ವೈದ್ಯಕೀಯ ಸಿಬ್ಬಂದಿಗೆ ಇಂಡಿಗೋ ಪ್ರಯಾಣ ದರದಲ್ಲಿ 25% ವಿನಾಯಿತಿ
ವೈದ್ಯರು, ನರ್ಸ್ ಗಳಿಗೆ ಈ ವರ್ಷದ ಕೊನೆ ತನಕ ಪ್ರಯಾಣ ದರದಲ್ಲಿ 25% ರಿಯಾಯಿತಿ ಘೋಷಣೆ ಮಾಡಿದೆ ಇಂಡಿಗೋ ವಿಮಾನ ಯಾನ ಸಂಸ್ಥೆ. ಕೊರೊನಾ ವಿರುದ್ಧ ಹೋರಾಟದಲ್ಲಿ ಅತಿ ಮುಖ್ಯ ಪಾತ್ರ ವಹಿಸುತ್ತಿರುವ ಅವರಿಗೆ ಈ ರಿಯಾಯಿತಿ ನೀಡಲಾಗುತ್ತಿದೆ ಎಂದು ತಿಳಿಸಲಾಗಿದೆ.
"ನರ್ಸ್ ಗಳು ಮತ್ತು ವೈದ್ಯರು ಅಧಿಕೃತವಾದ ಆಸ್ಪತ್ರೆ ಗುರುತಿನ ಚೀಟಿಯನ್ನು ಚೆಕ್ ಇನ್ ಸಂದರ್ಭದಲ್ಲಿ ಸಾಕ್ಷಿಯಾಗಿ ನೀಡಬೇಕು" ಎಂದು ಹೇಳಿಕೆ ನೀಡಲಾಗಿದೆ. ವೈದ್ಯಕೀಯ ಸಿಬ್ಬಂದಿಗೆ ಧನ್ಯವಾದ ಹೇಳುವ ಸಲುವಾಗಿ ಈ ಅಭಿಯಾನ ಆರಂಭಿಸಲಾಗಿದೆ. ಚೆಕ್ ಇನ್ ಆದ ಸಂದರ್ಭದಿಂದಲೂ ವಿಶೇಷವಾಗಿ ಬರಮಾಡಿಕೊಳ್ಳಲು ಕೂಡ ತೀರ್ಮಾನಿಸಲಾಗಿದೆ.

ಇಂಡಿಗೋ ವೆಬ್ ಸೈಟ್ ಮೂಲಕ ಬುಕ್ಕಿಂಗ್ ಮಾಡಿದಲ್ಲಿ ಈ ರಿಯಾಯಿತಿ ದೊರೆಯಲಿದೆ. ಜುಲೈ 1, 2020ರಿಂದ ಡಿಸೆಂಬರ್ 31, 2020ರ ಪ್ರಯಾಣಕ್ಕೆ ಮಾತ್ರ ಇದು ಅನ್ವಯ ಆಗಲಿದೆ. ದೇಶೀಯವಾಗಿ ವಿಮಾನಗಳ ಹಾರಾಟವನ್ನು ಆರಂಭ ಮಾಡಲಾಗಿದ್ದು, ಅಂತರರಾಷ್ಟ್ರೀಯ ಪ್ರಯಾಣಿಕರ ವಿಮಾನ ಹಾರಾಟದ ಅಮಾನತನ್ನು ಜುಲೈ 31ರ ತನಕ ವಿಸ್ತರಣೆ ಮಾಡಲಾಗಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications