ಮೇ 18, ಭಾರತದಲ್ಲಿ ಇಂದಿನ ಚಿನ್ನದ ಬೆಲೆ: ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಹಾವು-ಏಣಿ ಆಟ ತೋರಿಸುವುದು ಸಾಮಾನ್ಯ. ಅದರಂತೆ ಈ ವಾರದಲ್ಲಿ ಚಿನ್ನದ ಬೆಲೆಯು ಎರಡು ರೀತಿಯ ದಾಖಲೆ ಸೃಷ್ಟಿಸಿದೆ. ವಾರಾರಂಭದಲ್ಲಿ ಕೊಂಚ ಪ್ರಮಾಣದಲ್ಲೇ ಇಳಿಕೆ-ಏರಿಕೆ ನೋಡುತ್ತಿದ್ದ ಚಿನ್ನದ ಬೆಲೆ, ವಾರದ ಮಧ್ಯ ಭಾಗದಲ್ಲಿ ದಾಖಲೆಯ ಇಳಿಕೆ ಹಾಗೂ ಏರಿಕೆ ನೋಡಿದೆ. ಅಂದರೆ ಒಂದು ದಿನ ದಾಖಲೆಯ ಪ್ರಮಾಣದಲ್ಲಿ ಇಳಿಕೆಯಾದ ಬಂಗಾರ, ಮರುದಿನ ದಾಖಲೆಯ ಪ್ರಮಾಣದ ಏರಿಕೆ ನೋಡಿದ್ದು ಹೂಡಿಕೆದಾರರಿಗೆ ಆತಂಕ ಸೃಷ್ಟಿಸಿತ್ತು. ಆದರೆ ವಾರದ ಕೊನೆಯಲ್ಲಿ ಚಿನ್ನದ ಬೆಲೆಯು ಸ್ಥಿರವಾಗಿದೆ. ಇದರಿಂದ ಹೂಡಿಕೆ ಮಾಡುವುದೋ ಬೇಡವೋ ಎಂಬ ಗೊಂದಲ ಸೃಷ್ಟಿಯಾಗಿದೆ. ನಾಳೆ ನಾಡಿದ್ದರಲ್ಲಿ ಚಿನ್ನದ ಬೆಲೆ ಇಳಿಕೆಯಾಗುತ್ತದೋ, ಏರಿಕೆಯಾಗುತ್ತದೋ ಎಂಬ ಗೊಂದಲದಲ್ಲಿರುವ ಹೂಡಿಕೆದಾರರು ಕಾದುನೋಡುವ ಸ್ಥಿತಿಗೆ ಬಿದ್ದಿದ್ದಾರೆ.

ಇನ್ನು ಇತ್ತೀಚೆಗೆ ಯುಎಸ್ ಚಿನ್ನದ ಬೆಲೆ ಇಳಿಕೆ ನೋಡಿರುವ ಕಾರಣದಿಂದ, ಮುಂದಿನ ದಿನಗಳಲ್ಲಿ ಭಾರತದ ಚಿನ್ನದ ಬೆಲೆ ಎಷ್ಟಾಗುತ್ತದೋ? ಇಳಿಕೆಯಾಗುತ್ತೋ, ಏರಿಕೆಯಾಗುತ್ತದೋ ಎಂಬ ಪ್ರಶ್ನೆ ಎದುರಾಗಿದೆ. ಇದರ ಜೊತೆಗೆ ದಶಲಕ್ಷಾಂತರದಲ್ಲಿ ಡಾಲರ್ ಮತ್ತು ರೂಪಾಯಿ ವಿನಿಮಯ ದರವೂ ಚಿನ್ನದ ಬೆಲೆಯಲ್ಲಿ ಪ್ರಭಾವ ಬೀರಬಹುದು. ಡಾಲರ್ ಬಲವಾಗಿದೆಯಾದರೆ, ಜಾಗತಿಕ ಚಿನ್ನದ ಬೆಲೆ ಏರಿಕೆಯಾಗದೇ ಇದ್ದರೂ, ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಹೆಚ್ಚಾಗಬಹುದು. ಇವುಗಳ ನಡುವೆ, ಹೂಡಿಕೆದಾರರು ತಮ್ಮ ಹೂಡಿಕೆಯನ್ನು ಯಾವತ್ತಿಗೆ ಮಾಡಬೇಕು ಎಂಬ ನಿರ್ಧಾರ ತಗೆದುಕೊಳ್ಳುವಾಗ ಗೊಂದಲಕ್ಕೆ ಒಳಗಾಗುತ್ತಾರೆ. ತಕ್ಷಣದ ಲಾಭ ಪಡೆಯಬೇಕಾ, ದೀರ್ಘಾವಧಿ ಕಾಯ್ದುಕೊಳ್ಳಬೇಕಾ ಎಂಬ ಪ್ರಶ್ನೆಗಳು ಅವರ ಮನಸ್ಸಿನಲ್ಲಿ ಹುಟ್ಟಿಕೊಂಡು, ಮಾರುಕಟ್ಟೆಯಲ್ಲಿ ಅಸ್ಥಿರತೆಯನ್ನುಂಟುಮಾಡಿವೆ. ಹಾಗಾದ್ರೆ ಇಂದು ಚಿನ್ನದ ಬೆಲೆ ಹಾಗೂ ಬೆಳ್ಳಿ ಬೆಲೆ ಎಷ್ಟಕ್ಕೆ ಇದೆ ಎಂದು ನೋಡೋಣ. ಹಾಗೆಯೇ ನಂತರ ಚಿನ್ನದ ಬೆಲೆ ಇಳಿಕೆ ಮತ್ತು ಏರಿಕೆಗೆ ಕಾರಣ ಏನೆಂದು ಇಲ್ಲಿ ತಿಳಿಯೋಣ.
ಭಾರತದಲ್ಲಿ ಇಂದಿನ ಚಿನ್ನದ ಬೆಲೆ:
22 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು, 22 ಕ್ಯಾರಟ್ ಚಿನ್ನದ ಬೆಲೆ ಇಳಿಕೆಯೂ ಆಗಿಲ್ಲ ಏರಿಕೆಯೂ ಆಗಿಲ್ಲ. ಬೆಲೆಯು ನಿನ್ನೆಯಷ್ಟೇ ಕಾಯ್ದುಕೊಂಡಿದೆ. ನಿನ್ನೆ 22 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8,720 ಇತ್ತು. 22 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 87 ಸಾವಿರದ 200 ರೂ. ಇತ್ತು. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ ₹8,72,000 ಆಗಿತ್ತು. ಈ ಬೆಲೆ ನಿನ್ನೆಯಂತೆಯೇ ಇಂದು ಕೂಡ ಅಷ್ಟೇ ಇದೆ.
24 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು, 24 ಕ್ಯಾರಟ್ ಚಿನ್ನದ ಬೆಲೆ ಇಳಿಕೆಯೂ ಆಗಿಲ್ಲ ಏರಿಕೆಯೂ ಆಗಿಲ್ಲ. ಬೆಲೆಯು ನಿನ್ನೆಯಷ್ಟೇ ಕಾಯ್ದುಕೊಂಡಿದೆ. ನಿನ್ನೆ 24 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹9,513 ಇತ್ತು. 24 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ ₹95,130 ರೂ. ಇತ್ತು. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ ₹9,51,300 ರೂ. ಆಗಿತ್ತು. ಈ ಬೆಲೆ ನಿನ್ನೆಯಂತೆಯೇ ಇಂದು ಕೂಡ ಇದೆ.
18 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು, 18 ಕ್ಯಾರಟ್ ಚಿನ್ನದ ಬೆಲೆ ಇಳಿಕೆಯೂ ಆಗಿಲ್ಲ ಏರಿಕೆಯೂ ಆಗಿಲ್ಲ. ಬೆಲೆಯು ನಿನ್ನೆಯಷ್ಟೇ ಕಾಯ್ದುಕೊಂಡಿದೆ. ನಿನ್ನೆ 18 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹7,135 ಇತ್ತು. 24 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ ₹71,350 ರೂ. ಇತ್ತು. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ ₹7,13,500 ಆಗಿತ್ತು. ಈ ಬೆಲೆ ನಿನ್ನೆಯಂತೆಯೇ ಇಂದು ಕೂಡ ಇದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,720 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,513 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,185 ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,720 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,513 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,135 ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,735 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,528 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,147 ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,720 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,513 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,135 ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,720 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,513 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,135 ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,720 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,513 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,135 ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,720 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,513 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,135 ಆಗಿದೆ.
ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,720 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,513 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,135 ಆಗಿದೆ.
ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,030 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,851 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,389 ಆಗಿದೆ.
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,725 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,518 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,139 ಆಗಿದೆ.
ಭಾರತದಲ್ಲಿ ಇಂದು ಬೆಳ್ಳಿ ಬೆಲೆ:
ಇನ್ನು ಭಾರತದಲ್ಲಿ ಬೆಳ್ಳಿ ಬೆಲೆಯಲ್ಲೂ ಯಾವುದೇ ಇಳಿಕೆಯಾಗಲಿ, ಏರಿಕೆಯಾಗಲೀ ಆಗಿಲ್ಲ. ಅಂದರೆ ಪ್ರತಿ ಗ್ರಾಂ ಬೆಳ್ಳಿಗೆ ₹97 ಇದೆ. ಪ್ರತಿ ಹತ್ತು ಗ್ರಾಂ ಬೆಳ್ಳಿ ಬೆಲೆಗೆ ₹970 ಆಗಿದೆ. ಹಾಗೆಯೇ ಪ್ರತಿ 100 ಗ್ರಾಂ ಬೆಳ್ಳಿಗೆ ₹9,700 ಆಗಿದ್ದು, ಒಂದು ಕೆ.ಜಿ ಬೆಳ್ಳಿಗೆ ₹97,000 ಆಗಿದೆ. ಬೆಳ್ಳಿ ಬೆಲೆಯಲ್ಲೂ ಯಾವುದೇ ಬದಲಾವಣೆಯಾಗಿಲ್ಲ.
ಸ್ಪಾಟ್ ಗೋಲ್ಡ್ ವಿವರ:
ರಾಯಿಟರ್ಸ್ ನೀಡಿರುವ ವರದಿ ಪ್ರಕಾರ ಮೇ 16ರಂದು, 4:29 GMT ವೇಳೆಗೆ ಸ್ಪಾಟ್ ಚಿನ್ನದ ಬೆಲೆ 0.8% ರಷ್ಟು ಇಳಿಕೆ ನೋಡಿದೆ. ಅಲ್ಲದೇ ಸ್ಪಾಟ್ ಚಿನ್ನದ ದರವು ಪ್ರತಿ ಔನ್ಸ್‌ಗೆ $3,213.56ರಷ್ಟು ವಹಿವಾಟು ನಡೆಸಿದೆ. 2025ರ ಮೇ ತಿಂಗಳಲ್ಲಿ ಬಂಗಾರದ ಮೌಲ್ಯ ತೀವ್ರ ಕುಸಿತಕ್ಕೊಳಗಾಗಿದ್ದು, ಡಾಲರ್ ಬಲ, ವ್ಯಾಪಾರ ಚಟುವಟಿಕೆಗಳು ಸ್ಥಿರವಾಗಿರುವುದು ಮತ್ತು ಗರಿಷ್ಠ ಬಡ್ಡಿದರ ನಿರೀಕ್ಷೆಗಳೇ ಇದರ ಹಿಂದೆ ಪ್ರಮುಖ ಕಾರಣಗಳಾಗಿವೆ.
ಚಿನ್ನದ ಬೆಲೆ ಏರಿಕೆ-ಇಳಿಕೆಗೆ ಕಾರಣವೇನು?
ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಗೆ ನಾನಾ ಕಾರಣಗಳಿರುತ್ತವೆ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ.
ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು.
ಹೂಡಿಕೆಗೆ ಆಸಕ್ತರಾಗಿರುವವರಿಗೆ ಈ ಪರಿಸ್ಥಿತಿ ಎರಡು ಬಗೆಯ ಪ್ರಭಾವ ಬೀರಬಹುದು.ಹೀಗಾಗಿ ಒಂದೆಡೆ ಬೆಲೆ ಇನ್ನಷ್ಟು ಏರಬಹುದು ಎಂಬ ನಿರೀಕ್ಷೆಯಿಂದ ಈಗಲೇ ಹೂಡಿಕೆ ಮಾಡೋದು ಸೂಕ್ತವೆಂಬ ಯೋಚನೆ,ಮತ್ತೊಂದೆಡೆ ಈಗ ತಕ್ಷಣ ಹೂಡಿಕೆಗೆ ಮುನ್ನುಡಿಯಿಟ್ಟರೆ ನಷ್ಟವೋ ಎಂಬ ಆತಂಕ.ಅಂತಾರಾಷ್ಟ್ರೀಯ ಮಾರುಕಟ್ಟೆಯ ಒತ್ತಡ,ಜಿಯೋಪಾಲಿಟಿಕಲ್ ಅನಿಶ್ಚಿತತೆಗಳು ಹಾಗೂ ರೂಪಾಯಿಯ ಮೌಲ್ಯ ಕುಸಿತ ಈ ಬೆಲೆ ಏರಿಕೆಗೆ ಪ್ರಮುಖ ಕಾರಣಗಳಾಗಿ ಗುರುತಿಸಲಾಗಿದೆ.
More From GoodReturns

Gold Rate Today: ಆಭರಣ ಪ್ರಿಯರಿಗೆ ಶಾಕ್; ಚಿನ್ನದ ಬೆಲೆ ದಿಢೀರ್ 8,500 ರೂ. ಏರಿಕೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Bengaluru Gold Rate: ಜಾಗತಿಕ ಉದ್ವಿಗ್ನತೆ ಪರಿಣಾಮ ಚಿನ್ನದ ಬೆಲೆಯಲ್ಲಿ ಏರಿಕೆ-ನಿನ್ನೆಗಿಂತ 9,300 ಕುಸಿತ

Gold Rate Today: ಚಿನ್ನದ ಬೆಲೆ ದಿಢೀರ್ ಏರಿಕೆ; ಒಂದೇ ದಿನ 7,000 ರೂ. ಹೆಚ್ಚಳ

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!

Gold Rate: ಚಿನ್ನ ಕೊಳ್ಳುವವರಿಗೆ ‘ಗುರುದೆಸೆ’…ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ 9,800 ರೂ. ಕುಸಿತ!

Gold Price Bengaluru: ಚಿನ್ನಪ್ರಿಯರಿಗೆ ಇಂದು ‘ಶುಕ್ರದೆಸೆ’…ಬಂಗಾರದ ದರದಲ್ಲಿ 7,700 ರೂ. ಕುಸಿತ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?



Click it and Unblock the Notifications