ದೇಶದಲ್ಲಿನ ಮಂದಗತಿಯ ಆರ್ಥಿಕತೆಯಿಂದಾಗಿ ಈ ವರ್ಷ 30 ರಿಂದ 40 ಸಾವಿರ ಮಾಹಿತಿ ತಂತ್ರಜ್ಞಾನ (ಐಟಿ) ಸೇವಾ ಕಂಪನಿಗಳಲ್ಲಿ ಉದ್ಯೋಗ ಕಡಿತವಾಗಲಿದೆ ಎಂದು ಹಿರಿಯ ಉದ್ಯಮಿ ಟಿ.ವಿ. ಮೋಹನ್‌ದಾಸ್ ಪೈ ಹೇಳಿದ್ದಾರೆ.
'ಪಾಶ್ಚಿಮಾತ್ಯ ದೇಶಗಳಲ್ಲಿ ಎಲ್ಲಾ ವಲಯಗಳಲ್ಲಿ ಕಂಡು ಬರುವಂತೆ, ಭಾರತದಲ್ಲಿಯೂ ಐಟಿ ಕಂಪನಿಯೊಂದು ಉನ್ನತ ಮಟ್ಟಕ್ಕೆ ತಲುಪಿದಾಗ ಮಧ್ಯಮ ಹಂತದಲ್ಲಿ ಕೆಲಸ ಮಾಡುವ ಸಿಬ್ಬಂದಿ ಸಂಖ್ಯೆ ಹೆಚ್ಚಿನ ಮಟ್ಟದಲ್ಲಿ ಇರುತ್ತದೆ. ಇವರು ಪಡೆಯುವ ವೇತನಕ್ಕೆ ತಕ್ಕಂತೆ ಕಂಪನಿಗೆ ವಹಿವಾಟು, ಲಾಭ ತಂದುಕೊಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಕಂಪನಿಗಳು ಅವರನ್ನು ಕೈ ಬಿಡುತ್ತವೆ.

ಕಂಪನಿಯು ಬೆಳವಣಿಗೆ ಸಾಧಿಸುತ್ತಿರುವಾಗ ಬಡ್ತಿ ನೀಡುವುದು ಸರಿ. ಆದರೆ ಮಂದಗತಿಯ ಬೆಳವಣಿಗೆ ಇರುವಾಗ ಇಂತಹ ಸಿಬ್ಬಂದಿಯನ್ನು ಕೈ ಬಿಡುವ ಪ್ರಕ್ರಿಯೆಗೆ ಕಂಪನಿಗಳು ಮುಂದಾಗುತ್ತವೆ. ಪ್ರತಿ ಐದು ವರ್ಷಕ್ಕೊಮ್ಮೆ ನಡೆಯುವ ಸಹಜ ಪ್ರಕ್ರಿಯೆ ಇದಾಗಿದೆ ಎಂದು
ಇನ್ಫೋಸಿಸ್‌ನ ಮಾಜಿ ಮುಖ್ಯ ಹಣಕಾಸು ಅಧಿಕಾರಿ ಟಿ.ವಿ. ಮೋಹನ್‌ದಾಸ್ ಪೈ ಹೇಳಿದ್ದಾರೆ.

ಈ ರೀತಿಯಾಗಿ ಉದ್ಯೋಗ ಕಳೆದುಕೊಳ್ಳುವವರಲ್ಲಿ ಯಾವುದಾದರೂ ಒಂದು ನಿರ್ದಿಷ್ಟ ವಿಷಯದಲ್ಲಿ ಪರಿಣಿತಿ ಹೊಂದಿದ್ದರೆ ಅವರಲ್ಲಿ ಶೇಕಡಾ 80ರಷ್ಟು ಮಂದಿಗೆ ಬೇರೆ ಕಡೆ ಉದ್ಯೋಗಾವಕಾಶಗಳು ದೊರೆಯುತ್ತವೆ. ಉದ್ಯೋಗಿಯೊಬ್ಬ ಉತ್ತಮ ಪ್ರದರ್ಶನ ನೀಡದೆ ಇದ್ದರೆ ಯಾರೊಬ್ಬರೂ ಗರಿಷ್ಟ ವೇತನದ ಉದ್ಯೋಗ ನೀಡುವುದಿಲ್ಲ.
ಪಡೆಯುವ ವೇತನಕ್ಕೆ ಪ್ರತಿಯಾಗಿ ಕಂಪನಿಯ ಮೌಲ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಉದ್ಯೋಗಿಗಳು ಕೆಲಸ ಮಾಡುವ ಅನಿವಾರ್ಯತೆ ಇದೆ ಎಂದು ವಾಸ್ತವಾಂಶವನ್ನು ವಿವರಿಸಿದ್ದಾರೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ



Click it and Unblock the Notifications