For Quick Alerts
ALLOW NOTIFICATIONS  
For Daily Alerts

ಕರ್ನಾಟಕ ರಾಜ್ಯ ಬಜೆಟ್: ಕೃಷಿ ವಲಯಕ್ಕೆ 31,021 ಕೋಟಿ ರೂಪಾಯಿ ಅನುದಾನ

|

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಕೃಷಿ ವಲಯಕ್ಕೆ ಬರೋಬ್ಬರಿ 31,021 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಕೃಷಿ ವಲಯದ ಅಭಿವೃದ್ಧಿಗಾಗಿ ಹಲವಾರು ಹೊಸ ಯೋಜನೆಗಳನ್ನು ಕೈಗೊಳ್ಳಲಾಗಿದೆ.

 

ಕರ್ನಾಟಕ ರಾಜ್ಯ ಬಜೆಟ್: ಪೆಟ್ರೋಲ್, ಡೀಸೆಲ್ ಮೇಲಿನ ಸುಂಕ ಹೆಚ್ಚಳವಿಲ್ಲ!

ನೀರಾವರಿ ಮತ್ತು ಮಾರುಕಟ್ಟೆ ವ್ಯವಸ್ಥೆಗೆ ಒತ್ತು ನೀಡಲಾಗಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಕೃಷಿ ಉತ್ಪನ್ನ ಆಧಾರಿತ ಮಾರುಕಟ್ಟೆ ನಿರ್ಮಾಣಕ್ಕೆ ಯೋಜನೆಯನ್ನು ಹಮ್ಮಿಕೊಂಡಿದೆ. ಅಲ್ಲದೆ ಹಲವು ವರ್ಷಗಳಿಂದ ಹಾಗೆಯೇ ಉಳಿದಿರುವ ನೀರಾವರಿ ಯೋಜನೆಗಳ ಅನುಷ್ಠಾನವನ್ನು ಘೋಷಿಸಲಾಗಿದೆ.

ಕರ್ನಾಟಕ ರಾಜ್ಯ ಬಜೆಟ್: ಕೃಷಿ ವಲಯಕ್ಕೆ 31,021 ಕೋಟಿ ರೂಪಾಯಿ ಅನುದಾನ

ಕೃಷಿ ವಲಯಕ್ಕೆ ಈ ಬಾರಿಯ ಪ್ರಮುಖ ಯೋಜನೆಗಳು:

- ರೈತರಿಗೆ ಮಾರುಕಟ್ಟೆ ಅವಕಾಶಗಳ ವಿಸ್ತರಣೆ
- ತೋಟಗಾರಿಕಾ ಬೆಳೆಗಳ ರಫ್ತಿಗೆ ರಾಜ್ಯದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಪೂರಕ ಸೌಲಭ್ಯ
- ರಾಷ್ಟ್ರೀಯ ಇ ಮಾರುಕಟ್ಟೆ ಪ್ರೈವೇಟ್ ಇಮಿಟೆಡ್ ಮೂಲಕ ಸಾವಯವ ಮತ್ತು ಸಿರಿಧಾನ್ಯಗಳ ವೈಜ್ಞಾನಿಕ ಮಾರಾಟಕ್ಕೆ ಅವಕಾಶ
- ಸಿಂಗೇನ ಅಗ್ರಹಾರದಲ್ಲಿ ಹಣ್ಣು ಮಾರುಕಟ್ಟೆ ನಿರ್ಮಾಣ
- ಚಾಮರಾಜನಗರದಲ್ಲಿ ಅರಿಶಿನ ಮಾರುಕಟ್ಟೆ ನಿರ್ಮಾಣ
- ಬ್ಯಾಡಗಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಸುಮಾರು 4 ಕೋಟಿ ರೂಪಾಯಿ ವೆಚ್ಚದಲ್ಲಿ ಮೆಣಸಿನಕಾಯಿ ಸಂಶೋಧನಾ ಕೇಂದ್ರ ಸ್ಥಾಪನೆ
- ಉತ್ತರ ಕರ್ನಾಟಕದ 6 ಲಕ್ಷ ಹೆಕ್ಟೇರ್‌ ಭೂಮಿಗೆ ನೀರಾವರಿ ಒದಗಿಸಲು ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ಜಾರಿಗೆ ಯೋಜನೆ ಕೈಗೊಳ್ಳಲಾಗಿದೆ.
- ತುಮಕೂರು, ಚಿಕ್ಕಬಳ್ಳಾಪು, ಬೆಂಗಳೂರು ನಗರ ಕೆರೆಗಳಿಗೆ ನೀರು ಹರಿಸುವ ಯೋಜನೆಗಳು.
- ರಾಜ್ಯದ ಎಲ್ಲ ಏತ ನೀರಾವರಿ ಯೋಜನೆಗಳ ಸೂಕ್ತ ನಿರ್ವಹಣೆಗೆ ಯೋಜನೆ.
- ಏತ ನೀರಾವರಿ ಮೂಲಕ ರಾಜ್ಯದ 5 ಲಕ್ಷ ಹೆಕ್ಟೇರ್‌ ಭೂಮಿಗೆ ಹೆಚ್ಚುವರಿ ನೀರಾವರಿ ಒದಗಿಸುವ ಗುರಿ.
- ಬೇಡ್ತಿ - ವರದಾ ನದಿ ಜೋಡಣೆ ಯೋಜನೆ ಅನುಷ್ಠಾನ ಯೋಜನೆ.
- ಕೃಷಿ ಸಂಚಾಯ್ ಯೋಜನೆಗೆ 835 ಕೋಟಿ ರೂಪಾಯಿ ಅನುದಾನ
- ಸಾವಯವ ಕೃಷಿಗೆ ಉತ್ತೇಜನ ನೀಡಲು 300 ಕೋಟಿ ರೂಪಾಯಿ
- 234 ಕೆರೆಗಳನ್ನು ತುಂಬಿಸಲು 500 ಕೋಟಿ ರೂಪಾಯಿ

English summary

Karnataka budget 2021: Major Allocations, Schemes for Agriculture sector

Chief Minister B.S. Yeddyurappa has earmarked Rs 31,021 crore for agriculture sector. A number of new projects have been launched for the development of the agriculture sector in this time's budget.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X