PUC Exam 2025 Result: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಇಂದು
ಮಧ್ಯಾಹ್ನ 12:30 ಕ್ಕೆ ಪತ್ರಿಕಾಗೋಷ್ಠಿಯಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ 2025 ಅನ್ನು ಅಧಿಕೃತವಾಗಿ ಘೋಷಿಸಿದೆ. ವಿದ್ಯಾರ್ಥಿಗಳು ಈಗ ತಮ್ಮ ಫಲಿತಾಂಶಗಳನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು. ಹಾಗಿದ್ರೆ ಯಾವ ವೆಬ್ ಸೈಟ್‌ನಲ್ಲಿ ವಿದ್ಯಾರ್ಥಿಗಳು ಫಲಿತಾಂಶವನ್ನು ನೋಡಬಹುದು ಎಂಬ ಹೆಚ್ಚಿನ ವಿವರ ಇಲ್ಲಿದೆ ನೋಡಿ.
2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 73.45 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ.

ಕಳೆದ ಮಾರ್ಚ್ 1 ರಿಂದ ಮಾರ್ಚ್ 20ರ ವರೆಗೆ ನಡೆದಿದ್ದ ಪರೀಕ್ಷೆಯಲ್ಲಿ ರಾಜ್ಯದ 7.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.ಇಂದು ಫಲಿತಾಂಶ ಪ್ರಕಟಗೊಂಡಿದ್ದು,ವಿದ್ಯಾರ್ಥಿಗಳು ತಮ್ಮ ಪಿಯುಸಿ ಫಲಿತಾಂಶ ನೋಡಲು ಕಾತುರರಾಗಿದ್ದಾರೆ. ಇಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ (Minister of Primary and Secondary Education Madhu)ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ್ದಾರೆ.
ದ್ವಿತೀಯ ಪಿಯುಸಿ ಫಲಿತಾಂಶ ಯಾವ ಸೈಟ್ ಗಳಲ್ಲಿ ಲಭ್ಯ?
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು karresults.nic.in, kseab.karnataka.gov.in e digilocker mobile application digilocker.gov.in ಈ ಅಧಿಕೃತ ವೆಬ್ ಸೈಟ್ ಮೂಲಕ ತಮ್ಮ ಫಲಿತಾಂಶವನ್ನು ವೀಕ್ಷಣೆ ಮಾಡಬಹುದು.
ದ್ವಿತೀಯ ಪಿಯುಸಿ ಫಲಿತಾಂಶ ನೋಡುವುದು ಹೇಗೆ?
* ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in ಅಥವಾ kseab.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಿ.
* ಮೈನ್ ಪೇಜ್‌ನಲ್ಲಿ 2nd PUC Result 2025 ಎಂಬಲ್ಲಿ ಕ್ಲಿಕ್ ಮಾಡಬೇಕು.
* ಆಗ ಒಂದು ಲಿಂಕ್ ಓಪನ್ ಆಗುತ್ತದೆ.
* ಬಳಿಕ ಲಾಗಿನ್ ವಿವರಗಳನ್ನು ನಮೂದಿಸಿ - ನೋಂದಣಿ ಸಂಖ್ಯೆ (ರಿಜಿಸ್ಟ್ರೇಷನ್ ನಂಬರ್), ಜನ್ಮ ದಿನಾಂಕ ಮತ್ತು ಕ್ಯಾಪ್ಯಾ ಕೋಡ್ (ಪಾಸ್‌ವರ್ಡ್)
* ನಂತರ * Second PU Results 2025 ಎಂಬುದು ಸ್ಕ್ರೀನ್ನಲ್ಲಿ ಕಾಣಿಸುತ್ತದೆ.
* ಆಗ ಸಬ್ಸಿಟ್ ಕೊಟ್ಟು ಫಲಿತಾಂಶ ಪರಿಶೀಲಿಸಿ.
* ಈ ಪುಟದಲ್ಲಿ ನಿಮ್ಮ ಫಲಿತಾಂಶ ಕಾಣುತ್ತದೆ. ಈ ಪುಟವನ್ನು ಡೌನ್‌ಲೋಡ್ ಮಾಡಿಟ್ಟುಕೊಳ್ಳಿ. ಅಂಕಪಟ್ಟಿ ತಡವಾಗಿ ಸಿಗುವುದರಿಂದ ಇದನ್ನು ಪ್ರಿಂಟ್ ಮಾಡಿಟ್ಟುಕೊಳ್ಳಿ. ಇದು ನಿಮಗೆ ಭವಿಷ್ಯದಲ್ಲಿ ಬೇಕಾಗಬಹುದು.
* ಕರ್ನಾಟಕ ದ್ವಿತೀಯ ಪಿಯುಸಿ ಅಂಕಪಟ್ಟಿಯಲ್ಲಿ ಅಭ್ಯರ್ಥಿಯ (ವಿದ್ಯಾರ್ಥಿ) ಹೆಸರು, ರೋಲ್ ನಂಬರ್, ಒಟ್ಟು ಅಂಕಗಳು, ವಿಷಯವಾರು ಅಂಕಗಳು ಹಾಗೂ ಫಲಿತಾಂಶ ಇರುತ್ತದೆ.
ಮಾ.1ರಿಂದ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ
ರಾಜ್ಯದಲ್ಲಿ ಮಾ.1ರಿಂದ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಗೆ ಒಟ್ಟು 7,13,862 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಒಟ್ಟು 1171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 6,61,474 ಹೊಸ ವಿದ್ಯಾರ್ಥಿಗಳು, 34,071 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 18,317 ಖಾಸಗಿ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು.
2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದೆ. 93.90 ಶೇಕಡಾ ಫಲಿತಾಂಶ ಪಡೆದು ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡರೆ, ದಕ್ಷಿಣ ಕನ್ನಡ ಜಿಲ್ಲೆ 93.57 ಶೇಕಡಾ ಫಲಿತಾಂಶದ ಮೂಲಕ ರಾಜ್ಯದಲ್ಲೇ ಎರಡನೇ ಸ್ಥಾನದಲ್ಲಿದೆ.
ಯಾದಗಿರಿ ಜಿಲ್ಲೆ 48.45 ಶೇಕಡಾ ಫಲಿತಾಂಶದ ಮೂಲಕ ರಾಜ್ಯಕ್ಕೆ ಕೊನೆಯ ಸ್ಥಾನ ಪಡೆದುಕೊಂಡಿದೆ. ಟಾಪ್ 10 ಸ್ಥಾನಗಳಲ್ಲಿ, ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ದಕ್ಷಿಣ, ಕೊಡಗು, ಬೆಂಗಳೂರು ಉತ್ತರ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ ಪಡೆದುಕೊಂಡಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ



Click it and Unblock the Notifications