ್ಳಿ ಬೆಲೆ ₹1,009 ಆಗಿದೆ. ನಿನ್ನೆ ಈ ಬೆಲೆ ₹1,010 ಆಗಿದ್ದು. ಇಂದು ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ ₹1 ರೂ. ಇಳಿಕೆಯಾಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹10,090 ಆಗಿದೆ. ನಿನ್ನೆ ಈ ಬೆಲೆ ₹10,100 ಆಗಿದ್ದು. ಇಂದು ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ ₹10 ರೂ. ಇಳಿಕೆಯಾಗಿದೆ. ಹಾಗೆಯೇ ಒಂದು ಕೆ.ಜಿ ಬೆಳ್ಳಿ ಬೆಲೆ ₹1,00,900 ಆಗಿದೆ. ನಿನ್ನೆ ಈ ಬೆಲೆ ₹1,01,000 ಆಗಿದ್ದು. ಇಂದು ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ ₹100 ರೂ. ಇಳಿಕೆಯಾಗಿದೆ.

ಸ್ಪಾಟ್ ಗೋಲ್ಡ್ ವಿವರ:

ರಾಯಿಟರ್ಸ್ ನೀಡಿರುವ ವರದಿ ಪ್ರಕಾರ ಬುಧವಾರ...ಅಂದರೆ ಏಪ್ರಿಲ್ 24ರಂದು, ಸ್ಪಾಟ್ ಚಿನ್ನದ ದರ 1.5% ಏರಿಕೆಯಾಗಿದ್ದು, (0312 GMT ವೇಳೆಗೆ ಪ್ರತಿ ಔನ್ಸ್‌ಗೆ $3,335.39ರಷ್ಟು ವಹಿವಾಟು ನಡೆಸಿದೆ. ಇದರಂತೆ ಅಮೆರಿಕದ ಫ್ಯೂಚರ್ ಗೋಲ್ಡ್ ಕೂಡ 1.5% ಏರಿಕೆಯಾಗಿದ್ದು, $3,344 ವಹಿವಾಟು ನಡೆಸಿದೆ.

ಚಿನ್ನದ ಬೆಲೆ ಏರಿಕೆ-ಇಳಿಕೆಗೆ ಕಾರಣವೇನು?

ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಗೆ ನಾನಾ ಕಾರಣಗಳಿರುತ್ತವೆ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ.

ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+