ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ರಾಜ್ಯದ ಜನರಿಗೆ ಭರವಸೆ ಕೊಟ್ಟಂತೆಯೇ ಕಾಂಗ್ರೆಸ್ ಸರ್ಕಾರ ನಡೆದುಕೊಳ್ಳುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ 390 ಕೋಟಿ ಹೂಡಿಕೆ ಮಾಡಲು ಮುಂದಾಗಿದೆ. ಈ ಮೂಲಕ 300 ನೇರ ಉದ್ಯೋಗ ಸೃಷ್ಟಿಯಾಗಲಿದೆ. ಕೇವಲ 9 ತಿಂಗಳಲ್ಲಿ ಬ್ಯಾಟರಿ ಉತ್ಪಾದನೆ ನಮ್ಮ ರಾಜ್ಯದಲ್ಲೇ ಆಗಲಿದೆ. ಹೌದು, ವಿದ್ಯುತ್ ಚಾಲಿತ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಬೇಕಾಗುವ ಲೀಥಿಯಂ-ಅಯಾನ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿಯ (ಐಬಿಸಿ) ಗಿಗಾ ಫ್ಯಾಕ್ಟರಿಯ ಸ್ಥಳೀಯ ಘಟಕವನ್ನು ಬೆಂಗಳೂರಿನಲ್ಲಿ ತರೆಯಲಿದ್ದು, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಅವರು ಇಂದು ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಹಾಗಿದ್ರೆ ಯಾವಾಗ ಬ್ಯಾಟರಿ ಉತ್ಪಾದನೆ ಘಟಕ ಶುರುವಾಗಲಿದೆ? ಎಲ್ಲಿ ಎಂಬ ಹೆಚ್ಚಿನ ಮಾಹಿತಿ ಈ ಲೇಖನದಲ್ಲಿ ತಿಳಿಯೋಣ ಬನ್ನಿ...
390 ಕೋಟಿ ರೂ. ಹೂಡಿಕೆ: 300 ಉದ್ಯೋಗಗಳು ಸೃಷ್ಟಿ
ದೇವನಹಳ್ಳಿಯ ಕೆಐಎಡಿಬಿ ಐಟಿಐಆರ್ ಕೈಗಾರಿಕಾ ಪ್ರದೇಶದಲ್ಲಿ ಅಸ್ತಿತ್ವಕ್ಕೆ ಬರಲಿರುವ ಈ ಉತ್ಪಾದನಾ ಘಟಕಕ್ಕೆ ಕಂಪನಿಯು ಮೊದಲ ಹಂತದಲ್ಲಿ 390 ಕೋಟಿ ರೂ. ಹೂಡಿಕೆ ಮಾಡಲಿದೆ. ಇದರಿಂದ 300 ಉದ್ಯೋಗಗಳು ಸೃಷ್ಟಿಯಾಗಲಿವೆ.

ಅಮೆರಿಕ ಮತ್ತು ಯೂರೋಪಿನ ದೇಶಗಳಿಗೆ ರಫ್ತು
ಬೆಂಗಳೂರಿನಲ್ಲಿ ಉತ್ಪಾದಿಸಲಾಗುವ ಬ್ಯಾಟರಿಗಳ ಪೈಕಿ ಶೇಕಡಾ 20ರಷ್ಟನ್ನು ಅಮೆರಿಕ ಮತ್ತು ಯೂರೋಪಿನ ದೇಶಗಳಿಗೆ ರಫ್ತು ಮಾಡಲಾಗುವುದು ಇದರಿಂದ ದೇಶದ ಆರ್ಥಿಕತೆ ಹೆಚ್ಚಾಗುತ್ತದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.
ಐಬಿಸಿ ಘಟಕಕ್ಕೆ ಹತ್ತು ಎಕರೆ ಜಾಗ
ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಐಬಿಸಿ ಘಟಕಕ್ಕೆ 10 ಎಕರೆ ಜಾಗ ಕೊಟ್ಟಿದೆ. ಇನ್ನೂ ಫಾಕ್ಸ್-ಕಾನ್ ಸಂಸ್ಥೆಯ ಸಮೀಪದಲ್ಲೇ ಇದು ಅಸ್ತಿತ್ವಕ್ಕೆ ಬರಲಿದೆ. ಮುಂದಿನ 98 ತಿಂಗಳಲ್ಲಿ ಈ ಘಟಕವು ಕಾರ್ಯಾಚರಣೆ ಆರಂಭಿಸಲಿದೆ. ಇಲ್ಲಿ ಬ್ಯಾಟರಿಗಳನ್ನು ತಯಾರಿಸಿ, ಇಲ್ಲಿಂದಲೇ ದೇಶ ಹಾಗೂ ವಿದೇಶಗಳಿಗೂ ಕಳಿಸಿ ಕೊಡಲಿದೆ ರಪ್ತು ಮಾಡಲಾಗುತ್ತದೆ ಇದರಿಂದ ದೇಶ ವಿದೇಶಗಳಿಂದಲ್ಲೂ ಆದಾಯ ಸಿಗುತ್ತದೆ ಎಂದು ಹೇಳಿದ್ದರು.
