71ನೇ ಗಣರಾಜ್ಯೋತ್ಸವದ ಪೂರ್ವಭಾವಿಯಾಗಿ ಕೇಂದ್ರ ಸರ್ಕಾರವು ಉದ್ಯಮಿಗಳಾದ ಆನಂದ್ ಮಹೀಂದ್ರಾ ಮತ್ತು ವೇಣು ಶ್ರೀನಿವಾಸನ್ ಅವರಿಗೆ ದೇಶದ ಮೂರನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮಭೂಷಣ ಘೋಷಣೆ ಮಾಡಿದೆ. ವ್ಯಾಪಾರ ಮತ್ತು ಕೈಗಾರಿಕೆ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆಯನ್ನು ಪರಿಗಣಿಸಿ, ಈ ಗೌರವ ನೀಡಲಾಗಿದೆ.
ಮಹೀಂದ್ರಾ ಗ್ರೂಪ್ ನ ಅಧ್ಯಕ್ಷರಾದ ಆನಂದ್ ಮಹೀಂದ್ರಾ ಅವರಿಗೆ ಟ್ವಿಟ್ಟರ್ ನಲ್ಲಿ ಎಪ್ಪತ್ನಾಲ್ಕು ಲಕ್ಷ ಫಾಲೋವರ್ಸ್ ಗಳಿದ್ದಾರೆ. ಅವರ ದಾನ ಕಾರ್ಯಗಳಿಂದಲೂ ಹೆಸರು ಪಡೆದಿದ್ದಾರೆ. ಅರವತ್ನಾಲ್ಕು ವರ್ಷದ ಆನಂದ್ ಮಹೀಂದ್ರಾ ಅವರು ಟ್ವಿಟ್ಟರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ಹೇಳಿದ್ದಾರೆ.
ಟಿವಿಎಸ್ ಮೋಟಾರ್ ಕಂಪೆನಿಯ ಅಧ್ಯಕ್ಷ ವೇಣು ಶ್ರೀನಿವಾಸನ್ ಅವರು ಐಐಟಿ ಮದ್ರಾಸ್ ನಲ್ಲಿ ಗೌರವ ಪ್ರೊಫೆಸರ್ ಆಗಿದ್ದಾರೆ. ಅವರಿಗೂ ಪದ್ಮಭೂಷಣ ಗೌರವ ಸಿಕ್ಕಿದೆ. ಐಐಟಿ ಮದ್ರಾಸ್ ನಿಂದ ಅವರನ್ನು ಅಭಿನಂದಿಸಲಾಗಿದೆ.

ವ್ಯಾಪಾರ ಮತ್ತು ಕೈಗಾರಿಕೆ ಕ್ಷೇತ್ರದಲ್ಲಿನ ಸಾಧನೆಗಾಗಿಯೇ ನೌಕರಿ.ಕಾಮ್ ನ ಸಂಸ್ಥಾಪಕ ಮತ್ತು ಉಪಾಧ್ಯಕ್ಷ ಸಂಜೀವ್ ಬಿಕ್ ಚಂದಾನಿ ಅವರಿಗೆ ಪದ್ಮಶ್ರೀ ಗೌರವ ದೊರೆತಿದೆ. ಅವರ ಕಂಪೆನಿಯಿಂದ ಜೀವನ್ ಸಾಥಿ.ಕಾಮ್, ಶಿಕ್ಷಾ.ಕಾಮ್ ಮತ್ತಿತರ ಕಂಪೆನಿಗಳನ್ನು ನಡೆಸುತ್ತಿದೆ. ಸಂಜೀವ್ ಅವರು ಐಐಎಂ ಅಹ್ಮದಾಬಾದ್ ನಿಂದ ಪದವಿ ಪಡೆದಿದ್ದಾರೆ.
ಭರತ್ ಗೋಯೆಂಕಾ, ನೇಮ್ ನಾಥ್ ಜೈನ್, ಪ್ರೇಮ್ ವತ್ಸಾ ಮತ್ತು ವಿಜಯ ಸಂಕೇಶ್ವರ ಅವರಿಗೆ ಕೂಡ ಪದ್ಮಶ್ರೀ ಗೌರವ ಲಭಿಸಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications