ಜೂನ್ 6, ಭಾರತದಲ್ಲಿ ಇಂದಿನ ಚಿನ್ನದ ಬೆಲೆ: ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಂದು ಸ್ಥಿರವಾಗಿದೆ. ಜೂನ್ ಆರಂಭದಿಂದಲೂ ಚಿನ್ನದ ಬೆಲೆ ಇಳಿಕೆಯೇ ಆಗಿಲ್ಲ. ಜೂನ್ 1 ರಿಂದ ಈವರೆಗಿನ ಚಿನ್ನದ ಬೆಲೆಯಲ್ಲಿ ಬರೋಬ್ಬರಿ ₹22,900ರಷ್ಟು ಏರಿಕೆಯಾಗಿದೆ. ಅಂದರೆ ಜೂನ್ 1ರಂದು ಚಿನ್ನದ ಬೆಲೆ ಸ್ಥಿರವಾಗಿತ್ತು. ಯಾವುದೇ ರೀತಿಯ ಇಳಿಕೆ-ಏರಿಕೆ ನೋಡಿರಲಿಲ್ಲ. ನಂತರದ 4 ದಿನಗಳಲ್ಲಿ ಚಿನ್ನದ ಬೆಲೆ ಏರಿಕೆಯನ್ನೇ ನೋಡಿದೆ. ನಾಲ್ಕು ದಿನಗಳಲ್ಲಿ ಏರಿಕೆಯಾದ ಮೊತ್ತ ₹22,900. ಇಂದು ಶುಕ್ರವಾರ ಜೂನ್ 6ರಂದು ಕೂಡ ಚಿನ್ನದ ಬೆಲೆ ಸ್ಥಿರವಾಗಿದೆ.

ಜೂನ್ 1, 2025 ರಂದು 100 ಗ್ರಾಂ 24 ಕ್ಯಾರಟ್ ಚಿನ್ನದ ಬೆಲೆ ₹9,73,100 ಇದ್ದರೆ, ಜೂನ್ 5ರ ವೇಳೆಗೆ ಇದು ₹9,96,000ಕ್ಕೆ ತಲುಪಿದೆ. ಸತತ ನಾಲ್ಕು ದಿನಗಳಿಂದ ಚಿನ್ನದ ಬೆಲೆಯು ಭಾರಿ ಏರಿಕೆ ನೋಡಿದೆ. ಇದು ಚಿನ್ನಪ್ರಿಯರ ನಿದ್ದೆಗೆಡಿಸಿದೆ. ಮೇ ತಿಂಗಳಿನಲ್ಲಿ ದಾಖಲೆ ಪ್ರಮಾಣದ ಏರಿಕೆ ಹಾಗೂ ಇಳಿಕೆಯನ್ನು ನೋಡಿದ್ದ ಬಂಗಾರ, ಈ ತಿಂಗಳ ಆರಂಭದಿಂದಲೂ ಹೆಚ್ಚಾಗುತ್ತಿದೆ. ಮೇ ತಿಂಗಳಿನಲ್ಲಿ ಒಂದೆರಡು ದಿನ ಚಿನ್ನದ ಬೆಲೆ ಏರಿಕೆಯಾದ್ರೆ, ಮರುದಿನ ಕೊಂಚವಾದರೂ ಇಳಿಕೆಯಾಗುತ್ತಿತ್ತು. ಆದರೆ ಈ ಬಾರಿ ಇಂತಹ ನಿರೀಕ್ಷೆಯಲ್ಲಿದ್ದವರಿಗೆ ನಿಜಕ್ಕೂ ನಿರಾಸೆಯಾಗಿದೆ. ಹಾಗಾದರೆ ಇಂದು 24 ಕ್ಯಾರಟ್, 22 ಕ್ಯಾರಟ್, 18 ಕ್ಯಾರಟ್ ಚಿನ್ನದಲ್ಲಿ ಎಷ್ಟು ಇದೆ ಎಂದು ತಿಳಿಯೋಣ.
ಭಾರತದಲ್ಲಿ ಇಂದಿನ ಚಿನ್ನದ ಬೆಲೆ:
24 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು, 24 ಕ್ಯಾರಟ್ ಚಿನ್ನದ ಬೆಲೆ ಇಳಿಕೆಯೂ ಆಗಿಲ್ಲ ಏರಿಕೆಯೂ ಆಗಿಲ್ಲ. ಬೆಲೆಯು ನಿನ್ನೆಯಷ್ಟೇ ಕಾಯ್ದುಕೊಂಡಿದೆ. ನಿನ್ನೆ 24 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹9,960 ಇತ್ತು. 24 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ ₹99,600 ರೂ. ಇತ್ತು. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ ₹9,96,000 ರೂ. ಆಗಿತ್ತು. ಈ ಬೆಲೆ ನಿನ್ನೆಯಂತೆಯೇ ಇಂದು ಕೂಡ ಇದೆ.
22 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು, 22 ಕ್ಯಾರಟ್ ಚಿನ್ನದ ಬೆಲೆ ಇಳಿಕೆಯೂ ಆಗಿಲ್ಲ ಏರಿಕೆಯೂ ಆಗಿಲ್ಲ. ಬೆಲೆಯು ನಿನ್ನೆಯಷ್ಟೇ ಕಾಯ್ದುಕೊಂಡಿದೆ. ನಿನ್ನೆ 22 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹9,130 ಇತ್ತು. 22 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ ₹91,300 ಇತ್ತು. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ ₹9,13,000 ಆಗಿತ್ತು. ಈ ಬೆಲೆ ನಿನ್ನೆಯಂತೆಯೇ ಇಂದು ಕೂಡ ಅಷ್ಟೇ ಇದೆ.
18 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು, 18 ಕ್ಯಾರಟ್ ಚಿನ್ನದ ಬೆಲೆ ಇಳಿಕೆಯೂ ಆಗಿಲ್ಲ ಏರಿಕೆಯೂ ಆಗಿಲ್ಲ. ಬೆಲೆಯು ನಿನ್ನೆಯಷ್ಟೇ ಕಾಯ್ದುಕೊಂಡಿದೆ. ನಿನ್ನೆ 18 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹7,470 ಇತ್ತು. 24 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ ₹74,700 ರೂ. ಇತ್ತು. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ ₹7,47,000 ಆಗಿತ್ತು. ಈ ಬೆಲೆ ನಿನ್ನೆಯಂತೆಯೇ ಇಂದು ಕೂಡ ಇದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,960 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,130 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,510 ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,960 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,130 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,470 ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,975 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,145 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,483 ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,960 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,130 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,470 ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,960 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,130 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,470 ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,960 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,130 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,470 ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,960 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,130 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,470 ಆಗಿದೆ.
ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,960 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,130 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,470 ಆಗಿದೆ.
ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,965 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,135 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,475 ಆಗಿದೆ.
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,965 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,135 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,475 ಆಗಿದೆ.
ಭಾರತದಲ್ಲಿ ಇಂದು ಬೆಳ್ಳಿ ಬೆಲೆ:
ಇಂದು ಭಾರತದಲ್ಲಿ ಬೆಳ್ಳಿ ಬೆಲೆಯಲ್ಲೂ ಏರಿಕೆಯನ್ನು ನೋಡಬಹುದಾಗಿದೆ. ಪ್ರತಿ ಗ್ರಾಂ ಬೆಳ್ಳಿ ಬೆಲೆ ₹107 ಇದೆ. ನಿನ್ನೆ ಈ ಬೆಲೆ ₹104 ಆಗಿದ್ದು, ಇಂದು ₹3 ಏರಿಕೆಯಾಗಿದೆ. ಹತ್ತು ಗ್ರಾಂ ಬೆಳ್ಳಿ ಬೆಲೆ ಇಂದು ₹1,070 ಆಗಿದೆ. ಇದರ ಬೆಲೆ ನಿನ್ನೆ ₹1,040 ಆಗಿದ್ದು, ಇಂದು ₹30 ಏರಿಕೆಯಾಗಿದೆ. ನೂರು ಗ್ರಾಂ ಬೆಳ್ಳಿ ಬೆಲೆ ಇಂದು ₹10,700ಆಗಿದ್ದು, ನಿನ್ನೆ ಈ ಬೆಲೆ ₹10,400 ಆಗಿತ್ತು. ಅಂದರೆ ನಿನ್ನೆಗಿಂತ ಇಂದಿಗೆ ₹300 ಏರಿಕೆಯಾಗಿದೆ. ಹಾಗೆಯೇ ಇಂದು ಒಂದು ಕೆ.ಜಿ ಬೆಳ್ಳಿ ಬೆಲೆ ₹1,07,000 ಆಗಿದೆ, ನಿನ್ನೆ ಈ ಬೆಲೆ ₹1,04,000 ಆಗಿದ್ದು, ನಿನ್ನೆಗಿಂತ ಇಂದಿಗೆ ₹3,000 ಏರಿಕೆಯಾಗಿದೆ.
ಸ್ಪಾಟ್ ಗೋಲ್ಡ್ ವಿವರ:
ರಾಯಿಟರ್ಸ್ ನೀಡಿರುವ ವರದಿ ಪ್ರಕಾರ ಜೂನ್ 6ರಂದು, ಸ್ಪಾಟ್ ಚಿನ್ನದ ಬೆಲೆ 0.3% ರಷ್ಟು ಏರಿಕೆ ನೋಡಿದೆ. ಅಲ್ಲದೇ ಸ್ಪಾಟ್ ಚಿನ್ನದ ದರವು ಪ್ರತಿ ಔನ್ಸ್‌ಗೆ $3,363.33ಕ್ಕೆ ವಹಿವಾಟು ನಡೆಸಿದೆ. ಈ ವಾರದಲ್ಲಿ 2.3% ಏರಿಕೆ ಕಂಡುಬಂದಿದೆ. ಈ ಬೆಲೆ ಏರಿಕೆಗೆ ಕಾರಣ ಆಗಿರುವುದು ಅಮೆರಿಕದ ಆರ್ಥಿಕ ಅಂಕಿಅಂಶಗಳು ನಿರೀಕ್ಷೆಗಿಂತ ಕೆಟ್ಟಿರುವುದಾಗಿರಬಹುದು.
ಹೂಡಿಕೆಯ ಸಾಧನವಾಗಿರುವ ಚಿನ್ನ:
ಹೂಡಿಕೆಯ ಸಾಧನವಾಗಿರುವ ಚಿನ್ನವು ಭಾರತದಲ್ಲಿ ಹಲವು ರೀತಿಯ ಮಹತ್ವದ ಸ್ಥಾನ ಪಡೆದುಕೊಂಡಿದೆ. ಮಹಿಳೆಯರಿಗೆ ಒಡವೆ ರೂಪದಲ್ಲಿ ಇದು ಖುಷಿ ನೀಡುತ್ತದೆ. ಹಾಗೆಯೇ ಪ್ರತಿಷ್ಠೆಯ ಸಂಕೇತವಾಗಿ ಗೌರವ ತಂದುಕೊಡುತ್ತದೆ. ಇನ್ನು ಕಷ್ಟ ಅಂತ ಬಂದಾಗ ಆರ್ಥಿಕ ಸಹಾಯ ಮಾಡುವ ಮಿತ್ರನಾಗಿರುತ್ತದೆ. ಹೂಡಿಕೆಯ ರೂಪದಲ್ಲಿ ನೋಡುವುದಾದರೆ, ಚಿನ್ನವು ಭವಿಷ್ಯದ ದೊಡ್ಡ ಸಂಪತ್ತಾಗಿ ಪಾತ್ರ ನಿರ್ವಹಿಸುತ್ತದೆ. ಒಂದೇ ಲೋಹ ಹಲವು ರೀತಿಯಲ್ಲಿ ಮಹತ್ವದ ಪಾತ್ರವಹಿಸುತ್ತದೆ. ಹೀಗಾಗಿಯೇ ಭಾರತದಲ್ಲಿ ಚಿನ್ನಕ್ಕೆ ಒಂದು ಮಹತ್ವದ ಸ್ಥಾನವಿದೆ. ಚಿನ್ನವನ್ನು ಪೂಜೆ-ಪುನಸ್ಕಾರ, ಮದುವೆ-ಸಮಾರಂಭಗಳಲ್ಲಿ ಇರಿಸದೇ ಏನೂ ನೆರವೇರುವುದಿಲ್ಲ. ಅದರಲ್ಲೂ ಮಹಿಳೆಯರಿಗೆ ಚಿನ್ನವೆಂದರೆ ಅಚ್ಚು-ಮೆಚ್ಚು. ಏನು ಕೊಟ್ಟರೂ ಮನಸೋಲದ ನಾರಿಯರಿಗೆ ಚಿನ್ನವೇ ದೊಡ್ಡ ಮಟ್ಟದ ಉಡುಗೊರೆ. ಅವರಿಗೆ ಚಿನ್ನವೇ ಭೂಷಣ.
ಚಿನ್ನದ ಬೆಲೆ ಏರಿಕೆ-ಇಳಿಕೆಗೆ ಕಾರಣವೇನು?
ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಗೆ ನಾನಾ ಕಾರಣಗಳಿರುತ್ತವೆ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ.
ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು.
ಹೂಡಿಕೆಗೆ ಆಸಕ್ತರಾಗಿರುವವರಿಗೆ ಈ ಪರಿಸ್ಥಿತಿ ಎರಡು ಬಗೆಯ ಪ್ರಭಾವ ಬೀರಬಹುದು.ಹೀಗಾಗಿ ಒಂದೆಡೆ ಬೆಲೆ ಇನ್ನಷ್ಟು ಏರಬಹುದು ಎಂಬ ನಿರೀಕ್ಷೆಯಿಂದ ಈಗಲೇ ಹೂಡಿಕೆ ಮಾಡೋದು ಸೂಕ್ತವೆಂಬ ಯೋಚನೆ,ಮತ್ತೊಂದೆಡೆ ಈಗ ತಕ್ಷಣ ಹೂಡಿಕೆಗೆ ಮುನ್ನುಡಿಯಿಟ್ಟರೆ ನಷ್ಟವೋ ಎಂಬ ಆತಂಕ.ಅಂತಾರಾಷ್ಟ್ರೀಯ ಮಾರುಕಟ್ಟೆಯ ಒತ್ತಡ,ಜಿಯೋಪಾಲಿಟಿಕಲ್ ಅನಿಶ್ಚಿತತೆಗಳು ಹಾಗೂ ರೂಪಾಯಿಯ ಮೌಲ್ಯ ಕುಸಿತ ಈ ಬೆಲೆ ಏರಿಕೆಗೆ ಪ್ರಮುಖ ಕಾರಣಗಳಾಗಿ ಗುರುತಿಸಲಾಗಿದೆ.


Click it and Unblock the Notifications