Gold rate falls: ಚಿನ್ನದ ಬೆಲೆ ದಾಖಲೆಯಷ್ಟು ಕುಸಿತ..ಭಾರತದಲ್ಲಿ ಒಂದೇ ದಿನ ₹21,300 ಇಳಿಕೆ! ಬೆಂಗಳೂರಿನಲ್ಲಿ ಎಷ್ಟಿದೆ?

ಮೇ 15,ಭಾರತದಲ್ಲಿ ಇಂದು ಚಿನ್ನದ ಬೆಲೆ: ಚಿನ್ನಪ್ರಿಯರು ಚಿನ್ನ ಕೊಳ್ಳಲು ಇದೇ ಸರಿಯಾದ ಸಮಯ ಎನ್ನಬಹುದು. ಏಕೆಂದರೆ ಇಂದು ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಎಷ್ಟರ ಮಟ್ಟಿಗೆ ಇಳಿಕೆಯಾಗಿದೆ ಎಂದರೆ ಇದು ದಾಖಲೆ ಪ್ರಮಾಣದಲ್ಲಿ ಇಳಿಕೆಯಾಗಿದೆ. ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ ನೋಡಿದ್ದ ಮಹಿಳಾ ಮಣಿಯರು ಈಗ ನಿರಾಳವಾಗಿ ಚಿನ್ನ ಕೊಳ್ಳಬಹುದು.

Gold rate falls: ಭಾರತದಲ್ಲಿ ಮತ್ತೆ ಕುಸಿದ ಚಿನ್ನದ ಬೆಲೆ!

ಹೂಡಿಕೆಗೆ ಆಸಕ್ತರಾಗಿರುವವರಿಗೆ ಈ ಪರಿಸ್ಥಿತಿ ಎರಡು ಬಗೆಯ ಪ್ರಭಾವ ಬೀರಬಹುದು.ಹೀಗಾಗಿ ಒಂದೆಡೆ ಬೆಲೆ ಇನ್ನಷ್ಟು ಏರಬಹುದು ಎಂಬ ನಿರೀಕ್ಷೆಯಿಂದ ಈಗಲೇ ಹೂಡಿಕೆ ಮಾಡೋದು ಸೂಕ್ತವೆಂಬ ಯೋಚನೆ,ಮತ್ತೊಂದೆಡೆ ಈಗ ತಕ್ಷಣ ಹೂಡಿಕೆಗೆ ಮುನ್ನುಡಿಯಿಟ್ಟರೆ ನಷ್ಟವೋ ಎಂಬ ಆತಂಕ.ಅಂತಾರಾಷ್ಟ್ರೀಯ ಮಾರುಕಟ್ಟೆಯ ಒತ್ತಡ,ಜಿಯೋಪಾಲಿಟಿಕಲ್ ಅನಿಶ್ಚಿತತೆಗಳು ಹಾಗೂ ರೂಪಾಯಿಯ ಮೌಲ್ಯ ಕುಸಿತ ಈ ಬೆಲೆ ಏರಿಕೆಗೆ ಪ್ರಮುಖ ಕಾರಣಗಳಾಗಿ ಗುರುತಿಸಲಾಗಿದೆ. ಹಾಗಾದರೆ ಇಂದು ಯಾವ್ಯಾವ ಕ್ಯಾರಟ್‌ ಚಿನ್ನದ ಬೆಲೆ ಎಷ್ಟು ಏರಿಕೆಯಾಗಿದೆ ಎಂದು ತಿಳಿಯುವುದಾದರೆ.

ಭಾರತದಲ್ಲಿ ಚಿನ್ನಕ್ಕೆ ಒಂದು ಮಹತ್ವವಾದ ಸ್ಥಾನವಿದೆ. ಚಿನ್ನವನ್ನು ಪ್ರತಿಷ್ಠೆಯ ಸಂಕೇತ ಎಂತಲೂ ಭಾರತದಲ್ಲಿ ಪ್ರತಿನಿಧಿಸಲಾಗುತ್ತದೆ. ಸಭೆ ಸಮಾರಂಭಗಳಲ್ಲಿ ಒಡವೆಯೇ ಆಕರ್ಷಣೆ. ಹೀಗಾಗಿ ಮಹಿಳೆಯರಿಗೆ ಅತಿ ಪ್ರಿಯಾವಾದುದ್ದು ಈ ಚಿನ್ನ. ಮಹಿಳೆಯರಿಗೆ ಏನೇ ಕೊಟ್ಟರೂ ಚಿನ್ನ ಕೊಟ್ಟಾಗ ಆಗುವ ಖುಷಿ ಮತ್ತೆಲ್ಲೂ ಸಿಗುವುದಿಲ್ಲ. ಅದರಲ್ಲೂ ಇದು ಬೆಲೆ ಜಾಸ್ತಿಯಾಗುತ್ತಿದ್ದು, ಚಿನ್ನವನ್ನೇ ಉಡುಗೊರೆಯಾಗಿ ಕೊಟ್ಟರೆ ಮಹಿಳೆಯರ ಸಂತೋಷ ಆಕಾಶಕ್ಕೆ ಹಾರಿರುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಚಿನ್ನಕ್ಕೆ ಒಂದು ಮಹತ್ವ ನೀಡಲಾಗಿದೆ. ಇದರ ಬೆಲೆ ಎಷ್ಟೇ ಹೆಚ್ಚಾದರೂ ಇದರ ಮೇಲಿನ ಪ್ರೀತಿ ಕಡಿಮೆಯಾಗುವುದಿಲ್ಲ. ಹಾಗಾದರೆ ಭಾರತದಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ ಎಂದು ನೋಡೋಣ ಬನ್ನಿ.

24 ಕ್ಯಾರಟ್ ಚಿನ್ನದ ಬೆಲೆ:

ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹9,393 ಆಗಿದೆ. ನಿನ್ನೆ ಇದರ ಬೆಲೆ ₹9,606 ಆಗಿದ್ದು ನಿನ್ನೆಗಿಂತ ಇಂದು, ₹213 ಕುಸಿತ ಕಂಡಿದೆ. ಹಾಗೆಯೇ 24 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹93,930 ಆಗಿದೆ. ನಿನ್ನೆಯ ಬೆಲೆ ₹96,060 ಆಗಿದ್ದು ನಿನ್ನೆಗಿಂತ ಇಂದಿಗೆ ₹2,130 ಕಡಿಮೆಯಾಗಿದೆ. ಇನ್ನು 24 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು ₹9,39,300 ಆಗಿದೆ. ನಿನ್ನೆಯ ಬೆಲೆ ₹9,60,600 ಆಗಿದ್ದು ನಿನ್ನೆಗಿಂತ ಇಂದು ₹21,300 ಇಳಿಕೆಯಾಗಿದೆ.

18 ಕ್ಯಾರಟ್ ಚಿನ್ನದ ಬೆಲೆ:

ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 18 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹7,045 ಆಗಿದೆ. ನಿನ್ನೆ ಇದರ ಬೆಲೆ ₹7,204 ಆಗಿದ್ದು ನಿನ್ನೆಗಿಂತ ಇಂದು, 159 ರೂ. ಕುಸಿತ ಕಂಡಿದೆ. ಹಾಗೆಯೇ 18 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹70,450 ಆಗಿದೆ. ನಿನ್ನೆಯ ಬೆಲೆ ₹72,040 ಆಗಿದ್ದು ನಿನ್ನೆಗಿಂತ ಇಂದಿಗೆ 1,590 ರೂ. ಕಡಿಮೆಯಾಗಿದೆ. ಇನ್ನು 18 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು ₹7,04,500 ರೂ. ಆಗಿದೆ. ನಿನ್ನೆಯ ಬೆಲೆ ₹7,20,400 ಆಗಿದ್ದು ನಿನ್ನೆಗಿಂತ ಇಂದು 15,900 ರೂ. ಇಳಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ:

ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲೂ ಇಂದು ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಇಂದು , 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹8,610 ಆಗಿದ್ದು, ₹195 ಕುಸಿತ ಕಂಡಿದೆ. 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹9,393 ಆಗಿದೆ. ನಿನ್ನೆ ಇದರ ಬೆಲೆ ₹9,606 ಆಗಿದ್ದು ನಿನ್ನೆಗಿಂತ ಇಂದು, ₹213 ಕುಸಿತ ಕಂಡಿದೆ. 18 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹7,045 ಆಗಿದೆ. ನಿನ್ನೆ ಇದರ ಬೆಲೆ ₹7,204 ಆಗಿದ್ದು ನಿನ್ನೆಗಿಂತ ಇಂದು, 159 ರೂ. ಕುಸಿತ ಕಂಡಿದೆ.

ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)

ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,610 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,610 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,095 ಆಗಿದೆ.

ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,610 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,393 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,045 ಆಗಿದೆ.

ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,625 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,408 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,057 ಆಗಿದೆ.

ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,610 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,393 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,045 ಆಗಿದೆ.

ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,610 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,393 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,045 ಆಗಿದೆ.

ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,610 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,393 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,045 ಆಗಿದೆ.

ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,610 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,393 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,045 ಆಗಿದೆ.

ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,615 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,398 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,049 ಆಗಿದೆ.

ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,615 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,398 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,049 ಆಗಿದೆ.

ಭಾರತದಲ್ಲಿ ಇಂದು ಬೆಳ್ಳಿ ಬೆಲೆ:

ಬೆಳ್ಳಿ ಬೆಲೆಯಲ್ಲೂ ಇಂದು ಭಾರಿ ಇಳಿಕೆಯನ್ನು ನೋಡಬಹುದಾಗಿದೆ. ಇಂದು ಒಂದು ಗ್ರಾಂ ಬೆಳ್ಳಿ ಬೆಲೆ ₹97 ಆಗಿದೆ. ನಿನ್ನೆ ಈ ಬೆಲೆ ₹97.90 ಆಗಿದ್ದು. ಇಂದು ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ ₹0.90 ರೂ. ಇಳಿಕೆಯಾಗಿದೆ. ಹತ್ತು ಗ್ರಾಂ ಬೆಳ್ಳಿ ಬೆಲೆ ₹970 ಆಗಿದೆ. ನಿನ್ನೆ ಈ ಬೆಲೆ ₹979 ಆಗಿದ್ದು. ಇಂದು ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ ₹9 ರೂ. ಇಳಿಕೆಯಾಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹9,700 ಆಗಿದೆ. ನಿನ್ನೆ ಈ ಬೆಲೆ ₹9,790 ಆಗಿದ್ದು. ಇಂದು ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ ₹90 ರೂ. ಇಳಿಕೆಯಾಗಿದೆ. ಹಾಗೆಯೇ ಒಂದು ಕೆ.ಜಿ ಬೆಳ್ಳಿ ಬೆಲೆ ₹97,000 ಆಗಿದೆ. ನಿನ್ನೆ ಈ ಬೆಲೆ ₹97,900 ಆಗಿದ್ದು. ಇಂದು ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ ₹900 ರೂ. ಇಳಿಕೆಯಾಗಿದೆ.

ಸ್ಪಾಟ್ ಗೋಲ್ಡ್ ವಿವರ:

ರಾಯಿಟರ್ಸ್ ನೀಡಿರುವ ವರದಿ ಪ್ರಕಾರ ಮೇ 15ರಂದು 05:36 ವೇಳೆಗೆ, ಶೇ. 1.3% ರಷ್ಟು ಇಳಿಕೆಯಾಗಿದ್ದು, ಪ್ರತಿ ಔನ್ಸ್‌ಗೆ $3,136.97 ವಹಿವಾಟು ನಡೆಸಿದೆ.

ಚಿನ್ನದ ಬೆಲೆ ಏರಿಕೆ-ಇಳಿಕೆಗೆ ಕಾರಣವೇನು?

ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಗೆ ನಾನಾ ಕಾರಣಗಳಿರುತ್ತವೆ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ.

ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+