ರಾಜ್ಯಾದ್ಯಂತ ಇಂದು ಬೆಳಗಾವಿಯಲ್ಲಿ ಮರಾಠಿ ಪುಂಡರ ಹಾವಳಿ ಖಂಡಿಸಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆಯನ್ನು ನಡೆಸುತ್ತಿದ್ಧಾರೆ.ಬೆಳಗಾವಿಯಲ್ಲಿ ಮರಾಠಿಗರ ಹವಾಳಿ ಖಂಡಿಸಿ ಕೆರೆ ನೀಡಿರುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರಾಜಾಜಿನಗರ ಮೆಟ್ರೊ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡಪರ ಸಂಘಟನೆಗಳ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪದುಕೊಂಡಿದ್ದಾರೆ.
ಹೌದು,ಕೆಲವಡೆ ಬಂದ್ ನಿರಾಸೆ ತೋರಿದ್ದಾರೆ. ಇನ್ನೂ ಕೆಲವು ಭಾಗದಲ್ಲಿ ತೀವ್ರ ಸ್ವರೂಪವನ್ನು ಪಡೆದುಕೊಳ್ಳತ್ತಿಂದು ಕನ್ನಡಿಗರು ಕೆಂಡವಾಗುತ್ತಿದ್ದಾರೆ.

ಇನ್ನೂ ಕರ್ನಾಟಕ ಬಂದ್‌ಗೆ ಬೆಂಬಲ ಸೂಚಿಸಿ ಮೈಸೂರಿನ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಬಸ್ ಓಡಾಟ ತಡೆಯಲು ಯತ್ನಿಸಿದ ಕನ್ನಡಪರ ಹೋರಾಟಗಾರರ ಸಂಘದ ಮುಖಂಡರನ್ನು ಪೊಲೀಸರು ಬಂಧಿಸಿದರು. ಬಸ್ ನಿಲ್ದಾಣ ಹಾಗೂ ನಗರದ ಪ್ರಮುಖ ವೃತ್ತದಲ್ಲಿ ಪೊಲೀಸರನ್ನು ನಿಯೋಜನ ಮಾಡಲಾಗಿದೆ.
ಬೆಂಗಳೂರಿನಲ್ಲಿ ಮರಾಠಿಗರು, ಎಂಇಎಸ್ ಸಂಘಟನೆಯ ಕುರಿತು ಕನ್ನಡಿಗರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಮೆಜೆಸ್ಟಿಕ್, ಬಸವೇಶ್ವರನಗರ, ಕೆ.ಆರ್.ಪುರ, ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ಮಾಡುತ್ತಿರುವ ಕನ್ನಡಪರ ಹೋರಾಟಗಾರರನ್ನು ಪೊಲೀಸರು ಬಂಧನ ಮಾಡುತ್ತಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಂದ್‌ಗೆ ಅವಕಾಶ ನೀಡುತ್ತಿಲ್ಲ' ಎಂದು ಹೋರಾಟಗಾರರು ಆರೋಪ ಮಾಡುತ್ತಿದ್ದಾರೆ.
ಮಂಡ್ಯದಲ್ಲಿ ಕನ್ನಡ ಪರ ಸಂಘಟನೆಗಳು 12 ಗಂಟೆಗಳ ಬಂದ್ ಆರಂಭಿಸಿದ್ದಾರೆ, ಪ್ರತಿಭಟನಾಕಾರರು ಸಂಜಯ ವೃತ್ತದಲ್ಲಿ ಜಮಾಯಿಸಿ ಪ್ರತಿಭಟನೆ ಮಾಡುತ್ತಿದ್ದಾರೆ.
ಬಂದ್ ಕರೆಗೆ ರಾಮನಗರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಂಗಡಿ-ಮುಂಗಟ್ಟುಗಳು ಎಂದಿನಂತೆ ತೆರೆದಿವೆ. ಬಸ್, ಆಟೊ ಸೇರಿದಂತೆ ವಾಹನಗಳ ಸಂಚಾರ ಯಥಾಸ್ಥಿತಿಯಲ್ಲಿತ್ತು.
ಮೈಸೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
ಮೈಸೂರು ಜಿಲ್ಲೆಯಲ್ಲಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದ ಬಳಿ ಕನ್ನಡ ಪರ ಸಂಘಟನೆಗಳು ಬೆಳ್ಳಂಬೆಳಗ್ಗೆಯೇ ಪ್ರತಿಭಟನೆ ನಡೆಸಿವೆ. ಎಲ್ಲಾ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಕಾರ್ಯನಿರ್ವಹಿಸುತ್ತಿವೆ.
ವಾಟಾಳ್ ನಾಗರಾಜ್ ಬೆಂಗಳೂರಿನಲ್ಲಿ ಕೂತು ಕರ್ನಾಟಕ ಬಂದ್ ಕರೆ ನೀಡಿದ್ದಾರೆ ಎಂದು ಉತ್ತರ ಕರ್ನಾಟಕ ಆಟೊ ಚಾಲಕ ಮಾಲಕರ ಸಂಘದ ಸದಸ್ಯರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಕನ್ನಡಪರ ಸಂಘಟನೆಗಳು ಶನಿವಾರ ಕರೆ ನೀಡಿದ ಬಂದ್‌ಗೆ ದಾವಣಗೆರೆ ಜಿಲ್ಲೆಯಲ್ಲಿ ಯಾವುದೇ ಬೆಂಬಲವನ್ನು ವ್ಯಕ್ತಪಡಿಸಿಲ್ಲ ಬಸ್ ಸಂಚಾರ ತಡೆಯಲು ಯತ್ನಿಸಿದ ಐವರನ್ನು ಪೊಲೀಸರು ಬಂದಿಸಿದ್ದು, ಹೋರಾಟವು ಪ್ರತಿಭಟನೆಗೆ ಮಾತ್ರ ಸೀಮಿತಗೊಂಡಿತು.
ಬಂದ್ ಮಾಡಲು ಕಾರಣವೇನು?
ಇತ್ತೀಚೆಗಷ್ಟೇ ಮರಾಠಿ ಮಾತನಾಡಿ ಎಂದು ಕರ್ನಾಟಕದ ಸಾರಿಗೆ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ಹಾಗೂ ಡ್ರೈವರ್ ಮುಖಕ್ಕೆ ಮಸಿ ಬಳಿ ಮರಾಠಿ ಪುಂಡರು ಹುಚ್ಚಾಟ ಮೆರದಿದ್ದರು.ಇದಲ್ಲದೇ ಹಲ್ಲೆಯನ್ನೂ ಸಹ ನಡೆಸಿದ್ದರು.ಇಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮೇಲೆ ಒತ್ತಡ ಹಾಕಲು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಮಾರ್ಚ್ 22 ಕರ್ನಾಟಕ ಬಂದ್ ಕರೆ ನೀಡಿದ್ದಾರೆ. ಇದಕ್ಕೆ ಆಟೋ, ಕ್ಯಾಬ್ ಓಲಾ ಉಬರ್ ಟಾಕ್ಸಿ, ಕನ್ನಡ ಸಂಘಟನೆಗಳು ಸಾಥ್ ನೀಡಿದ್ದಾರೆ.
ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಬಂದ್‌ಗೆ, ರಾಜ್ಯದ ಹಲವು ಭಾಗಗಳಲ್ಲಿ ಬೆಂಬಲ ವ್ಯಕ್ತವಾಗುತ್ತಿದೆ.ಈ ಬಂದ್‌ನ ಮುಖ್ಯ ಉದ್ದೇಶ ಮಹಾರಾಷ್ಟ್ರದ ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ನಡೆದ ದೌರ್ಜನ್ಯಕ್ಕೆ ತೀವ್ರ ವಿರೋಧ ವ್ಯಕ್ತಪಡಿಸುವು ಆಗಿದೆ.ಆದರೆ ಇಂದು ಕರ್ನಾಟಕ ಬಂದ್‌ಗೆ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಬಂದ್‌ಗೆ ಯಾರೆಲ್ಲಾ ಬೆಂಬಲ
ಓಲಾ- ಉಬರ್ ಚಾಲಕರ ಸಂಘ, ಶಿವರಾಮೇಗೌಡ ಬಣ, ಕರವೇ ಗಜಕೇಸರಿ ಸೇನೆ, ಡಾ.ರಾಜ್ ಕುಮಾರ್ ಅಭಿಮಾನಿ ಸಂಘ, ವೀರ ಕನ್ನಡಿಗರ ಸೇನೆ, ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತು, ರೂಪೇಶ್ ರಾಜಣ್ಣ ಬಣ, ಬೆಂಗಳೂರು ಆಟೋ ಸೇನೆ, ಜಯಭಾರತ್ ಚಾಲಕರ ಸಂಘ, ಕರ್ನಾಟಕ ಜನಪರ ವೇದಿಕೆ, ಆದರ್ಶ ಆಟೋ ಯೂನಿಯನ್, ಗೂಡ್ಸ್ ಚಾಲಕರ ಸಂಘ ಬೆಂಬಲವನ್ನು ನೀಡಿದೆ. BMTC-KSRTC ನೌಕರರ ಸಂಘ, ಲಾರಿ ಚಾಲಕರ ಸಂಘ, ಮದ್ಯ ಮಾರಾಟಗಾರರ ಸಂಘ, ಕೆಲ ಮಾಲ್ ಅಸೋಸಿಯೇಷನ್, ಗಾರ್ಮೆಂಟ್ಸ್ ಅಸೋಸಿಯೇಷನ್, ಹೋಲ್ ಸೆಲ್ ಬಟ್ಟೆ ವ್ಯಾಪಾರಸ್ಥರು, ಹೋಟೆಲ್ ಅಸೋಸಿಯೇಷನ್, ಬೆಂಗಳೂರು ಸಂಚಾರಿ ಆಟೋ ಸೇನೆ, APMC ಮಾರುಕಟ್ಟೆಗಳ ಒಕ್ಕೂಟ, ಖಾಸಗಿ ಸಾರಿಗೆ ಒಕ್ಕೂಟ, ಕರ್ನಾಟಕ ರಕ್ಷಣಾ ವೇದಿಕೆ ಅಭಿಮಾನಿ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಧ್ವನಿ, ಬೀದಿ ಬದಿ ವ್ಯಾಪಾರಿಗಳ ಸಂಘಟನೆ, ಕರ್ನಾಟಕ ರಾಜ್ಯ ರೈತ ಸಂಘಟನೆ, ಖಾಸಗಿ ಶಾಲೆಗಳ ಒಕ್ಕೂಟ ಕ್ಯಾಮ್ಸ್, ಖಾಸಗಿ ಶಾಲೆಗಳ ಒಕ್ಕೂಟ ಕೃಪಾ, ಖಾಸಗಿ ಶಾಲೆಗಳ ಒಕ್ಕೂಟ ರುಪ್ಸ ಪೋಷಕರ ಸಮನ್ವಯ ಸಮಿತಿ, ಪೀಸ್ ಆಟೋ ಸಂಘಟನೆ ಮತ್ತು ಕರುನಾಡು ಕಾರ್ಮಿಕ ಸೇನೆ ಬೆಂಬಲ ನೈತಿಕ ಬೆಂಬಲವನ್ನು ನೀಡಿದೆ.


Click it and Unblock the Notifications