ದ್ವಿತೀಯ ಪಿಯು ವಿದ್ಯಾರ್ಥಿಗಳ ಕಾಯುವಿಕೆ ಮುಗಿಯಿತು. ಬಹುನಿರೀಕ್ಷಿತ ದ್ವಿತೀಯ ಪಿಯು ಫಲಿತಾಂಶ (Karnataka 2nd PUC Exam 2025 Result ) ಪ್ರಕಟಕ್ಕೆ ಕ್ಷಣಗಣನೆ ಶುರು.
ಹೌದು, ಇಂದು 2025ರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ (2nd PUC Exam Result) ಪ್ರಕಟವಾಗಲಿದೆ. ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾಯುತ್ತಿರುವ ವಿದ್ಯಾರ್ಥಿಗಳು (PUC Students) ಮತ್ತು ಫೋಷಕರ ಚಿತ್ತ ಇಂದು ನಡೆಯುವ ಸುದ್ದಿಗೋಷ್ಠಿಯತ್ತ ನೆಟ್ಟಿದೆ. ನೀವು ಆನ್ಲೈನ್ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಬನ್ನಿ, ಪಿಯುಸಿ ಫಲಿತಾಂಶ ವೀಕ್ಷಣೆ ಹೇಗೆ? ವೆಬ್ ಸೈಟ್‌ನಲ್ಲಿ ಫಲಿತಾಂಶ ನೋಡಬೇಕು? ಎನ್ನುವುದು ತಿಳಿಯೋಣ.

ಕಳೆದ ಮಾರ್ಚ್ ತಿಂಗಳಲ್ಲಿ ದ್ವಿತೀಯ ಪಿಯುಸಿ-1 ಪರೀಕ್ಷೆ ನಡೆದಿತ್ತು. ಈ ಬಾರಿ ಮಾರ್ಚ್ 1 ರಿಂದ ಮಾರ್ಚ್ 20ರ ವರೆಗೆ ಪರೀಕ್ಷೆ ನಡೆದಿತ್ತು. ರಾಜ್ಯದ 7.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದೀಗ ನಾಳೆ (ಏಪ್ರಿಲ್ 8 ರಂದು) ಈ ಪರೀಕ್ಷೆಯ ಫಲಿತಾಂಶ (2nd PUC Exam Result) ಪ್ರಕಟವಾಗಲಿದೆ. ನಾಳೆ ಮಧ್ಯಾಹ್ನ 12.30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿಲಿದ್ದು, ಇದೇ ಸಮಯದಲ್ಲಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ. ಪತ್ರಿಕಾಗೋಷ್ಠಿ ನಂತರ ಮಧ್ಯಾಹ್ನ 1.30ಕ್ಕೆ ಇಲಾಖೆ ವೆಬ್ ಸೈಟ್‌ನಲ್ಲಿ ಅಧಿಕೃತವಾಗಿ ರಿಸಲ್ಟ್ ಲಭ್ಯವಾಗಲಿದೆ.
ವೆಬ್ ಸೈಟ್‌ನಲ್ಲಿ ಫಲಿತಾಂಶ ನೋಡಬೇಕು?
ಸಚಿವ ಮಧುಬಂಗಾರಪ್ಪ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪತ್ರಿಕಾಗೋಷ್ಠಿಯಲ್ಲಿ ರಾಜ್ಯದ ಒಟ್ಟಾರೆ ಫಲಿತಾಂಶ ಪ್ರಕಟಿಸಲಿದ್ದಾರೆ. ಆ ಬಳಿಕ ಅಂದರೆ 1.30ಕ್ಕೆ ಆನ್ಲೈನ್ ಮೂಲಕವೂ ಫಲಿತಾಂಶ ವೀಕ್ಷಿಸಬಹುದಾಗಿದೆ. ಜೊತೆಗೆ ಅಂಕಪಟ್ಟಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಇನ್ನು ವೀಕ್ಷಣೆ ಮಾಡುವುದು ಹೇಗೆ ಎನ್ನುವುದು ಈ ಕೆಳಗಿನಂತಿದೆ ನೋಡಿ.
ಫಲಿತಾಂಶ ಲಭ್ಯವಾಗೋ ವೆಬ್ ಸೈಟ್‌ಗಳು ಹೀಗಿವೆ. ರಾಜ್ಯ ಸರ್ಕಾರದ ಈ ಎರಡು ಅಧಿಕೃತ ವೆಬ್ ಸೈಟ್ಗಳಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಲಭ್ಯವಿರಲಿದೆ.
karresults.nic.in
kseab.karnataka.gov.in
ದ್ವಿತೀಯ ಪಿಯುಸಿ ಫಲಿತಾಂಶ ನೋಡುವುದು ಹೇಗೆ?
- ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in ಅಥವಾ kseab.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಿ.
- ಮೈನ್ ಪೇಜ್‌ನಲ್ಲಿ 2nd PUC Result 2025 ಎಂಬಲ್ಲಿ ಕ್ಲಿಕ್ ಮಾಡಬೇಕು.
- ಆಗ ಒಂದು ಲಿಂಕ್ ಓಪನ್ ಆಗುತ್ತದೆ.
- ಬಳಿಕ ಲಾಗಿನ್ ವಿವರಗಳನ್ನು ನಮೂದಿಸಿ - ನೋಂದಣಿ ಸಂಖ್ಯೆ (ರಿಜಿಸ್ಟ್ರೇಷನ್ ನಂಬರ್), ಜನ್ಮ ದಿನಾಂಕ ಮತ್ತು ಕ್ಯಾಪ್ಯಾ ಕೋಡ್ (ಪಾಸ್‌ವರ್ಡ್)
- ನಂತರ Second PU Results 2025 ಎಂಬುದು ಸ್ಕ್ರೀನ್ನಲ್ಲಿ ಕಾಣಿಸುತ್ತದೆ.
- ಆಗ ಸಬ್ಸಿಟ್ ಕೊಟ್ಟು ಫಲಿತಾಂಶ ಪರಿಶೀಲಿಸಿ.
- ಈ ಪುಟದಲ್ಲಿ ನಿಮ್ಮ ಫಲಿತಾಂಶ ಕಾಣುತ್ತದೆ. ಈ ಪುಟವನ್ನು ಡೌನ್‌ಲೋಡ್ ಮಾಡಿಟ್ಟುಕೊಳ್ಳಿ. ಅಂಕಪಟ್ಟಿ ತಡವಾಗಿ ಸಿಗುವುದರಿಂದ ಇದನ್ನು ಪ್ರಿಂಟ್ ಮಾಡಿಟ್ಟುಕೊಳ್ಳಿ. ಇದು ನಿಮಗೆ ಭವಿಷ್ಯದಲ್ಲಿ ಬೇಕಾಗಬಹುದು.
- ಕರ್ನಾಟಕ ದ್ವಿತೀಯ ಪಿಯುಸಿ ಅಂಕಪಟ್ಟಿಯಲ್ಲಿ ಅಭ್ಯರ್ಥಿಯ (ವಿದ್ಯಾರ್ಥಿ) ಹೆಸರು, ರೋಲ್ ನಂಬರ್, ಒಟ್ಟು ಅಂಕಗಳು, ವಿಷಯವಾರು ಅಂಕಗಳು ಹಾಗೂ ಫಲಿತಾಂಶ ಇರುತ್ತದೆ.
ಮಾ.1ರಿಂದ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ
ರಾಜ್ಯದಲ್ಲಿ ಮಾ.1ರಿಂದ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಗೆ ಒಟ್ಟು 7,13,862 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಒಟ್ಟು 1171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 6,61,474 ಹೊಸ ವಿದ್ಯಾರ್ಥಿಗಳು, 34,071 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 18,317 ಖಾಸಗಿ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು.
ದ್ವಿತೀಯ ಪಿಯುಸಿ ಪರೀಕ್ಷೆ ಯಾವಾಗ ಆರಂಭವಾಗಿತ್ತು?
ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 1ರಂದು ಆರಂಭವಾಗಿ ಮಾರ್ಚ್ 20ವರೆಗೆ ನಡೆದಿತ್ತು. ಎಲ್ಲಾ ಪರೀಕ್ಷಾ ದಿನಗಳಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 1ರ ವರೆಗೆ ಪರೀಕ್ಷೆಗಳು ನಡೆದಿದ್ದವು.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications