ಸಿಎಂ ಸಿದ್ದರಾಮಯ್ಯ ಅವರ ಬಜೆಟ್‌ನಲ್ಲಿ ಎಲ್ಲರ ಚಿತ್ತವನ್ನು ಕದ್ದ ಕ್ಷೇತ್ರ ನೀರಾವರಿ. ಈ ಕ್ಷೇತ್ರಕ್ಕೆ ಪ್ರಸಕ್ತ ಸರ್ಕಾರ ಬರೋಬ್ಬರಿ 19,179 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿದೆ.
ಕಾವೇರಿ ಕಣಿವೆಯ ಮಹತ್ವಾಕಾಂಕ್ಷಿ ಯೋಜನೆಯಾದ ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯ ಅನುಷ್ಠಾನಕ್ಕಾಗಿ ಒಂದು ಪ್ರತ್ಯೇಕ ಯೋಜನಾ ವಿಭಾಗವನ್ನು ಹಾಗೂ 2 ಉಪ ವಿಭಾಗಗಳನ್ನು ಈಗಾಗಲೇ ಸ್ಥಾಪಿಸಲಾಗಿದೆ.

ಈ ಯೋಜನೆಯಡಿ ಮುಳುಗಡೆಯಾಗುವ ಭೂಮಿಯನ್ನು ಗುರುತಿಸುವ ಸರ್ವೆ ಹಾಗೂ ಮರಗಳ ಎಣಿಕೆ ಪ್ರಕ್ರಿಯೆಯನ್ನು ಚಾಲನೆಗೊಳಿಸಿದ್ದು ಉಳಿದ ಅಗತ್ಯ ತೀರುವಳಿಗಳನ್ನು ಸಕ್ಷಮ ಪ್ರಾಧಿಕಾರಗಳಿಂದ ಪಡೆದು ಶೀಘ್ರವಾಗಿ ಪ್ರಾರಂಭಿಸಲು ಆದ್ಯತೆ ಮೇರೆಗೆ ಕ್ರಮವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕಾವೇರಿ ನೀರಾವರಿ ನಿಗಮದಡಿ ವಿಶ್ವೇಶ್ವರಯ್ಯ ನಾಲಾ ಜಾಲದ ಹೆಬ್ಬಕವಾಡಿ, ನಿಡಘಟ್ಟ, ತುರುಗನೂರು, ಮಳವಳ್ಳಿ ತಾಲ್ಲೂಕಿನ ಮಾದವಮಂತ್ರಿ ನಾಲೆಗಳ ಹಾಗೂ ಮದ್ದೂರು ತಾಲ್ಲೂಕು ಕೆಮ್ಮಣ್ಣುನಾಲಾ ಆಧುನೀಕರಣ, ಹುಣಸೂರು ತಾಲ್ಲೂಕಿನ ಮರದೂರು, ಕನಕಪುರದ ಹೆಗ್ಗನೂರು ಕೆರೆ ತುಂಬಿಸುವ ಯೋಜನೆಗಳು, ಶ್ರೀರಂಗ ಕುಡಿಯುವ ನೀರು ಯೋಜನೆಗೆ ಪೈಪ್ಲೈನ್ ಮೂಲಕ ನೀರು ಒದಗಿಸುವ ಯೋಜನೆ, ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ನಾಲೆಗಳ ಅಭಿವೃದ್ಧಿ, ಗುಬ್ಬಿಯ ಮಠದಹಳ್ಳಿ ಕುಡಿಯುವ ನೀರು ಯೋಜನೆ, ರಾಮನಗರದ ಬಳಿ ಅರ್ಕಾವತಿ River Front Development ಯೋಜನೆಗಳನ್ನು ಅಂದಾಜು 2,000 ಕೋಟಿ ರೂ. ಮೊತ್ತದಲ್ಲಿ ಪ್ರಸಕ್ತ ಸಾಲಿನಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.
ಉತ್ತರ ಕರ್ನಾಟಕದ ಪ್ರಮುಖ ಯೋಜನೆಯಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಯೋಜನೆಯಡಿಯ ಉಪ ಯೋಜನೆಗಳನ್ನು ಪೂರ್ಣಗೊಳಿಸಲು ಹಾಗೂ ಇದರಡಿ ಭೂಸ್ವಾಧೀನ ಮತ್ತು ಪುನರ್ ವಸತಿ ಹಾಗೂ ಪುನರ್ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಯ ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರವು ತನ್ನ 2023-24ನೇ ಸಾಲಿನ ಆಯವ್ಯಯದಲ್ಲಿ 5,300 ಕೋಟಿ ರೂ. ಅನುದಾನ ಘೋಷಿಸಿಲಾಗಿತ್ತು. ಆದರೆ ಈವರೆಗೆ ಯಾವುದೇ ಅನುದಾನ ಬಿಡುಗಡೆಯಾಗಿರುವುದಿಲ್ಲ. ಈ ಯೋಜನೆಯಡಿ ರಾಜ್ಯ ಸರ್ಕಾರವು ಚಿತ್ರದುರ್ಗ ಜಿಲ್ಲೆಯ ಸುಮಾರು 75,000 ಎಕರೆ ನೀರಾವರಿ ಸಾಮರ್ಥ್ಯ ಕಲ್ಪಿಸಲು ಯೋಜಿಸಿದ್ದು, ಆಯವ್ಯಯದಲ್ಲಿ ಘೋಷಿಸಿದಂತೆ ಅನುದಾನವನ್ನು ಬಿಡುಗಡೆ ಮಾಡಿ ಯೋಜನೆಯನ್ನು ರೈತರಿಗೆ ತಲುಪಿಸಲು ಸಹಕಾರಿಯಾಗುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ತುಂಗಭದ್ರಾ ಜಲಾಶಯದಲ್ಲಿ ಹೂಳಿನ ಸಂಗ್ರಹಣೆಯಿಂದ ಉಂಟಾಗಿರುವ ನೀರು ಸಂಗ್ರಹಣೆ ಸಾಮರ್ಥ್ಯದ ಕೊರತೆ ನಿವಾರಿಸಲು ಜಲಾಶಯ ವ್ಯಾಪ್ತಿಯಲ್ಲಿನ ರೈತರ ಬಹುದಿನದ ಬೇಡಿಕೆಯಾದ ಕೊಪ್ಪಳ ಜಿಲ್ಲೆಯ ನವಲಿ ಬಳಿ ಸಮತೋಲನಾ ಜಲಾಶಯ ನಿರ್ಮಾಣ ಯೋಜನೆಯ 15,600 ಕೋಟಿ ರೂ. ಮೊತ್ತದ ವಿವರವಾದ ಯೋಜನಾ ವರದಿ ಸಿದ್ಧವಾಗಿದ್ದು, ಸದರಿ ಯೋಜನೆಯ ಅನುಷ್ಠಾನ ಸಂಬಂಧ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳೊಂದಿಗೆ ಸಮಾಲೋಚನೆ ಪ್ರಕ್ರಿಯೆ ಚಾಲನೆಗೊಳಿಸಿದ್ದು, ಯೋಜನೆ ಕಾರ್ಯಗತಗೊಳಿಸಲು ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ.
ಧಾರವಾಡದಲ್ಲಿರುವ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆಯನ್ನು ಪ್ರಸಕ್ತ ಸಾಲಿನಲ್ಲಿ Centre of Excellence in Water Management ಆಗಿ ಉನ್ನತೀಕರಿಸಲಾಗುವುದು
ಕೊಪ್ಪಳ ಜಿಲ್ಲೆಯ ಯಲಬುರ್ಗಾ-ಕುಕನೂರು ತಾಲ್ಲೂಕಿನ 38 ಕೆರೆಗಳನ್ನು ಕುಡಿಯುವ ನೀರು ಹಾಗೂ ಅಂತರ ಜಲ ಅಭಿವೃದ್ಧಿಗಾಗಿ ಕೆರೆ ತುಂಬಿಸುವ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿ 970 ಕೋಟಿ ರೂ. ಅಂದಾಜು ಮೊತ್ತದಲ್ಲಿ ಹಾಗೂ ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಪಾಮನಕಲ್ಲೂರು ಹಾಗೂ ಇತರ ಪ್ರದೇಶಗಳಿಗೆ ನಾರಾಯಣಪುರ ಬಲದಂಡೆ ಕಾಲುವೆಯಿಂದ ಅಂದಾಜು 990 ಕೋಟಿ ರೂ. ಮೊತ್ತದಲ್ಲಿ ನೀರಾವರಿ ಸೌಲಭ್ಯ ಕಲ್ಪಿಸುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಿಎಂ ಎಂದಿದ್ದಾರೆ.
ಧಾರವಾಡ ಜಿಲ್ಲೆಯಲ್ಲಿ ಬೆಣ್ಣೆಹಳ್ಳದಿಂದ ಪ್ರವಾಹ ಪೀಡಿತ ಗ್ರಾಮಗಳಿಗೆ ತಡೆಗೋಡೆ ನಿರ್ಮಾಣ ಮಾಡಲು ರಾಜ್ಯ ವಿಪತ್ತು ಉಪಶಮನ ನಿಧಿಯಿಂದ (SDMF) ಯೋಜನೆ ರೂಪಿಸಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.
More From GoodReturns

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Siddaramaiah-Narendra Modi: ಮಧ್ಯಪ್ರಾಚ್ಯ ಸಂಘರ್ಷ; ಕನ್ನಡಿಗರನ್ನು ರಕ್ಷಿಸುವಂತೆ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ!

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!



Click it and Unblock the Notifications