ದೇಶದಲ್ಲಿನ ಲಾಕ್ಡೌನ್ ಆರ್ಥಿಕ ಬಿಕ್ಕಟ್ಟಿನ ನಷ್ಟವನ್ನು ತಗ್ಗಿಸಲು ಕೇಂದ್ರ ಸರ್ಕಾರ ನಾನಾ ಯೋಜನೆಗಳನ್ನು ಇತ್ತೀಚೆಗಷ್ಟೇ ಪ್ರಕಟಿಸಿತ್ತು. ಇದರ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಮೂರನೇ ಬಾರಿಗೆ ಪತ್ರಿಕಾಗೋಷ್ಟಿ ನಡೆಸಿ ಇಂದು ಅನೇಕ ಯೋಜನೆಗಳನ್ನು ಪ್ರಕಟಿಸಿದರು. ಇದರ ನಡುವೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ನಕಾರಾತ್ಮಕವಾಗಿರಲಿದೆ ಎಂದಿದ್ದಾರೆ.
ಕೊರೊನಾವೈರಸ್ ತಡೆಗೆ ಜಗತ್ತಿನಾದ್ಯಂತ ಲಾಕ್ಡೌನ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆಯಿಂದಾಗಿ ಜಾಗತಿ ಆರ್ಥಿಕ ಚಟುವಟಿಕೆಗಳು ಬಹುತೇಕ ತಟಸ್ಥಗೊಂಡಿದ್ದರಿಂದ, ದೇಶದ ಆರ್ಥಿಕ ವ್ಯವಸ್ಥೆಯ ಮೇಲೂ ತೀವ್ರ ಹೊಡೆತ ಬಿದ್ದಿದೆ. ಬಿಕ್ಕಟ್ಟಿನ ನಡುವೆ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಮತ್ತು ಸಾರ್ವಜನಿಕರಲ್ಲಿ ನಗದು ಹರಿವು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಆರ್ಬಿಐ ಅನೇಕ ಕ್ರಮ ಕೈಗೊಂಡಿದೆ.

2020-21ನೇ ಹಣಕಾಸು ವರ್ಷದಲ್ಲಿ ದೇಶದ ಆರ್ಥಿಕ ವೃದ್ಧಿ ದರ (ಜಿಡಿಪಿ) ನಕಾರಾತ್ಮಕವಾಗಿಯೇ ಉಳಿಯುವ ಸಾಧ್ಯತೆಗಳಿದ್ದು, ದ್ವಿತೀಯಾರ್ಧದಲ್ಲಿ ಚೇತರಿಕೆ ಕಾಣಬಹುದಾಗಿದೆ. ಹಣಕಾಸು ಹಾಗೂ ಆಡಳಿತ ಕ್ರಮಗಳಿಂದಾಗಿ ಈ ಸಾಲಿನ ಎರಡನೇ ಹಂತದಲ್ಲಿ ಚೇತರಿಕೆ ಕಾಣುವ ಭರವಸೆ ಇದೆ ಎಂದು ಆರ್ಬಿಐ ಅಂದಾಜಿಸಿದೆ.
ದೇಶದಲ್ಲಿನ ಬಹುತೇಕ ವಲಯಗಳು ಕುಸಿದಿದ್ದು, ಬೇಡಿಕೆ ಇಳಿಕೆಯಾಗಿದೆ. ವಿದ್ಯುತ್ , ಪೆಟ್ರೋಲಿಯಂ ಉತ್ಪನ್ನಗಳು ಬೇಡಿಕೆ ಇಲ್ಲವಾಗಿದೆ ಎಂದು ಆರ್ಬಿಐ ಹೇಳಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications