ದೇಶಾದ್ಯಂತ ಗ್ರಾಮೀಣ ಪ್ರದೇಶಗಳಲ್ಲಿ ನಿರುದ್ಯೋಗ ದರ ಏರಿಕೆಯಾಗಿದ್ದು, ಜುಲೈ 25 ಕ್ಕೆ ಕೊನೆಗೊಂಡ ವಾರದಲ್ಲಿ ಇದು ಶೇಕಡಾ 6.75ರಷ್ಟು ಹೆಚ್ಚಾಗಿದೆ ಎಂದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (ಸಿಎಮ್ಐಇ) ಯ ಹೊಸ ಅಂಕಿ ಅಂಶಗಳು ತಿಳಿಸಿವೆ.
ಒಂದು ವಾರದ ಹಿಂದೆ ಗ್ರಾಮೀಣ ಪ್ರದೇಶಗಳಲ್ಲಿ ನಿರುದ್ಯೋಗ ದರವು ಶೇಕಡಾ 5.1 ರಷ್ಟಿತ್ತು. ಆದರೆ ಇದೀಗ ಶೇಕಡಾ 6.75ಕ್ಕೆ ಏರಿಕೆಗೊಂಡಿದೆ. ಇನ್ನು ನಗರ ಪ್ರದೇಶಗಳಲ್ಲಿ ಆರ್ಥಿಕ ಚಟುವಟಿಕೆಗೆ ಹೆಚ್ಚಾಗಿ ತೆರೆದಿರುವ ಪರಿಣಾಮ ನಿರುದ್ಯೋಗ ದರವು ರಾಷ್ಟ್ರೀಯ ಮತ್ತು ಗ್ರಾಮೀಣ ಸರಾಸರಿಗಿಂತ ಹೆಚ್ಚಾಗಿದೆ. ಜುಲೈ 25ಕ್ಕೆ ಕೊನೆಗೊಂಡ ವಾರದ ನಿರುದ್ಯೋಗ ದರವು ಒಂದು ವಾರದ ಹಿಂದೆ ಇದೇ ಅವಧಿಯಲ್ಲಿ ಶೇ. 7.94 ರಿಂದ 8.01ಕ್ಕೆ ಏರಿದೆ.

ಜುಲೈನಲ್ಲಿನ ನಿರುದ್ಯೋಗ ಸನ್ನಿವೇಶವು ಹಿಂದಿನ ಮೂರು ತಿಂಗಳುಗಳಿಗಿಂತ ಉತ್ತಮವಾಗಿದ್ದರೂ, ಭಾರತವು ಕೊರೊನಾ ಸಾಂಕ್ರಾಮಿಕದ ಎರಡನೇ ತರಂಗವನ್ನು ಎದುರಿಸುತ್ತಿದೆ. ಜುಲೈ ಆರಂಭದಿಂದಲೂ, ನಗರ ಭಾರತದಲ್ಲಿ ನಿರುದ್ಯೋಗ ದರವು ಶೇ. 9ಕ್ಕಿಂತ ಕಡಿಮೆಯಿದೆ, ಇದು ರಾಷ್ಟ್ರೀಯ ಮಟ್ಟದಲ್ಲಿ ಶೇ. 8 ಕ್ಕಿಂತ ಕಡಿಮೆ. ಅದೇ ಸಮಯದಲ್ಲಿ, ಜೂನ್ನಲ್ಲಿ, ಮಾಸಿಕ ನಿರುದ್ಯೋಗ ದರವು ರಾಷ್ಟ್ರೀಯವಾಗಿ ಶೇ. 9.17, ನಗರ ಭಾರತದಲ್ಲಿ ಶೇ. 10.07ರಷ್ಟು ಮತ್ತು ಗ್ರಾಮೀಣ ಭಾರತದಲ್ಲಿ ಶೇ. 8.75ರಷ್ಟು ಆಗಿತ್ತು.
ಮಾನ್ಸೂನ್ ಪ್ರಗತಿ ಮತ್ತು ಔಪಚಾರಿಕ ಮತ್ತು ಅನೌಪಚಾರಿಕ ಕ್ಷೇತ್ರಗಳಲ್ಲಿ ಆರ್ಥಿಕ ಚಟುವಟಿಕೆಗಳನ್ನು ತೆರೆಯುವುದರಿಂದ ಜುಲೈ ತಿಂಗಳಲ್ಲಿ ನಿರುದ್ಯೋಗ ದರವು ಹಿಂದಿನ ತಿಂಗಳಿಗಿಂತ ಕಡಿಮೆಯಾಗಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications