ಭಾರತ-ಪಾಕಿಸ್ತಾನ ನಡುವಿನ ಹದಗೆಟ್ಟಿರುವ ರಾಜತಾಂತ್ರಿಕ ಸಮಸ್ಯೆ, ಗಡಿಯಲ್ಲಿ ನಿರಂತರ ಉಪಟಳ ಹಿನ್ನೆಲೆಯಲ್ಲಿ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ವ್ಯಾಪಾರ-ವಹಿವಾಟು ಗಣನೀಯ ಕುಸಿತ ಕಂಡಿದೆ.
2019-20ರ ಹಣಕಾಸು ವರ್ಷದ ಮೊದಲಾರ್ಧ ಅವಧಿಯಲ್ಲಿ ಇಸ್ಲಾಮಾಬಾದ್ ಮತ್ತು ದೆಹಲಿ ನಡುವಿನ ವ್ಯಾಪಾರವು ಗಮನಾರ್ಹವಾಗಿ ಕುಸಿದಿದೆ ಎಂದು ಪಾಕಿಸ್ತಾನದ ಕೇಂದ್ರ ಬ್ಯಾಂಕ್ ಹೇಳಿದೆ. ಜುಲೈ 1 ರಿಂದ ಪ್ರಾರಂಭವಾಗುವ 2019-20ರ ಹಣಕಾಸಿನ ಮೊದಲಾರ್ಧದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಪಾಕಿಸ್ತಾನದ ಮಾಹಿತಿ ಪ್ರಕಾರ ಭಾರತಕ್ಕೆ ಪಾಕಿಸ್ತಾನದ ರಫ್ತು 16.8 ಮಿಲಿಯನ್ ಡಾಲರ್‌ಗೆ ಕುಸಿದಿದೆ ಎಂದು ಹೇಳಿದೆ. ಇದು 2018-19ರ ಮೊದಾಲಾರ್ಧದಲ್ಲಿ 213 ಮಿಲಿಯನ್ ಡಾಲರ್‌ಗಳಿಗೆ ಹೋಲಿಸಿದರೆ ತುಂಬಾ ಕಡಿಮೆ ಎಂದು ವರದಿಯಾಗಿದೆ.

ಇದರ ಜೊತೆಗೆ ಭಾರತದಿಂದ ಪಾಕಿಸ್ತಾನಕ್ಕೆ ಆಮದು ಸಹ ಕುಸಿದಿದ್ದು, 2019-20ರ ಮೊದಲಾರ್ಧದಲ್ಲಿ 286.6 ಮಿಲಿಯನ್ ಡಾಲರ್‌ಗೆ ಇಳಿದಿದೆ. ಆದರೆ 2018-19ರ ಮೊದಾಲಾರ್ಧದಲ್ಲಿ 865 ಮಿಲಿಯನ್ ಡಾಲರ್‌ನಷ್ಟಿತ್ತು.
ಕಳೆದ ವರ್ಷ ಪುಲ್ವಾಮದಲ್ಲಿ ಉಗ್ರರ ದಾಳಿ ಬಳಿಕ ಭಾರತವು ಭಯೋತ್ಪಾದಕ ನೆಲೆಗಳಿದ್ದ ಬಾಲಕೋಟ್ ನಲ್ಲಿ ವೈಮಾನಿಕ ದಾಳಿ ನಡೆಸಿತು. ಇದರ ನಂತರ ಉಭಯ ದೇಶಗಳ ನಡುವಿನ ಸಂಬಂಧ ಮತ್ತಷ್ಟು ಹಳಸಿದೆ.
ಆಗಸ್ಟ್ 5 ರಂದು ಭಾರತವು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಂಡಿತು. ಮತ್ತು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತ. ಇದನ್ನು ಪಾಕಿಸ್ತಾನ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶ್ನಿಸಿದೆ.
More From GoodReturns

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

LPG Cylinder Shortage Live Updates: ಭಾರತದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ಪಿಎಂ ಮೋದಿ ಮಹತ್ವದ ಸಭೆ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Natural Gas Supply: ದೇಶದಲ್ಲಿ ಅನಿಲ ಕೊರತೆ..ಹೊಸ ಆದೇಶದ ಪ್ರಕಾರ ಯಾರಿಗೆ ಮೊದಲ ಆದ್ಯತೆ ಎಂದು ತಿಳಿಯಿರಿ

LPG ಪೂರೈಕೆಯಲ್ಲಿ ಕೊರತೆ; ದೇಶದಲ್ಲಿ ಎಲ್ಪಿಜಿ ಉತ್ಪಾದನೆ 10% ಹೆಚ್ಚಳ

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

LPG shortage: ಮಧ್ಯಪ್ರಾಚ್ಯದ ಉದ್ವಿಗ್ನತೆ, ಬೆಂಗಳೂರು-ಮುಂಬೈನಲ್ಲಿ LPG ಕೊರತೆ ಆತಂಕ: ರೆಸ್ಟೋರೆಂಟ್ಗಳು ಮುಚ್ಚುವ ಭೀತಿ

Biggest Airport: ಭಾರತದ ಅತಿದೊಡ್ಡ ವಿಮಾನ ನಿಲ್ದಾಣ ಸಂಚಾರಕ್ಕೆ ಸಿದ್ಧ; 45 ದಿನದೊಳಗೆ ಆರಂಭ

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

iPhone EMI: ಐಫೋನ್ EMIನಲ್ಲಿ ತಗೊಳೋದು ಎಷ್ಟು ಸೇಫ್? ಮಾಸಿಕ ಪಾವತಿ ಸುಲಭ, ಆದರೆ ನಿಮ್ಮ ಹಣಕಾಸು ಸುರಕ್ಷಿತವೇ?



Click it and Unblock the Notifications