ನವದೆಹಲಿ, ಜುಲೈ 22: ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಿದ್ದು ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿರುವ ಕಾರಣ ಬಜೆಟ್ ಸಹ ಮಂಡನೆಯಾಗಲಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೇಶದ ಆರ್ಥಿಕ ಸಮೀಕ್ಷೆ 2023 -24 ಈಗಾಗಲೇ ಮಂಡಿಸಿದ್ದು ಹಲವು ವಿಚಾರಗಳನ್ನು ಚರ್ಚೆ ಮಾಡಬಹುದಾಗಿದೆ.
2024-25 ರ ಆರ್ಥಿಕ ವರ್ಷದಲ್ಲಿ ಭಾರತದ ನೈಜ ಜಿಡಿಪಿ ಶೇ. 6.5 ರಿಂದ ಶೇ. 7 ರಷ್ಟು ಬೆಳೆಯುವ ನಿರೀಕ್ಷೆ ಮೂಡಿದೆ. ಜುಲೈ 23 ರಂದು ಕೇಂದ್ರ ಬಜೆಟ್ ಮಂಡನೆಯಾಗುತ್ತಿದ್ದು, ಅದಕ್ಕೆ ಒಂದು ದಿನ ಮುಂಚಿತವಾಗಿ ಆರ್ಥಿಕ ಸಮೀಕ್ಷೆ ಮಂಡನೆಯಾಗಿದೆ. ಸಮೀಕ್ಷೆಯಲ್ಲಿ ಉಲ್ಲೇಖಿಸಿರುವ ಜಿಡಿಪಿ ಬೆಳವಣಿಗೆ ದರ ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಸ್) ಅಂದಾಜಿಸಿದ ಶೇಕಡ 7ರ ಬೆಳವಣಿಗೆಗೆ ಹೊಂದಿಕೆಯಾಗುತ್ತಿರುವುದನ್ನು ನಾವು ಇಲ್ಲಿ ಗಮನಿಸಬಹುದು.

ಭಾರತದ ನೈಜ ಜಿಡಿಪಿಯು ಕಳೆದ ಹಣಕಾಸು ವರ್ಷದಲ್ಲಿ (FY24)ದಲ್ಲಿ ಶೇಕಡ 8.2 ರಷ್ಟು ಬೆಳವಣಿಗೆ ದಾಖಲಿಸಿದೆ. ಸತತ ಮೂರನೇ ವರ್ಷಕ್ಕೆ ಶೇಕಡ 7 ಕ್ಕಿಂತ ಹೆಚ್ಚಿನ ಬೆಳವಣಿಗೆಯನ್ನು ದಾಖಲಿಸಿರುವ ಭಾರತದ ಅರ್ಥ ವ್ಯವಸ್ಥೆ ಸುಸ್ಥಿರವಾಗಿದೆ ಎಂದು ಆರ್ಥಿಕ ಸಮೀಕ್ಷೆ ಹೇಳಿದೆ.
ಹಣದುಬ್ಬರ ಶೇ. 4.5 ಸಾಧ್ಯತೆ
ಆರ್ಥಿಕ ಸಮೀಕ್ಷೆಯು ಹಣದುಬ್ಬರದ ಬಗ್ಗೆ ತೀರಾ ಆಶಾದಾಯಕವಾಗಿಲ್ಲ. ಜಾಗತಿಕ ವಿದ್ಯಮಾನಗಳು ಮತ್ತು ಪ್ರತಿಕೂಲ ಹವಾಮಾನವು ಹಣದುಬ್ಬರದ ಮೇಲೆ ಪರಿಣಾಮ ಬೀರಿದೆ ಎಂದು ಹೇಳಿರುವ ಈ ವರದಿಯ ಪ್ರಕಾರ, 2024-25ರಲ್ಲಿ ಹಣದುಬ್ಬರ ದರ ಶೇ. 4.5ರಷ್ಟು ಇರಬಹುದು ಎಂದು ಹೇಳಿದೆ. ಇದು ಸಹ ದೇಶದ ಅರ್ಥ ವ್ಯವಸ್ಥೆ ಮೇಲೆ ಮಹತ್ವದ ಪ್ರಭಾವ ಬೀರುತ್ತದೆ.
