Invest Karnataka 2025: ಇಂದು ಚಾಲನೆ; ಮೊದಲ ದಿನವೇ ಕರ್ನಾಟಕದಲ್ಲಿ ಬಂಪರ್ ಹೂಡಿಕೆ ಸಾಧ್ಯತೆ

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಇನ್ವೆಸ್ಟ್‌ ಕರ್ನಾಟಕ 2025ಕ್ಕೆ ಆತಿಥ್ಯ ವಹಿಸಲು ಕರ್ನಾಟಕ ರಾಜ್ಯ ಸರ್ಕಾರವು ಸಜ್ಜಾಗಿದ್ದು, ಇಂದು ಸಂಜೆ ನಡೆಯಲಿರುವ ಉದ್ಘಾಟನಾ ಸಮಾರಂಭವು ನಾಲ್ಕು ದಿನಗಳ ಹೂಡಿಕೆ ಉತ್ಸವಕ್ಕೆ ಮುನ್ನುಡಿ ಬರೆಯಲಿದೆ. ಭಾರೀ ಮೊತ್ತದ ಬಂಡವಾಳ ಸೆಳೆಯಲು ಸಿದ್ದವಾಗಿರುವ ಹೂಡಿಕೆ ಉತ್ಸವಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಲಿದ್ದಾರೆ.

ಕರ್ನಾಟಕವನ್ನು ಜಾಗತಿಕ ಹೂಡಿಕೆಯ ಶಕ್ತಿ ಕೇಂದ್ರವನ್ನಾಗಿ ಅಭಿವೃದ್ದಿಪಡಿಸಲು ಈ ಸಮಾವೇಶ ನೆರವಾಗಲಿದ್ದು ನಾವೀನ್ಯ, ಕೈಗಾರಿಕೆ ಪ್ರಗತಿ ಮತ್ತು ಜಾಗತಿಕ ಪಾಲುದಾರಿಕೆ ರಾಜ್ಯದ ಸೌಲಭ್ಯಗಳನ್ನು ಇಡೀ ವಿಶ್ವಕ್ಕೆ ಪರಿಚಯಿಸಲಿದೆ. ಅಲ್ಲದೇ ಅವಿಷ್ಕಾರ, ಕೈಗಾರಿಕಾ ಬೆಳವಣಿಗೆ ಮತ್ತು ಜಾಗತಿಕ ಪಾಲುದಾರಿಕೆಯನ್ನು ಉತ್ತೇಜಿಸುವಲ್ಲಿ ಕರ್ನಾಟಕದ ಅನುಕೂಲವನ್ನು ತೋರಿಸುವುದು ಈ ಸಮಾವೇಶದಲ್ಲಿ ಪ್ರಮುಖ ಗುರಿಯಾಗಿದೆ.

 ಇನ್ವೆಸ್ಟ್‌ ಕರ್ನಾಟಕಕ್ಕೆ ಇಂದು ಚಾಲನೆ

ಈ ಹೂಡಿಕೆ ಸಮಾವೇಶದಲ್ಲಿ 10 ಲಕ್ಷ ಕೋಟಿ ರೂ. ಒಟ್ಟು ಹೂಡಿಕೆಯ ನಿರೀಕ್ಷೆ ಮಾಡಲಾಗಿದ್ದು, ಈ ಪೈಕಿ 7 ಲಕ್ಷ ಕೋಟಿ. ರೂ. ಈಗಾಗಲೇ ದೃಢಪಟ್ಟಿರುವ ಹೂಡಿಕೆ ಮೊತ್ತವಾಗಿದೆ.

ಸುಮಾರು 19 ದೇಶಗಳು ಭಾಗವಹಿಸುವ ನಿರೀಕ್ಷೆಯಿದೆ. 75 ಕ್ಕೂ ಹೆಚ್ಚು ಮಳಿಗೆಗಳು, 25 ಕ್ಕೂ ಹೆಚ್ಚು ತಾಂತ್ರಿಕ ಸೆಷನ್‌ಗಳು, 10 ಕ್ಕೂ ಹೆಚ್ಚು ದೇಶದ ಸೆಷನ್ಸ್ ಮತ್ತು SME ಸಂಪರ್ಕ ಚರ್ಚೆಗಳನ್ನು ಒಳಗೊಂಡಿರುವ ಸಮಾವೇಶವು, ಜಾಗತಿಕ ಆರ್ಥಿಕ ಪ್ರವೃತ್ತಿಗಳು, ಉದಯೋನ್ಮುಖ ತಂತ್ರಜ್ಞಾನಗಳು ಮತ್ತು ಸ್ಥಿತಿಸ್ಥಾಪಕ ತಂತ್ರಗಳ ಬಗ್ಗೆ ಆಳವಾದ ಒಳನೋಟಗಳನ್ನು ನೀಡುತ್ತದೆ.

DCM DK Shivakumar: ಬೆಂಗಳೂರು ಹೊರತಾಗಿ ಇತರೆಡೆ ಕೈಗಾರಿಕೆ ಸ್ಥಾಪನೆಗೆ ಆದ್ಯತೆ: ಡಿ ಕೆ ಶಿವಕುಮಾರ್‌

ಮೊದಲ ದಿನವೇ ಒಡಂಬಡಿಕೆಗಳಿಗೆ ಸಹಿ

10 ಲಕ್ಷ ಕೋಟಿ ರೂ. ಒಟ್ಟು ಹೂಡಿಕೆಯ ನಿರೀಕ್ಷೆಯೊಂದಿಗೆ ಆರಂಭಿಸುತ್ತಿರುವ ಸಮಾವೇಶದ ಮೊದಲ ದಿನವೇ ನವೀಕರಿಸಬಹುದಾದ ಇಂಧನ, ಉಕ್ಕ, ಏರೋಸ್ಪೇಸ್, ಸಿಮೆಂಟ್, ವಿದ್ಯುತ್ ಚಾಲಿನ ವಾಹನ ಉತ್ಪಾದಕತೆ ಘಟಕ ಸೇರಿ ವಿವಿಧ ಉದ್ಯಮ ಸ್ಥಾಪನೆಗೆ ಸಂಬಂಧಿಸಿದ ಒಪ್ಪಂದಕ್ಕೆ ಪರಸ್ಪರ ಸಹಿ ಹಾಕುವ ನಿರೀಕ್ಷೆ ಇದೆ.

ಬೆಂಗಳೂರು ಹೊರತಾಗಿ ಇತರೆಡೆ ಕೈಗಾರಿಕೆ ಸ್ಥಾಪನೆಗೆ ಆದ್ಯತೆ: ಡಿಸಿಎಂ

"ಬೆಂಗಳೂರಿನ ಜನಸಂಖ್ಯೆ ಹೆಚ್ಚಾಗಿದ್ದು, ರಾಜಧಾನಿ ಹೊರತಾಗಿ ಇತರ ಭಾಗದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಆದ್ಯತೆ ನೀಡಲಾಗುವುದು. ಇದಕ್ಕಾಗಿ ಜಿಮ್ ಸಮಾವೇಶದಲ್ಲಿ ನೂತನ ಕೈಗಾರಿಕಾ ನೀತಿ ಪ್ರಕಟಿಸಲಾಗುವುದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು-ಹಾಸನ ನಡುವೆ ಇಂಟರ್‌ಸಿಟಿ ರೈಲು ಆರಂಭ?

ಇಂದಿನಿಂದ ಅರಮನೆ ಮೈದಾನದಲ್ಲಿ ನಡೆಯಲಿರುವ "ಇನ್ವೆಸ್ಟ್ ಕರ್ನಾಟಕ 2025" ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಸ್ಥಳದಲ್ಲಿ ಪೂರ್ವಸಿದ್ಧತೆಯನ್ನು ಪರಿಶೀಲಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು "ಬೆಂಗಳೂರಿನ ಜನಸಂಖ್ಯೆ 1.40 ಕೋಟಿ ಮುಟ್ಟಿದ್ದು, ನಗರದಲ್ಲಿ ವಾಹನಗಳ ಸಂಖ್ಯೆ 1.10 ಕೋಟಿಯಷ್ಟಾಗಿದೆ. ಬೆಂಗಳೂರಿನ ಮೇಲೆ ಹೊರೆ ತಪ್ಪಿಸಬೇಕು. ಬೆಂಗಳೂರಿಗೆ ವಲಸೆ ಬರುವುದನ್ನು ತಪ್ಪಿಸಬೇಕು. ಬಂಡವಾಳ ಹೂಡಿಕೆದಾರರು ಬೆಂಗಳೂರಿನ ಹೊರತಾಗಿ ಇತರೆ ಭಾಗದಲ್ಲಿ ಕೈಗಾರಿಕೆ ಸ್ಥಾಪನೆ ಮಾಡಲು ಮುಂದೆ ಬಂದು ನಮಗೆ ಶಕ್ತಿ ತುಂಬಬೇಕು" ಎಂದು ಹೇಳಿದ್ದರು.

"ಇದಕ್ಕೆ ಪೂರಕವಾಗಿ ಕೈಗಾರಿಕಾ ಸಚಿವರಾದ ಎಂ.ಬಿ ಪಾಟೀಲ್ ಅವರ ತಂಡ ರಾಜ್ಯದಲ್ಲಿ ನೂತನ ಕೈಗಾರಿಕಾ ನೀತಿ ರೂಪಿಸಿದ್ದು, ಮುಖ್ಯಮಂತ್ರಿಗಳು ಸಮಾವೇಶದಲ್ಲಿ ಪ್ರಕಟಿಸಿದ್ದಾರೆ. ಈ ನೀತಿಯ ಮೂಲಕ ನಮ್ಮ ರಾಜ್ಯ ದೇಶಕ್ಕೆ ಮಾದರಿಯಾಗಲಿದೆ" ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.

"ಬೆಂಗಳೂರು ಜಾಗತಿಕ ನಗರವಾಗಿ ಬೆಳೆದಿದ್ದು, ಇಡೀ ಜಗತ್ತು ಭಾರತವನ್ನು ಬೆಂಗಳೂರಿನ ಮೂಲಕ ನೋಡುತ್ತಿದೆ. ಬಂಡವಾಳ ಹೂಡಿಕೆದಾರರು ನಮ್ಮ ರಾಜ್ಯಕ್ಕೆ ಬರಬೇಕು. ನಾವೆಲ್ಲರೂ ಸೇರಿ ಒಟ್ಟಾಗಿ ಕೆಲಸ ಮಾಡಿ, ಹೆಚ್ಚು ಅವಕಾಶ ಸೃಷ್ಟಿಸಬೇಕು" ಎಂದು ತಿಳಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+