ಮಾರ್ಚ್ 31ರ ತನಕ ಎಲ್ಲ ಪ್ರಯಾಣಿಕ ರೈಲುಗಳ ಸಂಚಾರ ರದ್ದು

ಭಾರತೀಯ ರೈಲ್ವೆಯಿಂದ ಮಾರ್ಚ್ 31ರ ತನಕ ಎಲ್ಲ ಪ್ರಯಾಣಿಕ ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ. ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ 328ಕ್ಕೆ ಏರಿಕೆಯಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮಾರ್ಚ್ 13ರಿಂದ 16ನೇ ತಾರೀಕಿನ ಮಧ್ಯೆ ರೈಲಿನಲ್ಲಿ ಪ್ರಯಾಣ ಮಾಡುವ ವೇಳೆಯೇ ಕನಿಷ್ಠ 12 ಮಂದಿಗೆ ಕೊರೊನಾ ಸೋಂಕು ತಗುಲಿದೆ.

"ರೈಲು ಪ್ರಯಾಣಿಕರಲ್ಲಿ ಕೊರೊನಾ ಸೋಂಕು ಪ್ರಕರಣಗಳು ಕಂಡುಬಂದಿದ್ದು, ಇದರಿಂದ ರೈಲು ಪ್ರಯಾಣವು ಅಪಾಯಕಾರಿಯಾಗಿದೆ. ಆದ್ದರಿಂದ ರೈಲು ಪ್ರಯಾಣ ಮಾಡದಂತೆ ನೋಡಿಕೊಂಡರೆ ಸಹ ಪ್ರಯಾಣಿಕರಿಗೆ ಸೋಂಕು ತಗುಲದಂತೆ ಎಚ್ಚರಿಕೆ ವಹಿಸಬಹುದು. ಆದ್ದರಿಂದ ಎಲ್ಲ ಪ್ರಯಾಣವನ್ನೂ ಮುಂದೂಡಿ. ನೀವು ಹಾಗೂ ನಿಮ್ಮ ಪ್ರೀತಿಪಾತ್ರರು ಸುರಕ್ಷಿತವಾಗಿ ಇರುವಂತೆ ನೋಡಿಕೊಳ್ಳಿ" ಎಂದು ರೈಲ್ವೇಸ್ ಟ್ವೀಟ್ ಮಾಡಿದೆ.

ಮಾರ್ಚ್ 31ರ ತನಕ ಎಲ್ಲ ಪ್ರಯಾಣಿಕ ರೈಲುಗಳ ಸಂಚಾರ ರದ್ದು

ಭಾರತದಲ್ಲಿ ಕೊರೊನಾ ಸೋಂಕಿಗೆ ಮೃತಪಟ್ಟವರ ಸಂಖ್ಯೆ ಏರಿಕೆ ಆಗುತ್ತಿದೆ. ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು 63ಕ್ಕೆ ಏರುವ ಮೂಲಕ ದೇಶದಲ್ಲೇ ಅತಿ ಹೆಚ್ಚು ಸೋಂಕಿತ ಪ್ರಕರಣ ಕಂಡುಬಂದಿರುವ ರಾಜ್ಯ ಇದಾಗಿದೆ. "ಮಾರ್ಚ್ 13ನೇ ತಾರೀಕಿನಂದು ಆಂಧ್ರಪ್ರದೇಶ್ ಸಂಪರ್ಕ್ ಕ್ರಾಂತಿ ರೈಲಿನಲ್ಲಿ ಪ್ರಯಾಣಿಸಿದ್ದ ಎಂಟು ಮಂದಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ" ಎಂದು ತಿಳಿಸಲಾಗಿದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+