ಬೆಂಗಳೂರಿನಲ್ಲೇ ಬ್ಯಾಟರಿ ಸೆಲ್ ಗಳ ಉತ್ಪಾದನೆ
ಐಬಿಸಿ ಕಂಪನಿಯು ದಕ್ಷಿಣ ಕೊರಿಯಾದಲ್ಲಿ ಸೆಲ್ಸ್ ಉತ್ಪಾದಿಸಿ, ಅವುಗಳನ್ನು ಇಲ್ಲಿಗೆ ತಂದು ಪೂರ್ಣ ಪ್ರಮಾಣದ ಬ್ಯಾಟರಿಗಳನ್ನು ತಯಾರಿಸುತ್ತಿದೆ. ಈ ಘಟಕ ಕಾರ್ಯಾರಂಭ ಆದ ನಂತರ ಬೆಂಗಳೂರಿನಲ್ಲೇ ಸೆಲ್ ಗಳ ಉತ್ಪಾದನೆ ಕೂಡಾ ಆಗಲಿದ್ದು, ರಾಜ್ಯಕ್ಕೆ ಹೆಚ್ಚಿನ ಆದಾಯ ಹರಿದು ಬರುತ್ತದೆ.
ದೇಶದಲ್ಲೇ ಮೊದಲ ಸೆಲ್ ಉತ್ಪಾದನಾ ಘಟಕ
ಇಲ್ಲಿ ಉತ್ಪದಿಸುವ ಬ್ಯಾಟರಿಗಳ ಸೆಲ್ ದೇಶದಲ್ಲೇ ಮೊದಲ ಸೆಲ್ ಉತ್ಪಾದನಾ ಘಟಕವಾಗಲಿದೆ. ಬರುವ ದಿನಗಳಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳ ಜತೆಗೆ ಉಳಿದ ವಾಹನಗಳಿಗೂ ಇದು ಬ್ಯಾಟರಿ ಪೂರೈಕೆ ಮಾಡಲಾಗುತ್ತದೆ.ಇದರಿಂದ ಎಷ್ಟೋ ಮಂದಿ ಉದ್ಯೋಗದ ಜೊತೆ ಆರ್ಥಿಕ ಭದ್ರತೆಯನ್ನು ಒದಗಿಸುತ್ತದೆ ಎಂದು ಮಾಹಿತಿಯನ್ನು ವಿವರಿಸಿದರು.
ಭಾರತದಲ್ಲಿ ಈ ಯೋಜನೆ ಹೆಚ್ಚಿನ ಆದ್ಯತೆ
ಈ ಯೋಜನೆಯ ಮೂಲಕ ಭಾರತದಲ್ಲಿ ಶಿಕ್ಷಣ ಹಾಗೂ ಅಮೆರಿಕದ ಸಿಲಿಕಾನ್ ವ್ಯಾಲಿಯಲ್ಲಿ ತರಬೇತಿ ಪಡೆದ ಯುವ ಉದ್ಯಮಿಗಳು ಐಬಿಸಿ ಕಂಪನಿ ಸ್ಥಾಪಿಸಿ, ಬ್ಯಾಟರಿಗಳ ವಿನ್ಯಾಸ, ಉತ್ಪಾದನೆಗೆ ಆದ್ಯತೆ ಕೊಟ್ಟಿದ್ದಾರೆ. ಹಾಗೆಯೇ ಭಾರತದ ಅಗತ್ಯಕ್ಕೆ ಹೊಂದುವ ಹಾಗೆ ವಿನ್ಯಾಸ ಮಾಡಿರುವುದು ಮೆಚ್ಚುವಂತಹ ಕೆಲಸವಾಗಿದೆ. ಇದು ಭಾರತದಲ್ಲಿ ಇಂತಹ ಪ್ರಪ್ರಥಮ ಯೋಜನೆಯಾಗಿದೆ ಎಂದು ಮಾಹಿತಿಯನ್ನು ತಿಳಿಸಿದ್ದಾರೆ.
ರಾಜ್ಯದ ಆರ್ಥಿಕತೆಗೆ ಹೊಸ ಬಲ
ರೆಟ್ರೋಫಿಟ್ ಬ್ಯಾಟರಿಗಳನ್ನು ತಯಾರಿಸಲಾಗುವುದು. ಇದರಿಂದ ರಾಜ್ಯದ ಆರ್ಥಿಕತೆಗೆ ಹೊಸ ಬಲ ಬರಲಿದ್ದು, ಚೀನಾದ ಮೇಲಿನ ಅವಲಂಬನೆ ಕಡಿಮೆಯಾಗಲಿದೆ ಎಂದು ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.


Click it and Unblock the Notifications