ಕ್ರಿಕೆಟ್ ಪ್ರಿಯರೇ ಇಲ್ಲಿ ಕೇಳಿ.. ನಾಳೆ ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ ಕ್ರಿಕೆಟ್ ಪಂದ್ಯದ ಪ್ರಯುಕ್ತ ನಮ್ಮ ಮೆಟ್ರೋ ಸಿಹಿ ಸುದ್ದಿಯೊಂದನ್ನು ಕೊಟ್ಟಿದೆ.
ಹೌದು, ನಾಳೆ RCB ಹಾಗೂ ಗುಜರಾತ್ ಟೈಟನ್ಸ್ ನಡುವೆ ಕಾಳಗ ಬೆಂಗಳೂರಿನಲ್ಲಿ ನಡೆಯಲಿದೆ. ಇದಕ್ಕಾಗಿ
ನಮ್ಮ ಮೆಟ್ರೋ ಕೂಡ ಸೇವೆಯ ಅವಧಿಯನ್ನು ವಿಸ್ತರಣೆ ಮಾಡಿ ಗುಡ್ ನ್ಯೂಸ್ ಕೊಟ್ಟಿದೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಬಿಎಂಆರ್ಸಿಎಲ್ ಮಾಹಿತಿಯನ್ನು ತಿಳಿಸಿದೆ.

ಆರ್ ಸಿಬಿ ತವರು ಜಿಲ್ಲೆ ಬೆಂಗಳೂರಿನಲ್ಲಿ ನಡೆಯುವ ಪಂದ್ಯಗಳಿಗೆ ಮೆಟ್ರೋ ಸೇವೆಯನ್ನು ತಡ ರಾತ್ರಿ 12.30ರ ವರೆಗೆ ಸೇವೆಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಬಿಎಂಆರ್ ಸಿಎಲ್ ಪ್ರಕಟಣೆ ತಿಳಿಸಿದೆ.
ನಾಡಪ್ರಭು ಕೆಂಪೇಗೌಡ ಸ್ಟೇಷನ್ ಮೆಜೆಸ್ಟಿಕ್‌ನಿಂದ ನಾಲ್ಕು ದಿಕ್ಕುಗಳಿಗೂ ಕೊನೆಯ ರೈಲು ಬೆಳಗಿನ ಜಾವ 1.15 ಕ್ಕೆ ಹೊರಡುತ್ತದೆ ಎಂದು ಮಾಹಿತಿಯನ್ನು ತಿಳಿಸಿದೆ.
ಏಪ್ರಿಲ್ 2ರಂದು ಬೆಂಗಳೂರಿನಲ್ಲಿ ಈ ಸೀಸನ್‌ನ ಮೊದಲ ಐಪಿಎಲ್ ಪಂದ್ಯ ನಡೆಯಲಿದೆ.
ಎಕ್ಸ್ ಖಾತೆಯಲ್ಲಿ BMRCL ಹೇಳಿರುವುದು ಏನು?
ಬೆಂಗಳೂರಿನಲ್ಲಿ ನಡೆಯಲಿರುವ TATA IPL T-20 ಕ್ರಿಕೆಟ್ ಪಂದ್ಯಗಳ ವೀಕ್ಷಣೆಗಾಗಿ, ನಮ್ಮ ಮೆಟ್ರೋ 02, 10, 18, ಹಾಗೂ 24ನೇ ಏಪ್ರಿಲ್ ಮತ್ತು 03, 13 ಹಾಗೂ 17ನೇ ಮೇ, 2025 ರಂದು ವೈಟ್‌ಫೀಲ್ಡ್ (ಕಾಡುಗೋಡಿ), ಚಲ್ಲಘಟ್ಟ ರೇಷ್ಮೆ ಸಂಸ್ಥೆ ಮತ್ತು ಮಾದವರ ಮೆಟ್ರೋ ನಿಲ್ದಾಣಗಳಿಂದ ಕೊನೆಯ ಮೆಟ್ರೋ ರೈಲು ಸೇವೆಯನ್ನು ಮರುದಿನ ಮುಂಜಾನೆ 12.30ರ ವರೆಗೆ ವಿಸ್ತರಿಸಿದೆ.
ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ಎಲ್ಲಾ ನಾಲ್ಕು ದಿಕ್ಕುಗಳ ಕಡೆಗೆ ಕೊನೆಯ ರೈಲು ಮಧ್ಯರಾತ್ರಿ 01.15 ಕ್ಕೆ ಹೊರಡಲಿದೆ. ಸಾರ್ವಜನಿಕರಿಗೆ ಮತ್ತು ಮೆಟ್ರೋ ಪ್ರಯಾಣಿಕರು ಗಮನಿಸಬೇಕು ಎಂದು ಮಾಹಿತಿ ತಿಳಿಸಿದೆ.
ಐಪಿಎಲ್ 2025 ಲೈವ್ ಸ್ಟ್ರೀಮಿಂಗ್ ವೀಕ್ಷಣೆ ಹೇಗೆ?
ಐಪಿಎಲ್ 2025 ಆವೃತ್ತಿಯ ಎಲ್ಲಾ ಪಂದ್ಯಗಳನ್ನು ಟಿವಿ ಮತ್ತು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.
ಟಿವಿಯಲ್ಲಿ ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ 1 ಹಿಂದಿ, ಸ್ಟಾರ್ ಸ್ಪೋರ್ಟ್ಸ್ 2, ಸ್ಪೋರ್ಟ್ಸ್ 18 1
ಆನ್‌ಲೈನ್ ಸ್ಟ್ರೀಮಿಂಗ್: ಜಿಯೋ ಹಾಟ್‌ಸ್ಟಾರ್ ಆಪ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ
ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ದೇವದತ್ ಪಡಿಕ್ಕಲ್, ಸ್ವಸ್ತಿಕ್ ಚಿಕಾರ, ಲಿಯಾಮ್ ಲಿವಿಂಗ್‌ಸ್ಟೋನ್, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಮನೋಜ್ ಭಂಡಾಗೆ, ಜಾಕೋಬ್ ಬಿಥೆಲ್, ಜೋಶ್ ಹ್ಯಾಜಲ್‌ವುಡ್, ರಸಿಕ್ ದಾರ್, ಸುಯಾಶ್ ಶರ್ಮಾ, ಭುವನೇಶ್ವರ ಕುಮಾರ್, ನುವಾನ್ ತುಷಾರ, ಲುಂಗಿ ಎನ್‌ಗಿಡಿ, ಅಭಿನಂದನ್ ಸಿಂಗ್, ಮೋಹಿತ್ ರಾಥಿ, ಯಶ್ ದಯಾಳ್.
ಗುಜರಾತ್ ಟೈಟಾನ್ಸ್ ತಂಡ
ಶುಭಮನ್ ಗಿಲ್ (ನಾಯಕ), ಜೋಸ್ ಬಟ್ಲರ್, ಕುಮಾರ್ ಕುಶಾಗ್ರ, ಅನುಜ್ ರಾವತ್, ಶೆರ್ಫೇನ್ ರುದರ್ಫೋರ್ಡ್, ಗ್ಲೆನ್ ಫಿಲಿಪ್ಸ್, ನಿಶಾಂತ್ ಸಿಂಧು, ಮಹಿಪಾಲ್ ಲೊಮ್ರೋರ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಅರ್ಷದ್ ಖಾನ್, ಸಾಯಿ ಕಿಶೋರ್, ಜಯಂತ್ ಯಾದವ್, ಕರೀಮ್ ಜನತ್, ಬಿ. ಸಾಯಿ ಸುದರ್ಶನ್, ಶಾರುಖ್ ಖಾನ್, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಮಾನವ್ ಸುತಾರ್, ಜೆರಾಲ್ಡ್ ಕೋಟ್ಜೀ, ಗುರ್ನೂರ್ ಸಿಂಗ್ ಬ್ರಾರ್, ಇಶಾಂತ್ ಶರ್ಮಾ, ಕುಲ್ವಂತ್ ಖೇಜ್ರೋಲಿಯಾ, ರಾಹುಲ್ ತೆವಾಟಿಯಾ, ರಶೀದ್ ಖಾನ್.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ನಡುವೆ ದೊಡ್ಡ ಮಟ್ಟದಲ್ಲಿ ಕಾಳಗ ನಡೆಯಲಿದ್ದು,ತವರು ಜಿಲ್ಲೆಯಲ್ಲಿ ಆರ್ ಸಿಬಿ ಗೆಲವಿನ ಪತಾಕೆಯನ್ನು ಹಾರಿಸುತ್ತದೆಯೋ ಎಂಬುವುದನ್ನು ಕಾದುನೋಡಬೇಕಿದೆ.


Click it and Unblock the Notifications