ಆಹಾರ ಹಣದುಬ್ಬರವು ಕಳೆದ ಎರಡು ವರ್ಷಗಳಲ್ಲಿ ಎಚ್ಚರಿಕೆಯ ಘಂಟೆ ನೀಡಿದೆ. ಹವಾಮಾನ ವೈಪರೀತ್ಯಗಳು, ಅತಿವೃಷ್ಟಿ, ಅನಾವೃಷ್ಟಿ, ಖಾಲಿಯಾದ ಜಲಾಶಯಗಳು ಮತ್ತು ಬೆಳೆ ಹಾನಿಯಿಂದಾಗಿ ಕೃಷಿ ವಲಯವು ಸವಾಲುಗಳನ್ನು ಎದುರಿಸಿತು. ಇದು ಕೃಷಿ ಉತ್ಪಾದನೆ ಮತ್ತು ಆಹಾರ ಬೆಲೆಗಳ ಮೇಲೆ ಪರಿಣಾಮ ಬೀರಿತು. ಪರಿಣಾಮವಾಗಿ, ಆಹಾರ ಹಣದುಬ್ಬರವು 2023 ರಲ್ಲಿ 6.6 ಶೇಕಡಾ ಮತ್ತು 2024 ರಲ್ಲಿ 7.5 ಶೇಕಡಾಕ್ಕೆ ಏರಿತು.
ಈ ವರ್ಷದ ಆರಂಭದಲ್ಲಿ ಅಂದರೆ ಫೆ. 1 ರಂದು ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್ ಮಂಡನೆ ಮಾಡಿತ್ತು. 2024-25 ರ ಹಣಕಾಸು ವರ್ಷದಲ್ಲಿ ಶೇಕಡ 7ರಷ್ಟು ಜಿಡಿಪಿ ಬೆಳವಣಿಗೆ ದರ ನಿರೀಕ್ಷೆ ಮಾಡಲಾಗಿತ್ತು. ಆದರೆ ಈಗ ಬಿಡುಗಡೆಯಾಗಿರುವ ಆರ್ಥಿಕ ಸಮೀಕ್ಷೆ 6.5 ರಿಂದ 7 ಎಂದು ಹೇಳಿದೆ.
ಕೇಂದ್ರ ಬಜೆಟ್ ಮಂಡನೆ ಮೇಲೆ ಎಲ್ಲರ ನಿರೀಕ್ಷೆ ಇದ್ದು ಸಾರ್ವಜನಿಕ ವಲಯದಲ್ಲಿ ಉದ್ಯೋಗ ಸೃಷ್ಟಿ, ಕೃಷಿ ಉತ್ಪಾದನೆ ಏರಿಕೆ, ಕೈಗಾರಿಕೆಗಳ ಪುನಃಶ್ಚೇತನ, ರಕ್ಷಣಾ ಕ್ಷೇತ್ರಕ್ಕೆ ಮತ್ತಷ್ಟು ಕೊಡುಗೆ ಸದಿಗುವ ನಿರೀಕ್ಷೆ ಇದೆ. ಮಹಿಳೆಯರು ಮತ್ತು ಹಿರಿಯರು ಈ ಬಜೆಟ್ ನಿಂದ ಕೊಡುಗೆಗಳನ್ನು ಬಯಸುತ್ತಿದ್ದು ಮಧ್ಯಮ ವರ್ಗದವರ ಮೇಲೆ ಹೊರೆಯಾಗದಂತೆ ನಿರ್ಮಲಾ ಸೀತಾರಾಮನ್ ಯಾವ ರೀತಿ ಬಜೆಟ್ ಮಂಡಿಸಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.
ಏನಿದು ಜಿಡಿಪಿ ದರ?
ಜಿಡಿಪಿ ಅಂದರೆ ಗ್ರಾಸ್ ಡೊಮೆಸ್ಟಿಕ್ ಪ್ರೊಡಕ್ಷನ್ ಅಥವಾ ಒಟ್ಟು ರಾಷ್ಟ್ರೀಯ ಉತ್ಪನ್ನ ಅಂತ ಅರ್ಥ. ಅಂದರೆ ಒಂದು ದೇಶದ ಅರ್ಥವ್ಯವಸ್ಥೆಯಲ್ಲಿ ಒಂದು ನಿರ್ದಿಷ್ಟ ಅವಧಿಯಲ್ಲಿ ಉತ್ಪದನೆಯಾಗುವ ಎಲ್ಲಾ ಸರಕು ಮತ್ತು ಸೇವೆಗಳ ಒಟ್ಟು ಮೌಲ್ಯ. ಕೃಷಿ ಉತ್ಪನ್ನ, ಕೈಗಾರಿಕಾ ಉತ್ಪನ್ನ, ಬ್ಯಾಂಕಿಂಗ್ ಮತ್ತು ಹಣಕಾಸು ವಲಯದಲ್ಲಿನ ವಹಿವಾಟು, ಜನರ ಸಂಬಳ, ಗಣಿಗಾರಿಕೆ, ರಿಯಲ್ ಎಸ್ಟೇಟ್, ಆಮದು ರಫ್ತು ಎಲ್ಲವೂ ಸೇರಿ ಲೆಕ್ಕ ಹಾಕಿದಾಗ ಜಿಡಿಪಿ ಎಷ್ಟು ಎಂದು ಲೆಕ್ಕ ಹಾಕಲಾಗುತ್ತದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications