ಇನ್ವೆಸ್ಟ್ ಕರ್ನಾಟಕಕ್ಕೆ ಸಿಕ್ತು ಬಹುದೊಡ್ಡ ಯಶಸ್ಸು; ರಾಜ್ಯಕ್ಕೆ ಹರಿದುಬಂತು ₹ 10.27 ಲಕ್ಷ ಕೋಟಿ ಬಂಡವಾಳ

ಇನ್ವೆಸ್ಟ್ ಕರ್ನಾಟಕ-2025, ಜಾಗತಿಕ ಹೂಡಿಕೆದಾರರ ಸಮಾವೇಶವು ಯಶಸ್ವಿಯಾಗಿ ಮುಕ್ತಾಯಗೊಂಡಿದೆ. "ಪ್ರಗತಿಯ ಮರುಕಲ್ಪನೆ, ಭವಿಷ್ಯದ ಕರ್ನಾಟಕ ಕಟ್ಟುವ ಸಂಕಲ್ಪ" ಎಂಬ ಘೋಷಣೆಯೊಂದಿಗೆ ನಡೆದ ಈ ಸಮಾವೇಶವು ದೇಶದ ಅಭಿವೃದ್ಧಿಗೆ ಹೊಸ ದಿಕ್ಸೂಚಿಯನ್ನು ನೀಡಿದೆ. ಮೂರು ದಿನಗಳ ಕಾಲ ನಡೆದ ಈ ಬೃಹತ್ ಹೂಡಿಕೆ ಜಾತ್ರೆಯಲ್ಲಿ ಲಕ್ಷಾಂತರ ಕೋಟಿ ರೂಪಾಯಿ ಬಂಡವಾಳ ಹರಿದು ಬಂದಿದೆ. ಇದು ಕರ್ನಾಟಕದ ಆರ್ಥಿಕತೆಗೆ ಒಂದು ದೊಡ್ಡ ಉತ್ತೇಜನವನ್ನು ನೀಡಲಿದೆ.

ಈ ಸಮಾವೇಶವು ಕರ್ನಾಟಕದ ಭವಿಷ್ಯದ ಅಭಿವೃದ್ಧಿಗೆ ಒಂದು ಮಹತ್ವದ ವೇದಿಕೆಯನ್ನು ಕಲ್ಪಿಸಿಕೊಟ್ಟಿದೆ. ಜಾಗತಿಕ ಹೂಡಿಕೆದಾರರು ಕರ್ನಾಟಕದಲ್ಲಿ ಬಂಡವಾಳ ಹೂಡಲು ಮುಂದೆ ಬಂದಿರುವುದು ರಾಜ್ಯದ ಆರ್ಥಿಕತೆಗೆ ಒಂದು ಸಕಾರಾತ್ಮಕ ಬೆಳವಣಿಗೆಯಾಗಿದೆ. ಈ ಹೂಡಿಕೆಗಳು ರಾಜ್ಯದಲ್ಲಿ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ, ಮೂಲಸೌಕರ್ಯ ಅಭಿವೃದ್ಧಿಗೆ ಸಹಕಾರಿಯಾಗಲಿವೆ.

“ಇನ್ವೆಸ್ಟ್ ಕರ್ನಾಟಕ 2025” : ₹ 10.27 ಲಕ್ಷ ಕೋಟಿ ಬಂಡವಾಳ ಹೂಡಿಕೆ

ಇನ್ವೆಸ್ಟ್ ಕರ್ನಾಟಕ 2025: ₹ 10.27 ಲಕ್ಷ ಕೋಟಿ ಬಂಡವಾಳ ಹೂಡಿಕೆ

"ಇನ್ವೆಸ್ಟ್ ಕರ್ನಾಟಕ 2025" ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶದಿಂದ ರಾಜ್ಯಕ್ಕೆ ₹ 10.27 ಲಕ್ಷ ಕೋಟಿ ಬಂಡವಾಳ ಹರಿದುಬಂದಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಅವರ ಜತೆ ಜಂಟಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ

ಇನ್ವೆಸ್ಟ್ ಕರ್ನಾಟಕ-2025 ಸಮಾವೇಶದಿಂದ ರಾಜ್ಯಕ್ಕೆ ₹ 10 ಲಕ್ಷ ಕೋಟಿ ಬಂಡವಾಳ ಹರಿದುಬರುವ ನಿರೀಕ್ಷೆ ಇತ್ತು. ಅದಕ್ಕೂ ಮೀರಿ ಬಂಡವಾಳ ಹರಿದುಬಂದಿದ್ದು, ₹ 4.30 ಲಕ್ಷ ಕೋಟಿಯಷ್ಟು ಬಂಡವಾಳ ಹೂಡಿಕೆ ಅಂತಿಮವಾಗಿದ್ದು, ₹ 6.23 ಲಕ್ಷ ಕೋಟಿಯಷ್ಟು ಬಂಡವಾಳ ಹೂಡಿಕೆಯಷ್ಟು ಒಡಂಬಡಿಕೆಯಾಗಿದೆ. ಈ ಉದ್ಯಮಿಗಳಿಗೆ ಅಗತ್ಯವಿರುವ ಸಹಕಾರವನ್ನು ನಮ್ಮ ಸರ್ಕಾರ ನೀಡಲಿದೆ" ಎಂದು ತಿಳಿಸಿದ್ದಾರೆ.

"ಕರ್ನಾಟಕ ಇತಿಹಾಸ ದೇಶಕ್ಕೆ ಮಾದರಿ. 2000ನೇ ಇಸವಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಮೊದಲ ಬಾರಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ದೇಶದ ಮೊದಲ ಬಂಡವಾಳ ಹೂಡಿಕೆದಾರರ ಸಮಾವೇಶ ಮಾಡಿದೆವು. ಇನ್ಫೋಸಿಸ್ ನಾರಾಯಣಮೂರ್ತಿ ಅವರು ಇದನ್ನು ಉದ್ಘಾಟಿಸಿದ್ದರು. ನಂತರ ನಿರಂತರವಾಗಿ 2-3 ವರ್ಷ ಈ ಸಮಾವೇಶ ಮಾಡಿದ್ದೆವು. ಇದುವರೆಗೂ ಮಾಡಿರುವ ಸಮಾವೇಶಗಳ ಪೈಕಿ ಕೆಲವು ಯಶಸ್ವಿವಾದರೆ, ಮತ್ತೆ ಕೆಲವು ವಿಫಲವಾಗಿವೆ. ಅನೇಕ ರಾಷ್ಟ್ರಗಳ ರಾಜಕೀಯ ಹಾಗೂ ಕೈಗಾರಿಕಾ ನಾಯಕರು ಈ ಸಮಾವೇಶಕ್ಕೆ ಬಂದಿದ್ದಾರೆ. ಎಲ್ಲರೂ ಕರ್ನಾಟಕ ರಾಜ್ಯದಲ್ಲಿರುವ ವಾತಾವರಣ, ಏಕಗವಾಕ್ಷಿ ವ್ಯವಸ್ಥೆ, ಪರಿಸರ, ಮಾನವ ಸಂಪನ್ಮೂಲ, ಪ್ರತಿಭೆ, ಜ್ಞಾನ, ಆರೋಗ್ಯ ಸೌಲಭ್ಯ, ಶಿಕ್ಷಣ ಎಲ್ಲವೂ ದೇಶದ ಬೇರೆ ಯಾವುದೇ ರಾಜ್ಯದಲ್ಲಿ ಇಲ್ಲ ಎಂಬುದನ್ನು ಅರಿತಿದ್ದಾರೆ" ಎಂದರು.

"ಬೆಂಗಳೂರಿನ ಜನಸಂಖ್ಯೆ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ ನಮ್ಮ ನೂತನ ಕೈಗಾರಿಕಾ ನೀತಿ ರೂಪಿಸಲಾಗಿದೆ. ಬೆಂಗಳೂರಿನ ಜನಸಂಖ್ಯೆ 1.40 ಕೋಟಿಗೆ ಏರಿಕೆಯಾಗಿದ್ದು, ವಾಹನಗಳ ಸಂಖ್ಯೆ 1.10 ಕೋಟಿಯಷ್ಟಾಗಿದೆ. ಇದನ್ನು ನಿಯಂತ್ರಿಣ ಮಾಡುವ ಉದ್ದೇಶದಿಂದ ಎಂ.ಬಿ ಪಾಟೀಲ್ ಹಾಗೂ ಅವರ ತಂಡ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ಕೈಗಾರಿಕೆಗಳನ್ನು ಬೆಂಗಳೂರಿನ ಹೊರಗೆ ಸ್ಥಾಪಿಸಲು ಪ್ರೋತ್ಸಾಹ ನೀಡಲು ಮುಂದಾಗಿದ್ದೇವೆ. ಬೇರೆ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಭೂಮಿಯ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ಬೆಂಗಳೂರಿನ ಹೊರಗೆ ಉದ್ಯಮ ಆರಂಭಿಸಲು ಸುಮಾರು ಶೇ.75ರಷ್ಟು ಉದ್ಯಮಿಗಳು, ತಂತ್ರಜ್ಞರು ಒಪ್ಪಿದ್ದಾರೆ" ಎಂದು ತಿಳಿಸಿದರು.

"ನಂಜುಡಪ್ಪ ವರದಿ ಆಧಾರದ ಮೇಲೆ ಬಂಡವಾಳ ಹೂಡಿಕೆಯಲ್ಲಿ ಪ್ರೋತ್ಸಾಹ ಧನ, ಕಾರ್ಯಕ್ಷಮತೆ ಆಧಾರದ ಮೇಲೂ ಆರ್ಥಿಕ ನೆರವು ನೀಡಲು ಮುಂದಾಗಿದ್ದೇವೆ. ಜತೆಗೆ ಅವರಿಗೆ ಭೂಮಿ ಒದಗಿಸಲು ಮುಂದಾಗಿದ್ದೇವೆ. ಇನ್ನು ಮಹಿಳೆಯರಿಗೆ ಆದ್ಯತೆ ನೀಡಲು ಶೇ.5ರಷ್ಟು ಪ್ರೋತ್ಸಾಹ ನೀಡಲಾಗುತ್ತಿದೆ. ಇನ್ನು ಹಸಿರು ಇಂಧನ ಮೂಲಕ ಸಂಸ್ಥೆ ರೂಪಿಸುವವರಿಗೆ ಶೇ.5ರಷ್ಟು ಪ್ರೋತ್ಸಾಹ ಧನ ನೀಡಲು ತೀರ್ಮಾನಿಸಲಾಗಿದೆ. ವಿದ್ಯುತ್ ಚಾಲಿತ ವಾಹನಕ್ಕಾಗಿ ಸ್ವಚ್ಛ ಸಂಚಾರ ನೀತಿ ಬಿಡುಗಡೆ ಮಾಡಿದ್ದೇವೆ. ಪ್ರವಾಸೋದ್ಯಮ ನೀತಿ ಮೂಲಕ ಒತ್ತು ನೀಡಿದ್ದೇವೆ. ಐಟಿ ಬಿಟಿ ಕ್ಷೇತ್ರದಲ್ಲಿ ಸೆಮಿಕಂಡಕ್ಟರ್ ಉದ್ಯಮ ಸ್ಥಾಪಿಸಲು ಮುಂದೆ ಬಂದಿದ್ದಾರೆ. ಫಾಕ್ಸ್ ಕಾನ್ ಸಂಸ್ಥೆಯವರು ದೊಡ್ಡಬಳ್ಳಾಪುರದ ಬಳಿ ತಮ್ಮ ಕಂಪನಿ ಆರಂಭಿಸಲಿದ್ದು, 40 ಸಾವಿರ ಜನರಿಗೆ ಉದ್ಯೋಗ ನೀಡಲಿದ್ದಾರೆ" ಎಂದು ಹೇಳಿದರು.

"ಏರ್ ಶೋಗೆ ಆಗಮಿಸಿದ್ದ ಅನೇಕ ಉದ್ಯಮಿಗಳು ಈ ಸಮಾವೇಶಕ್ಕೂ ಆಗಮಿಸಿದ್ದರು. ನಮ್ಮಲ್ಲಿ ದೊಡ್ಡ ವಿಮಾನಗಳನ್ನು ತಯಾರು ಮಾಡದಿದ್ದರೂ ಶೇ.50ರಷ್ಟು ಬಿಡಿಭಾಗಗಳ ಉತ್ಪಾದನೆ ಮಾಡುವ ಸಾಮರ್ಥ್ಯ ಇದೆ. ದೇಶದ ಏರೋಸ್ಪೇಸ್ ಹಾಗೂ ರಕ್ಷಣಾ ವಿಭಾಗಕ್ಕೆ ನೀಡುವ ಉತ್ಪಾದನೆಯಲ್ಲಿ ಕರ್ನಾಟಕ ರಾಜ್ಯದ ಕೊಡುಗೆ ಶೇ.65ರಷ್ಟಿದೆ. ಸಮಾವೇಶದಲ್ಲಿ ಭಾಗವಹಿಸಿದ್ದ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಪಿಯೂಶ್ ಗೋಯೆಲ್ ಅವರು ಕರ್ನಾಟಕ ರಾಜ್ಯದ ಸಂಸ್ಕೃತಿ, ಮಾನವ ಸಂಪನ್ಮೂಲ, ಜ್ಞಾನಕ್ಕೆ ಸರಿಸಮನಾದ ಮತ್ತೊಂದು ರಾಜ್ಯ ಮತ್ತೊಂದಿಲ್ಲ ಎಂದು ಅವರೇ ಒಪ್ಪಿದ್ದಾರೆ" ಎಂದು ತಿಳಿಸಿದರು.

"ನಮ್ಮ ಪರಂಪರೆಯಿಂದ ನಾವು ಈ ಸಾಧನೆ ಮಾಡಿದ್ದೇವೆ. ನೆಹರೂ ಅವರ ಕಾಲದಲ್ಲಿ ಹಾಕಿದ ಅಡಿಪಾಯವನ್ನು ನಾವು ಮುಂದುವರಿಸಿಕೊಂಡು ಹೋಗುತ್ತಿದ್ದೇವೆ. ಎಸ್ ಎಂಇಗಳಿಗಾಗಿ ನಾವು ಪೋರ್ಟಲ್ ಆರಂಭಿಸಿದ್ದು, ಉತ್ಪಾದಕರು ಹಾಗೂ ಗ್ರಾಹಕರಿಗೆ ವೇದಿಕೆ ಸಿದ್ಧಪಡಿಸಿದ್ದೇವೆ. ಇಂತಹ ಕಾರ್ಯಕ್ರಮ ಬೇರೆ ಯಾವುದೇ ರಾಜ್ಯಗಳಲ್ಲಿ ಇಲ್ಲ. ನಮ್ಮ ಏಕಗವಾಕ್ಷಿ ವ್ಯವಸ್ಥೆ ಮತ್ತಷ್ಟು ಸುಧಾರಿಸುವತ್ತ ಗಮನಹರಿಸಿದ್ದೇವೆ. ಬಂಡವಾಳ ಹೂಡಿಕೆ ಹೆಚ್ಚಾದಷ್ಟು ಉದ್ಯೋಗ ಸೃಷ್ಟಿ ಹೆಚ್ಚುತ್ತದೆ, ತೆರಿಗೆ ಹೆಚ್ಚು ಸಂಗ್ರಹವಾಗುತ್ತದೆ" ಎಂದರು.

"ಉತ್ತಮ ಬಂಡವಾಳ ಹೂಡಿಕೆದಾರರಿಗೆ ಪ್ರಶಸ್ತಿ ನೀಡಲು ಎಂ.ಬಿ. ಪಾಟೀಲ್ ಅವರು ನಿರ್ಧರಿಸಿದ್ದು, ಮುಂದೆಯೂ ಇದನ್ನು ಮುಂದುವರಿಸಿಕೊಂಡು ಹೋಗುತ್ತೇವೆ. ಸ್ಥಳೀಯ ಮಟ್ಟದಲ್ಲಿ ಪ್ರಗತಿ ಸಾಧಿಸಿರುವ ಕೈಗಾರಿಕೋದ್ಯಮಿಗಳಿಗೆ ಉತ್ತೇಜಿಸುವ ಕೆಲಸ ಮಾಡಿದ್ದೇವೆ. ಸಂಶೋಧನೆ ಹಾಗೂ ಅಭಿವೃದ್ಧಿ ಮಾಡುವವರಿಗೆ ಶೇ.10ರಷ್ಟು ಪ್ರೋತ್ಸಾಹ ಧನ ನೀಡಲು ಮುಂದಾಗಿದ್ದೇವೆ. ನಾವು ಇನ್ನೋವೇಷನ್ ಎಕ್ಸಿಬಿಷನ್ ಆಯೋಜಿಸಿದ್ದೇವೆ" ಎಂದು ತಿಳಿಸಿದರು.

ಇಂಧನ ಕ್ಷೇತ್ರಕ್ಕೆ ಹೆಚ್ಚು ಬಂಡವಾಳ ಹೂಡಿಕೆಯಾಗಿದೆ ಎಂದು ಕೇಳಿದಾಗ, "ದೇಶದಲ್ಲಿ ಈಗ ಒಂದು ದೇಶ ಒಂದು ಗ್ರಿಡ್ ವ್ಯವಸ್ಥೆ ಜಾರಿಗೆ ಬಂದಿದ್ದು, ಇಲ್ಲಿ ಉತ್ಪಾದಿಸುವ ಇಂಧನವನ್ನು ಯಾವುದೇ ರಾಜ್ಯಕ್ಕೆ ರವಾನಿಸಬಹುದು. ನಮ್ಮ ಇವಿ ಹಾಗೂ ಸೌರಶಕ್ತಿ ನೀತಿ ದೇಶಕ್ಕೆ ಮೊದಲನೆಯದಾಗಿದ್ದು, ವಿದ್ಯುತ್ ಟ್ರಾನ್ಸ್ ಮಿಷನ್ ನಲ್ಲಿ ಆಗುತ್ತಿದ್ದ ಸೋರಿಕೆ ತಡೆಯಲು ನಾವು ಕೈಗೊಂಡಿರುವ ಕ್ರಮ ದೇಶಕ್ಕೆ ಮಾದರಿಯಾಗಿದೆ" ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+