2019- 20ನೇ ಸಾಲಿಗೆ ಸರ್ಕಾರಿ ಅನುದಾನಿತ ಹಾಗೂ ಖಾಸಗಿ ಐಟಿಐಗಳಲ್ಲಿ ಇರುವ ಪರಿಶಿಷ್ಟ ಜಾತಿಯ ಟ್ರೇನಿಗಳಿಗೆ (ಅಂತಿಮ ವರ್ಷದ) ಉಚಿತವಾಗಿ ಲ್ಯಾಪ್ ಟಾಪ್ ವಿತರಿಸಲು ಕರ್ನಾಟಕ ಸಚಿವ ಸಂಪುಟವು ಗುರುವಾರ ಆಡಳಿತಾತ್ಮಕ ಒಪ್ಪಿಗೆ ನೀಡಿದೆ. ಇದಕ್ಕಾಗಿ 17 ಕೋಟಿ ರುಪಾಯಿ ವೆಚ್ಚ ಆಗಬಹುದು ಎಂದು ಅಂದಾಜಿಸಲಾಗಿದೆ.
5,331 ಲ್ಯಾಪ್ ಟಾಪ್ ಗಳನ್ನು 16.98 ಕೋಟಿ ರುಪಾಯಿ ವೆಚ್ಚದಲ್ಲಿ ಖರೀದಿ ಮಾಡಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ. ಮಾಧುಸ್ವಾಮಿ ಅವರು ಸಂಪುಟ ಸಭೆಯ ನಂತರ ಮಾಹಿತಿ ನೀಡಿದ್ದಾರೆ. ಇನ್ನು ಯುನೆಸ್ಕೋದಿಂದ ವಿಶ್ವ ಪಾರಂಪರಿಕ ತಾಣ ಎಂದು ಗುರುತಿಸಿರುವ ಬಾಗಲಕೋಟೆ ಜಿಲ್ಲೆಯ ಪಟ್ಟದಕಲ್ಲುವಿನಲ್ಲಿ ಟೂರಿಸ್ಟ್ ಪ್ಲಾಜಾ ನಿರ್ಮಾಣಕ್ಕೆ ಕೂಡ ಒಪ್ಪಿಗೆ ಸಿಕ್ಕಿದೆ. ಅದಕ್ಕಾಗಿ ಮೂವತ್ತು ಕೋಟಿ ರುಪಾಯಿಯಷ್ಟು ವೆಚ್ಚವಾಗಬಹುದು ಎಂಬ ಅಂದಾಜಿದೆ.

ಮಲಪ್ರಭಾ ನದಿಯ ದಂಡೆಯಲ್ಲಿ ಇಪ್ಪತ್ನಾಲ್ಕು ಎಕರೆ ವ್ಯಾಪ್ತಿಯಲ್ಲಿ ಈ ಪ್ಲಾಜಾ ತಲೆ ಎತ್ತಲಿದೆ. ಜಾಗತಿಕ ಮಟ್ಟದಲ್ಲಿ ಪಟ್ಟದಕಲ್ಲನ್ನು ಪ್ರವಾಸಿ ತಾಣವಾಗಿ ರೂಪಿಸಲು ಬೇಕಾದ ಎಲ್ಲ ಮೂಲ ಸೌಕರ್ಯ ಒದಗಿಸುವ ಉದ್ದೇಶ ಈ ಯೋಜನೆಯಲ್ಲಿ ಇದೆ ಎಂದು ಸಚಿವರು ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಐನೂರಾ ಇಪ್ಪತ್ತೈದು ಕೋಟಿ ರುಪಾಯಿ ವೆಚ್ಚದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಸೇರಿದಂತೆ ಇತರ ನಿರ್ಧಾರಗಳನ್ನು ಸಹ ತೆಗೆದುಕೊಳ್ಳಲಾಗಿದೆ.
More From GoodReturns

Weather Today: ಮುಂದಿನ ವಾರದಿಂದ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು; ಜನರೇ ಎಚ್ಚರ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ



Click it and Unblock the Notifications