For Quick Alerts
ALLOW NOTIFICATIONS  
For Daily Alerts

ಭಾರತದಲ್ಲಿ ಕ್ರಿಪ್ಟೋಕರೆನ್ಸಿ ಅಪಾಯದ ಬಗ್ಗೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಚರ್ಚೆ

|

ನವದೆಹಲಿ, ನವೆಂಬರ್ 13: ಭಾರತದಲ್ಲಿ ಕ್ರಿಪ್ಟೋಕರೆನ್ಸಿ ಮತ್ತು ಸಂಬಂಧಿಸ ವಿಷಯಗಳು ಹೆಚ್ಚು ಸುದ್ದಿಯಾಗುತ್ತಿದೆ. ಈ ಹಿನ್ನೆಲೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಶನಿವಾರ ಕ್ರಿಪ್ಟೋಕರೆನ್ಸಿ ಮತ್ತು ಸಂಬಂಧಿತ ವಿಷಯಗಳ ಕುರಿತು ಉನ್ನತ ಮಟ್ಟದ ಸಭೆಯ ನಡೆಸಲಾಯಿತು.
ಅನಿಯಂತ್ರಿತ ಕ್ರಿಪ್ಟೋ ಮಾರುಕಟ್ಟೆಗಳು ಮನಿ ಲಾಂಡರಿಂಗ್ ಮತ್ತು ಭಯೋತ್ಪಾದನೆಗೆ ಹಣಕಾಸು ಒದಗಿಸುವ ಮಾರ್ಗಗಳಾಗಿ ಬದಲಾಗುತ್ತಿರುವ ಬಗ್ಗೆ ಪ್ರಮುಖ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

 

ನವೆಂಬರ್ 13: ಜಾಗತಿಕ ಮಾರುಕಟ್ಟೆಯಲ್ಲಿ ಕ್ರಿಪ್ಟೋಕರೆನ್ಸಿ ಮೌಲ್ಯ ಎಷ್ಟಿದೆ?

"ಅತಿಯಾದ ಭರವಸೆ ಮತ್ತು ಪಾರದರ್ಶಕವಲ್ಲದ ಜಾಹೀರಾತು" ಮೂಲಕ ಯುವಕರನ್ನು ದಾರಿ ತಪ್ಪಿಸುವ ಪ್ರಯತ್ನಗಳನ್ನು ತಡೆಯುವ ಅಗತ್ಯತೆಯ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಯಿತು ಎಂದು ತಿಳಿದು ಬಂದಿದೆ.

ಭಾರತ: ಕ್ರಿಪ್ಟೋಕರೆನ್ಸಿ ಅಪಾಯದ ಬಗ್ಗೆ ಮೋದಿ ನೇತೃತ್ವದಲ್ಲಿ ಚರ್ಚೆ

ಯುವಕರ ದಾರಿ ತಪ್ಪಿಸುತ್ತಿದೆಯಾ ಕ್ರಿಪ್ಟೋಕರೆನ್ಸಿ:
ಕ್ರಿಪ್ಟೋ ಮಾರುಕಟ್ಟೆಗಳು ಯಾವುದೇ ರೀತಿ ನಿಯಂತ್ರಣಗಳನ್ನು ಹೊಂದಿರದ ಕಾರಣಕ್ಕೆ ಯುವಕರನ್ನು ದಾರಿ ತಪ್ಪಿಸುವ ಪ್ರಯತ್ನ ನಡೆಯುತ್ತಿದೆಯಾ ಎಂಬ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸಭೆಯಲ್ಲಿ ಚರ್ಚಿಸಲಾಯಿತು. ಇದರ ಜೊತೆಗೆ ಕ್ರಿಪ್ಟೋಕರೆನ್ಸಿ ಮೂಲಕ ಮನಿ ಲಾಂಡರಿಂಗ್ ಮತ್ತು ಭಯೋತ್ಪಾದನೆಗೆ ಹಣಕಾಸು ಒದಗಿಸುವ ಮಾರ್ಗಗಳಾಗಲು ಬಿಡಬಾರದು ಎಂಬ ಬಗ್ಗೆ ಚರ್ಚಿಸಲಾಯಿತು.
ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆಯು ವಿಕಸನಗೊಳ್ಳುತ್ತಿರುವ ತಂತ್ರಜ್ಞಾನವಾಗಿದೆ ಎಂಬ ಅಂಶವನ್ನು ಸರ್ಕಾರವು ಅರಿತುಕೊಂಡಿದೆ. ಆದ್ದರಿಂದ ಕೇಂದ್ರ ಸರ್ಕಾರವು ಸೂಕ್ಷ್ಮವಾಗಿ ಗಮನಿಸುತ್ತದೆ ಮತ್ತು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಸರ್ಕಾರವು ಕ್ರಿಪ್ಟೋಕರೆನ್ಸಿ ಮತ್ತು ಸಂಬಂಧಿತ ಸಮಸ್ಯೆಗಳ ಕ್ಷೇತ್ರದಲ್ಲಿ ತೆಗೆದುಕೊಂಡ ಕ್ರಮಗಳು ಪ್ರಗತಿಪರ ಮತ್ತು ಮುಂದಕ್ಕೆ ನೋಡುವವು ಎಂದು ಸಹ ಒಮ್ಮತವಿತ್ತು. ತಜ್ಞರು ಮತ್ತು ಇತರ ಮಧ್ಯಸ್ಥಗಾರರೊಂದಿಗೆ ಸರ್ಕಾರವು ಸಕ್ರಿಯವಾಗಿ ತೊಡಗಿಸಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯಾಗಿದ್ದು, ಇದು ಆಧುನಿಕ ಡಿಜಿಟಲ್ ಯುಗದ ಡಿಜಿಟಲ್ ಕರೆನ್ಸಿ ಆಗಿದೆ. ಈ ಕ್ರಿಪ್ಟೋ ಕರೆನ್ಸಿಗೆ ಯಾವುದೇ ರೀತಿಯ ಮುದ್ರಣ ರೂಪ ಇರುವುದಿಲ್ಲ. ಬಿಟ್ ಕಾಯಿನ್ ಎಂಬ ಕರೆನ್ಸಿಯು ಕೇವಲ ಎಲೆಕ್ಟ್ರಾನಿಕ್ ರೂಪದಲ್ಲಿರುತ್ತದೆ. ರೂಪಾಯಿ, ಡಾಲರ್, ಯುರೋಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಅಲ್ಲದೇ ಇದಕ್ಕೆ ಯಾವುದೇ ದೇಶ, ಭಾಷೆ, ಬ್ಯಾಂಕ್ ಇದ್ಯಾವುದು ಇರುವುದಿಲ್ಲ.
ಕ್ರಿಪ್ಟೋಕರೆನ್ಸಿಗಳ ಖರೀದಿ ಪ್ರಮಾಣ ಹೆಚ್ಚಾಗುತ್ತಿದ್ದಂತೆ ಕ್ರಿಪ್ಟೋಕರೆನ್ಸಿಗಳ ಮೌಲ್ಯದಲ್ಲಿ ಭಾರಿ ಏರಿಕೆ ಕಂಡು ಬರುತ್ತಿದೆ. ಭಾರತದಲ್ಲಿ ಆರ್‌ಬಿಐ ನಿರ್ದೇಶನವಿದ್ದರೂ ಕ್ರಿಪ್ಟೋಕರೆನ್ಸಿಗಳ ಮೇಲೆ ಭಾರತೀಯರ ಹೂಡಿಕೆ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಬಿಲಿಯನ್ ಡಾಲರ್‌ಗಳಷ್ಟು ಹಣವನ್ನು ಭಾರತೀಯರೇ ಹೂಡಿಕೆ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

English summary

India: PM Modi Chairs Meet on Concerns Over Crypto, Money Laundering, Terror Financing

India: PM Modi Chairs Meet on Concerns Over Crypto, Money Laundering, Terror Financing.
Story first published: Saturday, November 13, 2021, 22:08 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X