For Quick Alerts
ALLOW NOTIFICATIONS  
For Daily Alerts

ಕೈಗಾರಿಕೋದ್ಯಮಿಗಳನ್ನು ಆಕರ್ಷಿಸಲು ಮುಂಬೈನಲ್ಲಿ ರೋಡ್ ಶೋ

|

ಬೆಂಗಳೂರು, ಡಿಸೆಂಬರ್‌ 22: ರಾಜ್ಯದ ಎರಡನೇ ಹಂತದ ನಗರಗಳಲ್ಲಿ ಬಂಡವಾಳ ಹೂಡಲು ಕೈಗಾರಿಕೋದ್ಯಮಿಗಳನ್ನು ಆಕರ್ಷಿಸುವ ಉದ್ದೇಶದಿಂದ ಕೇಂದ್ರ ಸಂಸದೀಯ ಹಾಗೂ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್‌ ಜೋಷಿ ಅವರ ಜೊತೆಯಲ್ಲಿ ಮುಂಬಯಿಯಲ್ಲಿ ಕೈಗಾರಿಕೋದ್ಯಮಿಗಳ ಜೊತೆ ಎರಡು ದಿನಗಳ ಕಾಲ ಸರಣಿ ಸಭೆಯನ್ನು ನಡೆಸಲಿದ್ದೇವೆ ಎಂದು ಕೈಗಾರಿಕ ಸಚಿವ ಜಗದೀಶ್‌ ಶೆಟ್ಟರ್‌ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆಗೊಳಿಸಿರುವ ಅವರು, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಈ ರೋಡ್‌ ಶೋ ನಲ್ಲಿ ಭಾಗವಹಿಸಲಿದ್ದು, ಫೆಬ್ರವರಿ ತಿಂಗಳ ಎರಡನೇ ವಾರದಲ್ಲಿ ಹುಬ್ಬಳ್ಳಿಯಲ್ಲಿ ಆಯೋಜಿಸಿರುವ ಇನ್‌ವೆಸ್ಟ್‌ ಕರ್ನಾಟಕ ಹುಬ್ಬಳ್ಳಿ ಸಮಾವೇಶ ದಲ್ಲಿ ಭಾಗವಹಿಸುವಂತೆ ಕೈಗಾರಿಕೋದ್ಯಮಿಗಳಿಗೆ ಆಹ್ವಾನ ನೀಡಲಿದ್ದೇವೆ ಎಂದರು.

 

2ನೇ ಹಂತದ ನಗರಗಳಲ್ಲಿ ಬಂಡವಾಳ ಹೂಡಿಕೆಗೆ ನೀತಿ, ನಿಯಮ

ಭಾನುವಾರ ಸಂಜೆ ಇ-ಶಾಂಗ್‌ ರೆಡ್‌ವುಡ್‌ ನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ದಕ್ಷಿಣ ಭಾರತದ ಮುಖ್ಯಸ್ಥರ ಭೇಟಿಗೆ ಸಮಯ ನಿಗದಿಪಡಿಸಲಾಗಿದೆ. ಅಲ್ಲದೆ, ಹಿಂದೂಜಾ ಗ್ರೂಪ್‌ ಆಫ್‌ ಕಂಪನಿಗಳ ಪ್ರಮುಖರ ಜೊತೆಯಲ್ಲಿ ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿದೆ. ಈ ರೋಡ್‌ ಶೋ ನಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಗೌರವ್‌ ಗುಪ್ತಾ, ಕೈಗಾರಿಕಾ ಇಲಾಖೆ ಆಯುಕ್ತೆ ಶ್ರೀಮತಿ ಗುಂಜನ್‌ ಕೃಷ್ಣಾ ಸೇರಿದಂತೆ ಮತ್ತು ಇಲಾಖೆಯ ಪ್ರಮುಖ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಕೈಗಾರಿಕೋದ್ಯಮಿಗಳ ಜೊತೆ ಸರಣಿ ಸಭೆ

ಕೈಗಾರಿಕೋದ್ಯಮಿಗಳ ಜೊತೆ ಸರಣಿ ಸಭೆ

ಸೋಮುವಾರ ಬೆಳಿಗ್ಗೆಯಿಂದ ಕೈಗಾರಿಕೋದ್ಯಮಿಗಳ ಜೊತೆ ಸರಣಿ ಸಭೆಗಳನ್ನು ಆಯೋಜಿಸಲಾಗಿದೆ. ಟಾಟಾ ಗ್ರೂಫ್‌ ನ ಅಧ್ಯಕ್ಷರಾದ ಚಂದ್ರಶೇಖರನ್‌, ಮಹೀಂದ್ರ ‍‍& ಮಹಿಂದ್ರ ಲಿಮಿಟೆಡ್‌ ನ ಅಧ್ಯಕ್ಷರಾದ ಆನಂದ್‌ ಮಹೀಂದ್ರ, ಗೋದ್ರೇಜ್‌ ಗ್ರೂಪ್‌ ನ ಅಧ್ಯಕ್ಷರಾದ ಆದಿ ಗೋದ್ರೇಜ್‌ ಜೊತೆಯಲ್ಲಿ ಪ್ರತ್ಯೇಕ ಸಭೆಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು. ಇದಕ್ಕೂ ಮುನ್ನ ಕನ್ಯೂಮರ್‌ ಗೂಡ್ಸ್‌ ಕಂಫನಿಗಳಾದ, ಜ್ಯೋತಿ ಲ್ಯಾಬ್ಸ್‌ ಲಿಮಿಟೆಡ್‌, ಎಸಿಸಿ ಲಿಮಿಟೆಡ್‌, ಹುಟಮಕಿ ಪಿಪಿಲ್‌ ಲಿಮಿಟೆಡ್‌, ಜೋನ್ಸ್‌ ಲ್ಯಾಂಗ್‌ ಲ್ಯಾಸೆಲ್ಲೆ, ಇಂಡಕೌಂಟ್‌, ಪ್ರಮುಖರ ಜೊತೆಯಲ್ಲಿಯೂ ಸಭೆಗಳು ನಡೆಯಲಿವೆ ಎಂದು ಹೇಳಿದರು.

ಟ್ರಿಡೆಂಟ್‌ ಹೋಟೆಲ್‌ ನಲ್ಲಿ ರೋಡ್‌ ಶೋ

ಟ್ರಿಡೆಂಟ್‌ ಹೋಟೆಲ್‌ ನಲ್ಲಿ ರೋಡ್‌ ಶೋ

ಸೋಮವಾರ ಸಂಜೆ ನಾರಿಮನ್‌ ಪಾಯಿಂಟ್‌ ನಲ್ಲಿರುವ ಟ್ರಿಡೆಂಟ್‌ ಹೋಟೇಲ್‌ ನಲ್ಲಿ ರೋಡ್‌ ಶೋ ನಡೆಯಲಿದ್ದು, ರಾಜ್ಯದಲ್ಲಿರುವ ಕೈಗಾರಿಕೆಗೆ ಪೂರಕವಾದ ವಾತಾವರಣ ಹಾಗೂ ಸೌಲಭ್ಯಗಳ ಬಗ್ಗೆ ಕೈಗಾರಿಕೋದ್ಯಮಿಗಳಿಗೆ ಮಾಹಿತಿಯನ್ನು ನೀಡಲಾಗುವುದು. ಈ ಕಾರ್ಯಕ್ರಮದಲ್ಲಿ ರಾಜ್ಯದಲ್ಲಿ ಹೂಡಿಕೆಯನ್ನು ಮಾಡಿರುವ ಕೈಗಾರಿಕೋದ್ಯಮಿಗಳು ತಮ್ಮ ಅನುಭವವನ್ನು ಹಂಚಿಕೊಳ್ಳಲಿರುವುದು ವಿಶೇಷವಾಗಿದೆ ಎಂದು ತಿಳಿಸಿದ್ದಾರೆ.

ಇನ್‌ವೆಸ್ಟ್‌ ಕರ್ನಾಟಕ ಹುಬ್ಬಳ್ಳಿ ಸಮಾವೇಶ
 

ಇನ್‌ವೆಸ್ಟ್‌ ಕರ್ನಾಟಕ ಹುಬ್ಬಳ್ಳಿ ಸಮಾವೇಶ

ರಾಜ್ಯದ ಎರಡನೇ ಹಂತದ ನಗರಗಳಲ್ಲಿ ಅದರಲ್ಲೂ ಉತ್ತರ ಕರ್ನಾಟಕದಲ್ಲಿ ಕೈಗಾರಿಕೆಗಳನ್ನು ಅಭಿವೃದ್ದಿಗೊಳಿಸುವ ನಿಟ್ಟಿನಲ್ಲಿ ಮೊದಲ ಹಂತವಾಗಿ ಇನ್‌ವೆಸ್ಟ್‌ ಕರ್ನಾಟಕ ಹುಬ್ಬಳ್ಳಿ ಸಮಾವೇಶವನ್ನು ಆಯೋಜಿಸಲು ನಿರ್ಧರಿಸಿದ್ದೇವೆ. ಫೆಬ್ರವರಿ ಎರಡನೇ ವಾರದಲ್ಲಿ ಈ ಸಮಾವೇಶ ನಡೆಯಲಿದ್ದು, ಮುಂದಿನ ಹಂತದಲ್ಲಿ ಬೆಳಗಾವಿ, ಗುಲ್ಬರ್ಗಾ, ಮೈಸೂರು, ದಾವಣಗೆರೆ, ಮಂಗಳೂರು, ಹಾಸನ, ಹಾಗೂ ಶಿವಮೊಗ್ಗ ಸೇರಿದಂತೆ ಎರಡನೇ ಹಂತದ ನಗರಗಳಲ್ಲಿ ಹೂಡಿಕೆದಾರರ ಸಮಾವೇಶವನ್ನು ನಡೆಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ವಿಮಾನ ಸಂಪರ್ಕ ಹೆಚ್ಚಾಗಿದೆ

ರಾಜ್ಯದಲ್ಲಿ ವಿಮಾನ ಸಂಪರ್ಕ ಹೆಚ್ಚಾಗಿದೆ

ರಾಜ್ಯದಲ್ಲಿ ವಿಮಾನ ಸಂಪರ್ಕ ಹೆಚ್ಚಾಗಿದೆ. ಕೈಗಾರಿಕೋದ್ಯಮಿಗಳು ಬೆಂಗಳೂರು ಹೊರತುಪಡಿಸಿ ಇತರೇ ಜಿಲ್ಲೆಗಳಲ್ಲೂ ಹೂಡಿಕೆ ಮಾಡಲು ಇದು ಅನುಕೂಲ ಮಾಡಿಕೊಟ್ಟಿದೆ. ರಾಜ್ಯದಲ್ಲಿ ಹೂಡಿಕೆಯ ವಾತಾವರಣ ಬದಲಾಗಿದೆ. ಈಗಾಗಲೇ ಹೈದರಾಬಾದ್‌, ಮಹಾರಾಷ್ಟ್ರ ಹಾಗೂ ಇನ್ನಿತರೆ ರಾಜ್ಯಗಳ ಕೈಗಾರಿಕೋದ್ಯಮಿಗಳು ನಮ್ಮ ಜೊತೆ ಚರ್ಚೆ ನಡೆಸಿದ್ದು, ಬೆಂಗಳೂರು ಹೊರತು ಪಡಿಸಿ ಇತರೆ ಜಿಲ್ಲೆಗಳಲ್ಲಿ ಕೈಗಾರಿಕೆಯನ್ನು ಪ್ರಾರಂಭಿಸಲು ಮುಂದಾಗಿದ್ದಾರೆ. ಇವರಿಗೆ ಅಗತ್ಯವಿರುವ ಅನುಕೂಲತೆಗಳನ್ನು ರಾಜ್ಯ ಸರಕಾರ ಮಾಡಿಕೊಡುತ್ತಿದೆ ಎಂದು ಹೇಳಿದರು.

English summary

Invest in Karnataka: Shettar, Prahlad Joshi CII Road show in Mumbai

Government of Karnataka in association Confederation of Indian Industry (CII) is organizing a Road Show on 23rd December 2019 at Hotel Trident, Nariman Point Mumbai.
Company Search
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Goodreturns sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Goodreturns website. However, you can change your cookie settings at any time. Learn more