ದ್ವಿತೀಯ ಪಿಯುಸಿ ಪರೀಕ್ಷೆ-2 (2nd PUC Exam 2 Result 2025) ಫಲಿತಾಂಶ ಇಂದು ಪ್ರಕಟವಾಗಿದೆ. ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶವನ್ನು ಬಿಡುಗಡೆ ಮಾಡಿದ್ದಾರೆ.
ಹೌದು,ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶವನ್ನು ಬಿಡುಗಡೆ ಮಾಡಿದ್ದು,ಅದರಲ್ಲಿ 4.76 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಎರಡೂ ಪರೀಕ್ಷೆಗಳಿಂದ ಉತ್ತೀರ್ಣರಾದವರ ಸಂಖ್ಯೆ 5.36 ಲಕ್ಷಕ್ಕೆ ಏರಿಕೆಯಾಗಿದೆ. ಒಟ್ಟಾರೆ ಫಲಿತಾಂಶ ಶೇ 77.96 ರಷ್ಟು ಇದೆ.

332 ಪರೀಕ್ಷಾ ಕೇಂದ್ರ
ಏ.24ರಿಂದ ಮೇ 8ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2ಯನನ್ನು ಒಟ್ಟು 332 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಈ ಪರೀಕ್ಷೆಗೆ 1,94,077 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. 1,53,620 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಆದರೆ ಕೇವಲ 60,692 ಮಂದಿ ಉತ್ತೀರ್ಣರಾಗಿದ್ದು, ಶೇ.31.27 ಫಲಿತಾಂಶ ಹೊರ ಬಿದ್ದಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿಯನ್ನು ತಿಳಿಸಿದ್ದಾರೆ.
ದ್ವಿತೀಯ ಪಿಯು ಪರೀಕ್ಷೆ-1ರಲ್ಲಿ1.70 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿದ್ದರು. ಇವರಲ್ಲಿ 1.57 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ-2ಕ್ಕೆ ನೋಂದಾಯಿಸಿಕೊಂಡಿದ್ದಾರೆ.ಸರ್ಕಾರವು ಪರೀಕ್ಷಾ ಶುಲ್ಕವಿಲ್ಲದೆ ನೋಂದಾಯಿಸಲು ಅವಕಾಶ ನೀಡಿದ್ದರಿಂದ ಶೇ.92.4ವಿದ್ಯಾರ್ಥಿಗಳು ಪರೀಕ್ಷೆ-2 ಗೆ ಹಾಜರಾಗಿದ್ದಾರೆ. ಇನ್ನೂ 70,000 ವಿದ್ಯಾರ್ಥಿಗಳು ತಮ್ಮ ಅಂಕಗಳನ್ನು ಹೆಚ್ಚಿಸಿಕೊಳ್ಳಲು ಪರೀಕ್ಷೆ ಬರೆದಿದ್ದರು.
ವಿವಿಧ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ನಡೆದಿದ್ದ ಸಿಇಟಿ ಪರೀಕ್ಷೆಯ ಅಭ್ಯರ್ಥಿಗಳಿಗೆ ಅನುಕೂಲ ಮಾಡಿಕೊಡಲು ಸಿಇಟಿ ಫಲಿತಾಂಶಕ್ಕೂ ಮೊದಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶವನ್ನು ಪ್ರಕಟ ಮಾಡಿದೆ.
ದ್ವಿತೀಯ ಪಿಯು ಫಲಿತಾಂಶ ಎಲ್ಲಿ ಲಭ್ಯ..?
ದ್ವಿತೀಯ ಪಿಯು ಫಲಿತಾಂಶ-2ರ ಫಲಿತಾಂಶ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿಯೂ ಸಿಗುತ್ತದೆ. ನೀವು ಇಲ್ಲಿ ಫಲಿತಾಂಶವನ್ನು ವೀಕ್ಷಣೆ ಮಾಡಬಹುದು. karresults.nic.in ಅಥವಾ kseab.karnataka.gov.in ಲಿಂಕ್ ಮೂಲಕ ನೀವು ನಿಮ್ಮ ಫಲಿತಾಂಶವನ್ನು ವೀಕ್ಷಣೆ ಮಾಡಬಹುದು.
ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ನೋಡುವುದು ಹೇಗೆ..?
- ನೀವು ಮೋದಲು ಅಧಿಕೃತ ವೆಬ್‌ಸೈಟ್ ಆದ https://karresults.nic.in/ ಅಥವಾ kseab.karnataka.gov.in ಗೆ ಭೇಟಿ ನೀಡಬೇಕು.
- ತದನಂತರ ಹೋಂ ಪೇಜ್ನಲ್ಲಿ, Second PU Results 2025 ಲಿಂಕ್ ಅನ್ನು ಕ್ಲಿಕ್ ಮಾಡಿ.
- ರಿಜಿಸ್ಟ್ರೇಷನ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಪಾಸ್‌ವರ್ಡ್ ಆಯ್ಕೆಮಾಡಿ.
- ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ 2025 ಎಂಬುದು ಪರೆದೆಯ ಮೇಲೆ ಕಾಣಿಸುತ್ತದೆ. ಅಲ್ಲಿ ನೀವು ಫಲಿತಾಂಶವನ್ನು ನೋಡಬಹುದು.ನಂತರ ಅದನ್ನು ಡೌನ್ಲೋಡ್ ಅಥವಾ ಪ್ರಿಂಟ್ ಔಟ್ ತಗೆದುಕೊಳ್ಳಬಹುದು.
ಹೀಗೆ ನೀವು ಈ ಕಮೇಲಿನ ಹಂತಗಳನ್ನು ಅನುಸರಿಸುವ ಮೂಲಕ ಫಲಿತಾಂಶವನ್ನು ನೋಡಬಹುದು.
ದ್ವಿತೀಯ ಪಿಯು ಪರೀಕ್ಷೆ-3 ಯಾವಾಗ?
ಮುಂದಿನ ತಿಂಗಳು (ಜೂನ್) 9 ರಿಂದ 20ರವರೆಗೆ ದ್ವಿತೀಯ ಪಿಯು ಪರೀಕ್ಷೆ-3 ನಡೆಯಲಿದೆ. ಈ ಪರೀಕ್ಷೆಯನ್ನು ಬರೆಯುವರಿಗೆ ಯಾವುದೇ ಶುಲ್ಕ ಕೂಡ ಇರುವುದಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಮಾಹಿತಿಯನ್ನು ತಿಳಿಸಿದೆ.
ಪಿಯುಸಿ ಪರೀಕ್ಷೆ-2 ಭದ್ರತೆಗಾಗಿ ಕಟ್ಟುನಿಟ್ಟಿನ ಕ್ರಮ
ದ್ವಿತೀಯ ಪಿಯುಸಿ ಪರೀಕ್ಷೆ-2 ಅನ್ನು ಯಶಸ್ವಿಯಾಗಿ ಮತ್ತು ಯಾವುದೇ ಅಹಿತಕರ ಘಟನೆಗಳಿಲ್ಲದೇ ನಡೆಸುವ ಉದ್ದೇಶದಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಾಕಷ್ಟು ಭದ್ರತಾ ಕ್ರಮಗಳನ್ನು ಕೈಗೊಂಡಿತ್ತು. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಕ್ರಮ ನಡೆಯದಂತೆ ಸಶಸ್ತ್ರ ಪೊಲೀಸ್ ರಕ್ಷಣೆಯನ್ನು ಒದಗಿಸಲಾಗಿದೆ. ಪ್ರಶ್ನೆಪತ್ರಿಕೆ ವಿತರಣೆ ಸಂದರ್ಭದಲ್ಲಿ ಕೂಡ ಪೋಲೀಸ್ ಸಿಬ್ಬಂದಿಯನ್ನು ಪ್ರಶ್ನೆಪತ್ರಿಕೆ ವಿತರಕರ ತಂಡಗಳೊಂದಿಗೆ ನಿಯೋಜನೆಗಳನ್ನು ಮಾಡಲಾಗಿತ್ತು.
ಪರೀಕ್ಷಾ ದಿನಗಳಂದು ವಿದ್ಯಾರ್ಥಿಗಳ ಹಾಜರಾತಿಯನ್ನು ಆನ್‌ಲೈನ್ ಲಾಗಿನ್ ಪೋರ್ಟಲ್ ಮೂಲಕ ದಾಖಲಿಸಲಾಗುತ್ತಿದೆ. ಈ ಮೂಲಕ ಡಿಜಿಟಲ್ ಪದ್ದತಿಯನ್ನು ಅಳವಡಿಸಿಕೊಂಡಿತ್ತು. ಅಷ್ಟೇ ಅಲ್ಲದೆ, ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಈ ದೃಶ್ಯಗಳನ್ನು ವೀಕ್ಷಿಸಲು ಸ್ಪೆಷಲ್ ವೆಬ್ ಕಾಸ್ಟಿಂಗ್ ತಂಡಗಳನ್ನು ರಚಿನೆ ಮಾಡಿ ಕಟ್ಟು ನಿಟ್ಟಾಗಿ ಪರೀಕ್ಷೆಯನ್ನು ಶಿಕ್ಷಣ ಇಲಾಖೆ ಮಾಡಿತ್ತು.


Click it and Unblock the Notifications